Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಲ್ಲ ವರ್ಗದ ಬಡವರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ‌ ಜಿ.ಪರಮೇಶ್ವರ
  • Bangalore
  • Politics
  • State

ಎಲ್ಲ ವರ್ಗದ ಬಡವರ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ‌ ಜಿ.ಪರಮೇಶ್ವರ

Praja Vahini July 21, 2026 1 minute read
WhatsApp Image 2026-07-21 at 11.52.17
Spread the love

ಬೆಂಗಳೂರು: ಎಲ್ಲ ವರ್ಗದ ಬಡವರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಪರಮೇಶ್ವರ ಅವರು ಹೇಳಿದರು.

ಇಂದು (ಮಂಗಳವಾರ ಜು. 21) ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ 2026-27ನೇ ಸಾಲಿಗೆ ಅರ್ಜಿ ಆಹ್ವಾನಿಸಿರುವ ಕುರಿತ ಕರಪತ್ರವನ್ನು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಮತ್ತು ಇನ್ನಿತರ ಯೋಜನೆಗಳನ್ನು ರೂಪಿಸಿ, ಬ್ರಾಹ್ಮಣ ಸಮುದಾಯದ ಬಡವರ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿದೆ. ಇದನ್ನೂ ಓದಿ: ಚರ್ಮ ಕುಶಲಕರ್ಮಿಗಳ ಸಮಗ್ರ ಅಭಿವೃದ್ಧಿಗೆ ರಾಜ್ಯಮಟ್ಟದ ಸಂವಾದ ಯಶಸ್ವಿ

ನಮ್ಮ ಸರ್ಕಾರವು 2025-26ನೇ ಸಾಲಿನಲ್ಲಿ ನೂತನವಾಗಿ ‘ವಿಪ್ರ ಸ್ವ ಉದ್ಯಮ ನೇರ ಸಾಲ’ ಯೋಜನೆಯನ್ನು ಮಂಡಳಿಯ ವತಿಯಿಂದ ಪ್ರಾರಂಭಿಸಿ, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಹಸು ಸಾಕಾಣಿಕೆಯಂತಹ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ನೀಡಲಾಗಿದೆ. ಈ ಯೋಜನೆಯ ಅಡಿಯಲ್ಲಿ ಕನಿಷ್ಠ ರೂ. 1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ಸಾಲ-ಸಹಾಯಧನ ನೀಡಲಾಗಿರುತ್ತದೆ. ಇದರಲ್ಲಿ ಶೇ 20 ಸಬ್ಸಿಡಿಯನ್ನು ನೀಡಲಾಗಿರುತ್ತದೆ. ಉಳಿಕೆ ಶೇ. 80 ಸಾಲದ ಮೊತ್ತಕ್ಕೆ ಶೇ 4ರಷ್ಟು ಬಡ್ಡಿಯಂತೆ ಒಟ್ಟು 34 ಕಂತುಗಳಲ್ಲಿ ಸಾಲ ಮರು ಪಾವತಿಸಬೇಕಾಗಿದೆ. ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದಲ್ಲಿ ಹಿಂದುಳಿದವರು ಈ ಸಾಲ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು.

2026-27 ನೇ ಸಾಲಿನಲ್ಲಿ “ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ” ಗೆ ಅರ್ಜಿ ಆಹ್ವಾನಿಸಿದ್ದು, ಆಗಸ್ಟ್ 31  ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಬ್ರಾಹ್ಮಣ ಸಮುದಾಯದಲ್ಲಿ ಹಿಂದುಳಿದವರು ಅರ್ಜಿ ಸಲ್ಲಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು, ಮಂಡಳಿಯ ಅಧ್ಯಕ್ಷರಾದ ಅಸಗೋಡು ಜಯಸಿಂಹ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ ಹಾಗೂ ಮಂಡಳಿಯ ನಿರ್ದೇಶಕರುಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಚರ್ಮ ಕುಶಲಕರ್ಮಿಗಳ ಸಮಗ್ರ ಅಭಿವೃದ್ಧಿಗೆ ರಾಜ್ಯಮಟ್ಟದ ಸಂವಾದ ಯಶಸ್ವಿ
Next: ಲಿಡ್‌ಕರ್ ವ್ಯವಸ್ಥಾಪಕ ನಿರ್ದೇಶಕರನ್ನು ಅಭಿನಂದಿಸಿದ ಡಿ ಎಸ್ ಎಸ್ ಅಧ್ಯಕ್ಷರು

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.