Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹೊರವರ್ತುಲ ರಸ್ತೆ ಮರು ಅಭಿವೃದ್ಧಿಗೆ 450 ಕೋಟಿ ಅನುದಾನ: ಕೃಷ್ಣ ಬೈರೇಗೌಡ
  • Bangalore
  • Politics
  • State

ಹೊರವರ್ತುಲ ರಸ್ತೆ ಮರು ಅಭಿವೃದ್ಧಿಗೆ 450 ಕೋಟಿ ಅನುದಾನ: ಕೃಷ್ಣ ಬೈರೇಗೌಡ

Praja Vahini July 25, 2026 1 minute read
WhatsApp Image 2026-07-25 at 18.17.37
Spread the love

ಬೆಂಗಳೂರು: ಕೆ.ಆರ್. ಪುರಂನಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗಿನ ಹೊರವರ್ತುಲ ರಸ್ತೆಯನ್ನು (ORR) ಆಮೂಲಾಗ್ರವಾಗಿ ಮೇಲ್ದರ್ಜೆಗೇರಿಸಲು, ಮೂಲಸೌಕರ್ಯ ಸುಧಾರಿಸಲು ಹಾಗೂ ವಾಹನ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರವು ₹450 ಕೋಟಿ ರೂ. ಅನುದಾನ ಮೀಸಲಿಟ್ಟಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಗೋಲ್ಡ್‌ಮನ್ ಸ್ಯಾಕ್ಸ್, ಹೆಲಿಯೊಸ್ ಬಿಸಿನೆಸ್ ಪಾರ್ಕ್, ಕಡುಬೀಸನಹಳ್ಳಿಯಲ್ಲಿ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ORRCA), ಐಟಿ ಪಾರ್ಕ್ ಮಾಲೀಕರು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಸಾಮಾನ್ಯರೊಂದಿಗೆ ಶನಿವಾರ ಸಮಾಲೋಚನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಹೊರ ವರ್ತುಲ ರಸ್ತೆ ವ್ಯಾಪ್ತಿಯಲ್ಲಿರುವ ಪ್ರಮುಖ ಜಂಕ್ಷನ್‌ಗಳು, ಸರ್ವಿಸ್ ರಸ್ತೆಗಳು, ಪಾದಚಾರಿ ಮಾರ್ಗಗಳು, ಮೆಟ್ರೋ ಕಾಮಗಾರಿಗಳು, ಮಳೆನೀರು ಚರಂಡಿಗಳು, ಸಾರ್ವಜನಿಕ ಸಾರಿಗೆ ಸಂಪರ್ಕ, ವಾಹನ ನಿಲುಗಡೆ ವ್ಯವಸ್ಥೆ ಹಾಗೂ ನಾಗರಿಕರ ಸುರಕ್ಷತೆಯನ್ನು ಒಳಗೊಂಡ ಹಲವು ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.

ಕಾರಿಡಾರ್ ಎದುರಿಸುತ್ತಿರುವ ಸವಾಲುಗಳು ಹಾಗೂ ಯೋಜನೆಯ ಹಿನ್ನೆಲೆ ಹೊರವರ್ತುಲ ರಸ್ತೆಯು ದೇಶದ ಆರ್ಥಿಕತೆಗೆ ಮತ್ತು ಐಟಿ ಕ್ಷೇತ್ರದ ಅಭಿವೃದ್ಧಿಗೆ ಅತ್ಯಂತ ಪ್ರಮುಖವಾದ ಕಾರಿಡಾರ್ ಆಗಿದೆ. ಆದರೆ, ಕಳೆದ 30-40 ವರ್ಷಗಳಿಂದ ಅನಧಿಕೃತ ಹಾಗೂ ನಿಯಮಬಾಹಿರವಾಗಿ ಲೇಔಟ್‌ಗಳು ಮತ್ತು ಕಟ್ಟಡಗಳು ನಿರ್ಮಾಣಗೊಂಡಿದ್ದರಿಂದ ಇಂದು ರಸ್ತೆ ಅಗಲ, ಒಳಚರಂಡಿ ಮತ್ತು ಪಾದಚಾರಿ ಮಾರ್ಗಗಳ ಅಭಾವ ಎದುರಾಗಿದೆ. ಉದಾಹರಣೆಗೆ ಜಯನಗರದಲ್ಲಿ ಶೇಕಡಾ 23 ರಷ್ಟು ಜಾಗ ರಸ್ತೆಗೆ ಲಭ್ಯವಿದ್ದರೆ, ಈ ಈಸ್ಟ್ ಝೋನ್‌ನಲ್ಲಿ ಶೇಕಡಾ 8 ರಷ್ಟು ಮಾತ್ರ ಲಭ್ಯವಿದೆ. ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ಎಂಬುದು ರಾಜಕೀಯ ಪಕ್ಷಗಳ ವಿಚಾರವಲ್ಲ, ದೇಶದ ಭವಿಷ್ಯದ ವಿಚಾರ: ಸಿಎಂ ಡಿಕೆಶಿ

ಜೊತೆಗೆ ಅನಧಿಕೃತ ಕಟ್ಟಡಗಳಿಂದಾಗಿ ಪಾರ್ಕಿಂಗ್ ಜಾಗವಿಲ್ಲದೆ ವಾಹನಗಳು ರಸ್ತೆಯಲ್ಲೇ ನಿಲ್ಲುವುದರಿಂದ ಹಾಗೂ ನಿಯಮಬಾಹಿರವಾಗಿ ಕ್ರಾಸ್ ಆಗುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ. ಈ ಸಮಸ್ಯೆಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸರ್ಕಾರವು 450  ಕೋಟಿ ರೂ. ಬಿಡುಗಡೆ ಮಾಡಿದ್ದು, ಅಗತ್ಯವಿದ್ದರೆ ಹೆಚ್ಚುವರಿ ಅನುದಾನ ನೀಡಲು ಬದ್ಧವಾಗಿದೆ. ಕೇವಲ ರಸ್ತೆಯ ಮೇಲ್ಮೈ ಸರಿಪಡಿಸುವುದರಿಂದ ದಟ್ಟಣೆ ಕಡಿಮೆಯಾಗುವುದಿಲ್ಲ, ಬದಲಾಗಿ ಮೂಲಸೌಕರ್ಯ ಸರಿಪಡಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

 

 

About the Author

Praja Vahini

Editor

View All Posts

Spread the love

Post navigation

Previous: ಪ್ರಶ್ನೆ ಪತ್ರಿಕೆ ಸೋರಿಕೆ ಎಂಬುದು ರಾಜಕೀಯ ಪಕ್ಷಗಳ ವಿಚಾರವಲ್ಲ, ದೇಶದ ಭವಿಷ್ಯದ ವಿಚಾರ: ಸಿಎಂ ಡಿಕೆಶಿ
Next: ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.