ಬೆಂಗಳೂರು, ಜು. 19: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆಗಳು, ಉದ್ಯೋಗ ಸೃಷ್ಟಿ ಸೇರಿದಂತೆ ವಿವಿಧ ಪ್ರಮುಖ ವಿಷಯಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲೆಯವಾರು ಪರಿಸ್ಥಿತಿಯ ಅವಲೋಕನ ನಡೆಸಿದ ಮುಖ್ಯಮಂತ್ರಿ, ಕುಡಿಯುವ ನೀರಿನ ಪೂರೈಕೆ, ಜಾನುವಾರುಗಳಿಗೆ ಮೇವು ಸಂಗ್ರಹ, ರೈತರಿಗೆ ಅಗತ್ಯ ನೆರವು, ಉದ್ಯೋಗ ಖಾತರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸೇರಿದಂತೆ ಬರ ನಿರ್ವಹಣೆಗೆ ಸಂಬಂಧಿಸಿದ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜನರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವರಾದ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಸಿಎಂ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಗೌರವ್ ಗುಪ್ತಾ ಮತ್ತಿತರರು ಭಾಗವಹಿಸಿದ್ದರು.
