Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ
  • Bangalore
  • Politics
  • State

ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ

Praja Vahini July 25, 2026
WhatsApp Image 2026-07-25 at 18.36.54
Spread the love

ನವದೆಹಲಿ: ಕಳೆದ ತಿಂಗಳಿನಿಂದ (ಜೂನ್) ದೆಹಲಿಯಲ್ಲಿರುವ ಜಂತರ್ ಮಂತರ್ ನಲ್ಲಿ  ಬೃಹತ್ ಪ್ರತಿಭಟನೆ ದೇಶ ಮಾತ್ರವಲ್ಲದೆ ವಿದೇಶದಿಂದ ಯುವಕರು ಬಂದು ಬಾಗಿಯಾಗಿ ಪ್ರತಿಭಟನೆ ನಡೆಸಿದ್ದಕ್ಕೆ ಇದೀಗ ಕೇಂದ್ರ ಶಿಕ್ಷಣ ಸಚಿವ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹೌದು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾಕ್ರೋಚ್ ಜನತಾ ಪಾರ್ಟಿ ನಡೆಸಿದ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ್ ಇಂದು (ಶನಿವಾರ ಜು. 25) ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ನಿನ್ನೆ (ಶುಕ್ರವಾರ) ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಸಿಜೆಪಿ ವಕ್ತಾರರು ತಮ್ಮ 3 ಬೇಡಿಕೆಗಳನ್ನು ಸಲ್ಲಿಸಿದ್ದರು. ಅದರಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಮೊದಲ ಮತ್ತು ಮುಖ್ಯವಾದ ಬೇಡಿಕೆಯಾಗಿತ್ತು. ಸಂಧಾನ ಮಾತುಕತೆಯ ವೇಳೆ ಉಳಿದ 2 ಬೇಡಿಕೆಗಳಿಗೆ ಕೂಡಲೇ ಒಪ್ಪಿಗೆ ಸೂಚಿಸಿದ್ದ ಕೇಂದ್ರ ಸಚಿವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಇಂದು ಮಧ್ಯಾಹ್ನದವರೆಗೆ ಸಮಯ ಕೋರಿದ್ದರು.

ಇದೀಗ ಕೊನೆಗೂ ಸಿಜೆಪಿ ಹಾಗೂ ಪ್ರತಿಭಟನಾಕಾರರ ಬೇಡಿಕೆಗೆ ಮಣಿದಿರುವ ಕೇಂದ್ರ ಸರ್ಕಾರ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಪಡೆದಿದೆ. ಅಲ್ಲಿಗೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಎಲ್ಲ ಬೇಡಿಕೆಗಳೂ ಈಡೇರಿದಂತಾಗಿದೆ. ಇದನ್ನೂ ಓದಿ: ಹೊರವರ್ತುಲ ರಸ್ತೆ ಮರು ಅಭಿವೃದ್ಧಿಗೆ 450 ಕೋಟಿ ಅನುದಾನ: ಕೃಷ್ಣ ಬೈರೇಗೌಡ

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಧರ್ಮೇಂದ್ರ ಪ್ರಧಾನ್, “ಜಂತರ್ ಮಂತರ್‌ನಲ್ಲಿ ಹಾಗೂ ದೇಶಾದ್ಯಂತ ಇರುವ ಪರಿಸ್ಥಿತಿಯ ಲಾಭವನ್ನು ದೇಶವಿರೋಧಿ ಶಕ್ತಿಗಳು ಪಡೆಯಬಾರದು. ದೇಶವು ಒಗ್ಗಟ್ಟಿನಿಂದ ಇರಬೇಕು. ಭಾರತದ ವಿದ್ಯಾರ್ಥಿಗಳು ಕಾನೂನು ಸಂಕಷ್ಟದಲ್ಲಿ ಸಿಲುಕಿಕೊಳ್ಳದೆ ತಮ್ಮ ಅಧ್ಯಯನ ಮತ್ತು ವೃತ್ತಿಜೀವನದ ಮೇಲೆ ಗಮನ ಹರಿಸಬೇಕು ಎಂಬ ಕಾರಣಕ್ಕಾಗಿ ನಾನು ಪ್ರಧಾನಮಂತ್ರಿಯವರಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಹೊರವರ್ತುಲ ರಸ್ತೆ ಮರು ಅಭಿವೃದ್ಧಿಗೆ 450 ಕೋಟಿ ಅನುದಾನ: ಕೃಷ್ಣ ಬೈರೇಗೌಡ
Next: ಚಿತ್ರದುರ್ಗದ ಭೋವಿ ಗುರುಪೀಠಕ್ಕೆ ಸಿಎಂ ಡಿಕೆಶಿ ಭೇಟಿ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.