Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ಯತೀಂದ್ರ
  • Politics
  • State
  • ಮೈಸೂರು

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ಯತೀಂದ್ರ

Praja Vahini August 6, 2026 1 minute read
WhatsApp Image 2026-08-06 at 17.41.00
Spread the love

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸುವ ಉದ್ದೇಶದಿಂದ ಮುಂದಿನ 2 ದಿನಗಳ ಕಾಲ ಜಿಲ್ಲೆಯ ವಿವಿಧ ತಾಲ್ಲೂಕುಗಳಿಗೆ ಭೇಟಿ ನೀಡಿ ಸ್ಥಳೀಯ ಪರಿಸ್ಥಿತಿಯ ಅವಲೋಕನ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾತ್ಕಾಲಿಕವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ವಹಿಸಿಕೊಂಡಿದ್ದ ಸಂದರ್ಭದಲ್ಲಿ ಅಧಿಕೃತವಾಗಿ ಜಿಲ್ಲೆಗೆ ಭೇಟಿ ನೀಡಲು ಅವಕಾಶವಾಗಿರಲಿಲ್ಲ. ಇದೀಗ ಸಚಿವ ಸಂಪುಟ ರಚನೆಯ ಬಳಿಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ಖಚಿತವಾಗಿರುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡುತ್ತಿದ್ದೇನೆ ಎಂದು ಹೇಳಿದರು.

ಜಿಲ್ಲೆಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಅಭಿವೃದ್ಧಿ, ಬರ ಪರಿಸ್ಥಿತಿ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದ್ದು, ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಸಮನ್ವಯದಿಂದ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅವರು ಮೈಸೂರಿನ ಪ್ರಸಿದ್ಧ ಉರಿಲಿಂಗಪೆದ್ದಿ ಮಠಕ್ಕೆ ಭೇಟಿ ನೀಡಿ, ಮಠಾಧೀಶರಾದ ಪರಮಪೂಜ್ಯ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಆಶೀರ್ವಾದ ಪಡೆದರು. ಸಮಾಜದಲ್ಲಿ ಸೌಹಾರ್ದತೆ, ಮಾನವೀಯ ಮೌಲ್ಯಗಳು ಹಾಗೂ ಸೇವಾ ಮನೋಭಾವವನ್ನು ಬಲಪಡಿಸುವಲ್ಲಿ ಧಾರ್ಮಿಕ ಸಂಸ್ಥೆಗಳು ಮಹತ್ವದ ಪಾತ್ರ ವಹಿಸುತ್ತಿವೆ. ಇಂತಹ ಮಠಗಳ ಮಾರ್ಗದರ್ಶನ ಮತ್ತು ಆಶೀರ್ವಾದದಿಂದ ಸಮಾಜದ ಅಭಿವೃದ್ಧಿಗೆ ಇನ್ನಷ್ಟು ಶಕ್ತಿ ದೊರೆಯಲಿದೆ ಎಂದು ಸಚಿವರು ಹೇಳಿದರು.

ಹಿರಿಯ ಶಾಸಕರಾದ ಮಹದೇವಪ್ಪ  ಹಾಗೂ ತನ್ವಿರ್ ಸೇಠ್ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಅನುಭವಿ ರಾಜಕಾರಣಿಗಳಾಗಿದ್ದು, ಅವರ ಮಾರ್ಗದರ್ಶನ ಹಾಗೂ ಸಲಹೆಗಳನ್ನು ಪಡೆದು ಜಿಲ್ಲೆಯ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಕೆಲಸ ಮಾಡಲಾಗುವುದು ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಸಂಘಟನೆ ಮಾಡಿ, ನಾಯಕತ್ವ ಬೆಳೆಸಿಕೊಳ್ಳಿ: ಸಿಎಂ ಡಿ ಕೆ ಶಿವಕುಮಾರ್

ಭಾರತ ದೇಶವು ಯಾವುದೇ ಒಂದು ಜಾತಿ ಅಥವಾ ಧರ್ಮದ ಆಧಾರದ ಮೇಲೆ ನಿರ್ಮಾಣವಾಗಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಧರ್ಮನಿರಪೇಕ್ಷ ಮೌಲ್ಯಗಳ ಆಧಾರದ ಮೇಲೆ ರಾಷ್ಟ್ರ ನಿರ್ಮಾಣವಾಗಿದ್ದು, ಎಲ್ಲ ಸಮುದಾಯಗಳಿಗೂ ಸಮಾನ ಅವಕಾಶ ಹಾಗೂ ಗೌರವ ನೀಡುವ ಪರಂಪರೆಯನ್ನು ನಮ್ಮ ದೇಶ ಹೊಂದಿದೆ ಎಂದು ಸಚಿವರು ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ಸಂಘಟನೆ ಮಾಡಿ, ನಾಯಕತ್ವ ಬೆಳೆಸಿಕೊಳ್ಳಿ: ಸಿಎಂ ಡಿ ಕೆ ಶಿವಕುಮಾರ್
Next: ನೆಲಮಂಗಲ ತಾಲ್ಲೂಕಿನ ಬರ ಪರಿಸ್ಥಿತಿ ವೀಕ್ಷಣೆ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.