Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ
  • Bangalore
  • Politics
  • State

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

Praja Vahini August 24, 2026 1 minute read
WhatsApp Image 2026-08-24 at 15.15.24
Spread the love

ಬೆಂಗಳೂರು: ರಾಜ್ಯದಲ್ಲಿನ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ನೂತನವಾಗಿ ಘೋಷಿಸಲಾಗಿರುವ ಬೌದ್ಧ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಹಿಂಪಡೆದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ ಸ್ಥಾಪಿಸಬೇಕು ಎಂದು ಬೌದ್ಧ ಬಿಕ್ಕುಗಳ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯ ಜಿಗ್ಮೇಟ್ ವಾಂಗ್ಡೋಸ್ ಜ್ಯೋತಿ ಅವರ ನೇತೃತ್ವದಲ್ಲಿ ದೇಶದ ವಿವಿಧ ರಾಜ್ಯಗಳ ಬೌದ್ಧ ಬಿಕ್ಕುಗಳನ್ನು ಒಳಗೊಂಡ ನಿಯೋಗವು ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಮನವಿ ಪತ್ರವನ್ನು ನೀಡಿತು. ಈ ಸಂದರ್ಭದಲ್ಲಿ ಬೌದ್ಧ ಬಿಕ್ಕುಗಳಾದ ಲೋಬ್ಸಂಗ್ ನೋರ್ಬು, ಪ್ಯಾನಿಚೈಟೊ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

2026-27ನೇ ಸಾಲಿನ ಬಜೆಟ್‌ನಲ್ಲಿ ಬೌದ್ಧ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಅಭಿವೃದ್ಧಿ ಮಂಡಳಿ/ನಿಗಮ ರಚನೆಗೆ ಅವಕಾಶ ಕಲ್ಪಿಸಿರುವುದಕ್ಕೆ ನಿಯೋಗವು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿತು.

ಪ್ರಸ್ತುತ ಬೌದ್ಧ ಅಭಿವೃದ್ಧಿ ನಿಗಮವು ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿದ್ದು, ಕ್ರಿಶ್ಚಿಯನ್ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ ಬೌದ್ಧ ಅಭಿವೃದ್ಧಿ ನಿಗಮವನ್ನು ತರಬೇಕು ಎಂದು ನಿಯೋಗ ಮನವಿ ಮಾಡಿತು.

ಬೌದ್ಧ ಸಮುದಾಯದ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಈ ಕ್ರಮ ಸಹಕಾರಿಯಾಗಲಿದೆ ಎಂದು ನಿಯೋಗ ತಿಳಿಸಿತು.

About the Author

Praja Vahini

Editor

View All Posts

Spread the love

Post navigation

Previous: ಮೃತ ಮಹಿಳೆಯರ ಕುಟುಂಬಕ್ಕೆ ಶಾಸಕರಿಂದ ಹಣದ ನೆರವು
Next: ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅಕ್ರಮಕ್ಕೆ ಬ್ರೇಕ್‌ – ಖಾದರ್‌ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ!

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.