Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರಶ್ನೆ ಪತ್ರಿಕೆ ಸೋರಿಕೆ ಎಂಬುದು ರಾಜಕೀಯ ಪಕ್ಷಗಳ ವಿಚಾರವಲ್ಲ, ದೇಶದ ಭವಿಷ್ಯದ ವಿಚಾರ: ಸಿಎಂ ಡಿಕೆಶಿ
  • Bangalore
  • Politics
  • State

ಪ್ರಶ್ನೆ ಪತ್ರಿಕೆ ಸೋರಿಕೆ ಎಂಬುದು ರಾಜಕೀಯ ಪಕ್ಷಗಳ ವಿಚಾರವಲ್ಲ, ದೇಶದ ಭವಿಷ್ಯದ ವಿಚಾರ: ಸಿಎಂ ಡಿಕೆಶಿ

Praja Vahini July 23, 2026 1 minute read
WhatsApp Image 2026-07-23 at 16.16.28
Spread the love

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ಎಂಬುದು ರಾಜಕೀಯ ಪಕ್ಷಗಳ ವಿಚಾರವಲ್ಲ, ದೇಶದ ಭವಿಷ್ಯದ ವಿಚಾರ. ಪಾರದರ್ಶಕ, ಶಕ್ತಿಯುತ, ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಯಾವುದೇ ಪರೀಕ್ಷೆಗಳು ನಡೆದರು ಅವು ಪಾರದರ್ಶಕವಾಗಿರಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದರು.

ನಗರದಲ್ಲಿ ಇಂದು ಗುರುವಾರ ಜುಲೈ 23ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಡೀ ಪ್ರಪಂಚ ಭಾರತದ ಯುವ ಜನತೆಯ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದೆ. ನಮ್ಮ ದೇಶ ಪ್ರತಿಭಾವಂತರ ದೇಶ. ಇಡೀ ಪ್ರಪಂಚದಲ್ಲಿಯೇ ನಮ್ಮಲ್ಲಿ ಇರುವಷ್ಟು ಪ್ರತಿಭೆಗಳು ಎಲ್ಲಿಯೂ ಇಲ್ಲ ಎಂದು ಅನೇಕರು ಒಪ್ಪಿಕೊಂಡಿದ್ದಾರೆ. ನಮ್ಮನ್ನು ಇಡೀ ಪ್ರಪಂಚವೇ ನೋಡುತ್ತಿರುವ ಹೊತ್ತಿನಲ್ಲಿ ನಮ್ಮ ಶಿಕ್ಷಣದ ಗುಣಮಟ್ಟವನ್ನು ನಾವು ಕಾಪಾಡಬೇಕಿದೆ ಎಂದರು.

ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು.

ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. ವೈಫಲ್ಯವನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು. ಒಬ್ಬ ವ್ಯಕ್ತಿ ರಾಜಿನಾಮೆ ಕೊಡುವುದರಿಂದ ಏನಾಗಲಿದೆ? ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದಾಗ ಇಂತಹ ಘಟನೆ ಬಗ್ಗೆ ಯಾರಾದರೂ ಜವಾಬ್ದಾರಿ ಹೊರಬೇಕಲ್ಲವೇ? ಇದಕ್ಕೆ ಯಾರು ಹೊಣೆ? ಎಂದು ಕಿಡಿಕಾರಿದರು. ಇದನ್ನೂ ಓದಿ: ಸಮಗ್ರ ಕ್ಲಸ್ಟರುಗಳನ್ನು ಅಭಿವೃದ್ಧಿ ಪಡಿಸಲು ಒತ್ತು: ಎಂ ಬಿ ಪಾಟೀಲ

ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ಚರ್ಚೆಯಾಗಬೇಕು. ಟೀಕೆ ಮಾಡಿದಾಗ ನಾವು ಹಾಗೂ ನೀವು ಇಬ್ಬರೂ ಒಪ್ಪಿ ತಿದ್ದಿಕೊಳ್ಳಬೇಕು. ನಾವು ಯುವಕರ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದ್ದೇವೆ. ಈಗಾಗಲೇ ಸುಮಾರು 100 ಕ್ಕೂ ಹೆಚ್ಚು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂದರು.

ಮಾಧ್ಯಮಗಳು ಪ್ರಶ್ನೆ ಮಾಡಬೇಕಿತ್ತು

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಪ್ರತಿಪಕ್ಷಗಳ, ಎಲ್ಲರ, ಯುಜನತೆಯ ಹಕ್ಕು. ಇಂತಹ ಸಂದರ್ಭದಲ್ಲಿ ಅವರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ, ತೊಂದರೆ ನೀಡಲಾಗಿದೆ. ಸುದ್ದಿ ಮಾಧ್ಯಮಗಳ ಮೇಲೆ ನಿರ್ಬಂದ ಹೇರಿ, ಧಮ್ಕಿ ಹಾಕಿ ಪ್ರಸಾರ ಆಗದಂತೆ ನೋಡಿಕೊಳ್ಳಲಾಗಿದೆ. ಅಲ್ಲಿದ್ದವರು ಮಾಡಿದ ವಿಡಿಯೋಗಳು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಮಾಧ್ಯಮಗಳು ಪ್ರಜಾಪ್ರಭುತ್ವದ ಅಂಗ. ಹೀಗಿದ್ದಾಗ ಮಾಧ್ಯಮಗಳು ಪ್ರಶ್ನೆ ಮಾಡದೇ ಏನು ಮಾಡುತ್ತಿದ್ದವು. ನೀವುಗಳು ಏಕೆ ಪ್ರತಿಭಟನೆ ಮಾಡಲಿಲ್ಲ. ಪ್ರಶ್ನೆ ಮಾಡದ ನಿಮ್ಮಗಳ ತಪ್ಪೂ ಇದೇ. ಸಾಮಾಜಿಕ ಜಾಲತಾಣದಲ್ಲಿ ಬಂದ ಮೇಲೆ ಮಾಧ್ಯಮಗಳು ವಿಷಯಗಳನ್ನು ಎತ್ತಿಕೊಂಡಿವೆ. ಇದು ಹೊಸ ತಲೆಮಾರಿನ ಹೋರಾಟ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಅಗಲಿದ ಬಸವರಾಜಪ್ಪಗೌಡ ದರ್ಶನಪುರ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ
Next: ಹೊರವರ್ತುಲ ರಸ್ತೆ ಮರು ಅಭಿವೃದ್ಧಿಗೆ 450 ಕೋಟಿ ಅನುದಾನ: ಕೃಷ್ಣ ಬೈರೇಗೌಡ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.