Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಲಮಂಡಳಿ ನೌಕರರ ವಿಶೇಷ ಸ್ಥಳೀಯ ಭತ್ಯೆ ಪರಿಷ್ಕರಣೆಗೆ ಸರ್ಕಾರಕ್ಕೆ ಪ್ರಸ್ತಾವನೆ
  • Bangalore
  • Front news
  • Politics
  • State

ಜಲಮಂಡಳಿ ನೌಕರರ ವಿಶೇಷ ಸ್ಥಳೀಯ ಭತ್ಯೆ ಪರಿಷ್ಕರಣೆಗೆ ಸರ್ಕಾರಕ್ಕೆ ಪ್ರಸ್ತಾವನೆ

Praja Vahini August 7, 2026 1 minute read
933bde70-fdc4-499c-a36f-88f69beb337f
Spread the love

ಬೆಂಗಳೂರು: ಬೆಂಗಳೂರು ನಗರದ ಹೊರವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೆಂಗಳೂರು ಜಲಮಂಡಳಿ (BWSSB) ನೌಕರರ *ವಿಶೇಷ ಸ್ಥಳೀಯ ಭತ್ಯೆ (Special Local Allowance)* ಪರಿಷ್ಕರಣೆ ಹಾಗೂ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷೆ *ಡಾ. ಎನ್. ಮಂಜುಳ* ಭರವಸೆ ನೀಡಿದರು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೌಕರರ ಸಂಘ ಹಾಗೂ *The Bangalore Water Supply and Sewerage Board Sanitary Workers Union ವತಿಯಿಂದ ಜಲಮಂಡಳಿ ಕಚೇರಿಯಲ್ಲಿ ಆಯೋಜಿಸಿದ್ದ  ವೇತನ ಪರಿಷ್ಕರಣೆ ಒಪ್ಪಂದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

2023ರ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಲಮಂಡಳಿ ನೌಕರರ ವೇತನ ಪರಿಷ್ಕರಣೆ ಜಾರಿಯಾಗಿರುವುದು ಸಂತಸದ ವಿಷಯವಾಗಿದೆ. ನೌಕರರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಮಹತ್ವದ ನಿರ್ಧಾರಕ್ಕೆ ಸಹಕರಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಹಾಗೂ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ ಅವರಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಸಂಬಳ ಹೆಚ್ಚಳದೊಂದಿಗೆ ನೌಕರರ ಜವಾಬ್ದಾರಿಯೂ ಹೆಚ್ಚಾಗುತ್ತದೆ. ದೇಶದ ಅತ್ಯುತ್ತಮ ನೀರು ಸರಬರಾಜು ಸಂಸ್ಥೆಗಳಲ್ಲಿ ಒಂದಾದ ಜಲಮಂಡಳಿಯ ಪ್ರತಿಷ್ಠೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬ ನೌಕರರ ಮೇಲಿದೆ ಎಂದು ಅವರು ಹೇಳಿದರು.

ನೌಕರರ ಪರಿಶ್ರಮ ಮತ್ತು ಬದ್ಧತೆಯಿಂದ ಜಲಮಂಡಳಿ ಇಂದು ಉತ್ತಮ ಕಾರ್ಯಕ್ಷಮತೆಯನ್ನು ಸಾಧಿಸಿದೆ. ಇದೇ ಸಮರ್ಪಣಾ ಮನೋಭಾವದೊಂದಿಗೆ, ಸ್ವಂತ ಸಂಸ್ಥೆ ಎಂಬ ಭಾವನೆಯಿಂದ ಸಾರ್ವಜನಿಕ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ನೌಕರರ ಕಲ್ಯಾಣ, ಸೇವಾ ಹಿತಾಸಕ್ತಿ ಮತ್ತು ವೃತ್ತಿಪರ ಬೆಳವಣಿಗೆಗೆ ಜಲಮಂಡಳಿ ಆಡಳಿತ ಸದಾ ಬದ್ಧವಾಗಿದ್ದು, ಅವರ ನ್ಯಾಯಯುತ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಡಾ. ಮಂಜುಳಾ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಜಲಮಂಡಳಿಯ ನೂತನ ಮುಖ್ಯ ಆಡಳಿತಾಧಿಕಾರಿ ಪ್ರಸನ್ನಕುಮಾರ್, ಆರ್ಥಿಕ ಸಲಹೆಗಾರ ಸುಬ್ಬರಾಮಯ್ಯ, ಪ್ರಧಾನ ಮುಖ್ಯ ಅಭಿಯಂತರ ದಲಾಯತ್,  ಸಿಬ್ಬಂದಿ ನಿರ್ವಹಣಾಧಿಕಾರಿ ಎಂ.ಆರ್. ಸಂತೋಷ್, ಜಲಮಂಡಳಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಸ್ಯಾನಿಟರಿ ವರ್ಕರ್ಸ್ ಯೂನಿಯನ್ ಅಧ್ಯಕ್ಷ ಸಿದ್ದಪ್ಪ ಸೇರಿದಂತೆ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಅಲ್ಲಾ ಪಟೇಲ್‌ರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿ
Next: ಕೈಮಗ್ಗ ಕ್ಷೇತ್ರಕ್ಕೆ ವಿಶೇಷ ಉತ್ತೇಜನ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.