Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಾದಕ ವಸ್ತುಗಳಿಂದ ದೂರ ಇರುವ ಸಂಕಲ್ಪ ಮಾಡಿ; ಶಾಸಕ ದರ್ಶನಾಪುರ
  • Politics
  • State
  • ಶಹಾಪುರ

ಮಾದಕ ವಸ್ತುಗಳಿಂದ ದೂರ ಇರುವ ಸಂಕಲ್ಪ ಮಾಡಿ; ಶಾಸಕ ದರ್ಶನಾಪುರ

Praja Vahini August 1, 2026
Screenshot_2026-08-01-19-40-22-77_6012fa4d4ddec268fc5c7112cbb265e7
Spread the love

ಶಹಾಪುರ: ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಮಾದಕ ವಸ್ತುಗಳಿಂದ ದೂರ ಇರುವ ಸಂಕಲ್ಪ ಮಾಡಿ, ಪ್ರಸ್ತುತ ದುಶ್ಚಟಗಳಿಂದ ಮುಕ್ತರನ್ನಾಗಿ ಮಾಡುವ ನಿಟ್ಟಿನಲ್ಲಿ ಮಹಾಂತ ಶ್ರೀಗಳ ಜನ್ಮದಿನದಂದು ಜನರಲ್ಲಿರುವ ದುಶ್ಚಟಗಳನ್ನು ಬಿಡಿಸಲು ತಾಲೂಕ ಮಟ್ಟದಲ್ಲಿ ವ್ಯಸನಮುಕ್ತ ದಿನಾಚರಣೆ ಆಚರಣೆ ಮಾಡುತ್ತಿರುವುದು ನಿಜಕ್ಕೂ ಮಾದರಿಯಾದದ್ದು ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಧ್ಯಪಾನ ಸ್ವಯಂ ಮಂಡಳಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಯಾದಗಿರಿ ಹಾಗೂ ತಾಲೂಕ ಆಡಳಿತ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಚಿತ್ತರಗಿ ಇಳಕಲ್ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನದ ಪರಮ ಪೂಜ್ಯರಾದ ಡಾ. ಮಹಾಂತ ಶಿವಯೋಗಿಗಳ ಜಯಂತಿ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಮಾನಗಳಲ್ಲಿ ವ್ಯಾಪಕವಾಗಿ ಬಳಸುತ್ತಿರುವ ಮಾದಕ ವಸ್ತುಗಳ ಬಳಕೆ, ಧೂಮಪಾನ ಮತ್ತು ಮಧ್ಯಪಾನಗಳಂತಹ ದಶ್ಚಟಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ. ಸಾಮಾಜಿಕ ಕಳಕಳಿಯ ಹಾಗೂ ಸಾಮಾಜಿಕ ಬದ್ಧತೆಯಿಂದ ಸಂಯಮ ಮಂಡಳಿ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಾ ಸಮಾಜದಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದರು.

ಚಿತ್ತರಗಿ ಶ್ರೀವಿಜಯ ಮಹಾಂತೇಶ್ವರ ಸಂಸ್ಥಾನ ಮಠ ಇಳಕಲ್ಲಿನ ಪೂಜ್ಯ ಗುರುಮಹಾಂತ ಸ್ವಾಮಿಗಳು ಸಾನೀಧ್ಯ ವಹಿಸಿಕೊಂಡು ಮಾತನಾಡಿದರು. ಬೆಂಗಳೂರಿನ ವಿಶ್ವ ವಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಪೂಜ್ಯ ಜಗದ್ಗುರು ಡಾ.ನಿಶ್ಚಲಾನಂದನಾಥ ಮಹಾಸ್ವಾಮಿಗಳು ಆಶೀವರ್ಚನ ನೀಡಿದರು.

ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲಾದಪುರ ಮಾತನಾಡಿ ವ್ಯಸನ ಮುಕ್ತ ಸಮಾಜಕ್ಕೆ ನಮ್ಮ ನಿಗಮ ಮಂಡಳಿ ಸಂಪೂರ್ಣ ಜವಾಬ್ದಾರಿಯೊಂದಿಗೆ ಇಡೀ ರಾಜ್ಯದ್ಯಂತ ಆಚರಣೆ ಮಾಡುತ್ತಿದೆ. ಆದರೆ ನಮ್ಮ ಜಿಲ್ಲೆಯ ಜಿಲ್ಲಾಧಿಕಾರಿಗಳು ಇದಕ್ಕೆ ಸ್ಪಂದಿಸುತ್ತಿಲ್ಲಾ ಎಂದು ಬೇಸರ ವ್ಯಕ್ತಪಡಿಸಿದರು. ಬಿಡಿ ಸಿಗರೇಟ್ ಗುಡ್ಕಾ ಸಂಪೂರ್ಣ ನಿಷೇಧ ಮಾಡುತ್ತಾ ವ್ಯಸನ ಮುಕ್ತ ಗ್ರಾನ ಪ್ರಶಸ್ತಿಗೆ ಕೊಪ್ಪಳ ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ಲಭಿಸಿದ್ದು ಸಂತೋಷ ತಂದಿದೆ ಎಂದರು. ಇದೇ ವೇಳೆ ತಾಲೂಕಿನ ಅಣಬಿ ಗ್ರಾಮದಲ್ಲಿ ಮಧ್ಯಪಾನ ನಿಷೇಧ ಹೋರಾಟಕ್ಕೆ ನಿಂತ ದಿಟ್ಟ ಮಹಿಳೆ ಶೈಲಜಾ ಹಾಗೂ ಅವರಿಗೆ ಬೆಂಬಲವಾಗಿ ನಿಂತ ಗ್ರಾಮ ಪಂಚಾಯಿತಿ ಪಿಡಿಓ ರಮೇಶ ನಾಯಕ ಅವರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.

ಈ ಸಮಾರಂಭದಲ್ಲಿ ವೇದಿಕೆಯ ಮೇಲೆ ಚರಬಸವೇಶ್ವರ ಸಂಸ್ಥಾನ ಗದ್ದುಗೆಯ ಬಸವಯ್ಯ ಶರಣರು, ಭೀಮರಾಯನಗುಡಿ ಕಾಡಾ ಅಧ್ಯಕ್ಷ ಬಾಬು ಹೊನ್ನಾ ನಾಯಕ, ನಗರ ಯೋಜನ ಪ್ರಾಧಿಕಾರ ಅಧ್ಯಕ್ಷ ಸಿದ್ದು ಆರಭೋಳ, ತಹಸೀಲ್ದಾ ಸಿದ್ದರೂಢ ಬನ್ನಿಕೊಪ್ಪ, ತಾ.ಪಂ ಇಓ ಬಸವರಾಜ ಶರಬೈ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಬೂದಯ್ಯ ಮತ್ತು ಮಲ್ಲಯ್ಯ ಹಿರೇಮಠ ತಂಡದಿಂದ ಪ್ರಾರ್ಥನೆ ಗೀತೆ ನೆರವೇರಿತು. ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಎನ್.ಎಸ್ ಮಹೇಶ ಸರ್ವರನ್ನು ಸ್ವಾಗತಿಸಿದರು. ಜ್ಯೋತಿಲತ ತಡಬಿಡಿಮಠ ನಿರೂಪಿಸಿದರು. ರಂಗನಾಥ ದೊರೆ ವಂದಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಕಾವೇರಿ ವಿಷಯದಲ್ಲಿ ಸಿಎಂ ಮೊಸಳೆ ಕಣ್ಣೀರು: ವಿಜಯೇಂದ್ರ
Next: ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಒಟ್ಟಾಗಿ ಕೆಲಸ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

Views:

124

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.