Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಳ್ಳಾರಿ ಚಲೋ ಪಾದಯಾತ್ರೆಗೆ ಚಾಲನೆ: ‘6 ಕೋಟಿ ಕನ್ನಡಿಗರ ಆಶಯದ ಕಹಳೆ’ ಎಂದ ಯಡಿಯೂರಪ್ಪ
  • Bangalore
  • Front news
  • Politics
  • State

ಬಳ್ಳಾರಿ ಚಲೋ ಪಾದಯಾತ್ರೆಗೆ ಚಾಲನೆ: ‘6 ಕೋಟಿ ಕನ್ನಡಿಗರ ಆಶಯದ ಕಹಳೆ’ ಎಂದ ಯಡಿಯೂರಪ್ಪ

Praja Vahini September 1, 2026
3bcd1314-c708-40d2-9e9c-50366debaf0a
Spread the love

ರಾಯಚೂರು: ರಾಜ್ಯದ 6 ಕೋಟಿ ಕನ್ನಡಿಗರ ಆಶೋತ್ತರಗಳನ್ನು ಪ್ರತಿಬಿಂಬಿಸುವ ಕಹಳೆಯೇ ‘ಬಳ್ಳಾರಿ ಚಲೋ’ ಪಾದಯಾತ್ರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯಲಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಕಹಳೆ ಊದುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ರೈತಗೀತೆಯನ್ನು ಹಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ರೈತ ವಿರೋಧಿ, ಜನವಿರೋಧಿ, ಪ್ರಗತಿವಿರೋಧಿ ಹಾಗೂ ಮಹಿಳಾ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರವನ್ನು ಕಿತ್ತೊಗೆಯುವವರೆಗೂ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು.

‘ಮುಖ್ಯಮಂತ್ರಿಗಳಿಗೆ ಸ್ವಾತಂತ್ರ್ಯ ಇದೆಯೇ?’

ಇದು ಚುನಾವಣಾ ಪ್ರಚಾರದ ಸಭೆಯಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಸಂಕಲ್ಪದೊಂದಿಗೆ ಹೋರಾಟ ಆರಂಭಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಮುಖ್ಯಮಂತ್ರಿಗಳಿಗೆ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಅಧಿಕಾರ ಇದೆಯೇ ಎಂದು ಪ್ರಶ್ನಿಸಿದ ಅವರು, ಪ್ರತಿಯೊಂದು ವಿಚಾರಕ್ಕೂ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಮುಖ್ಯಮಂತ್ರಿಗಳು ರಾಜ್ಯದ ಜನರ ಪರವಾಗಿ ಹೇಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಪ್ರಶ್ನಿಸಿದರು. ಇಂತಹ ನಡೆ ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುತ್ತದೆಯೇ ಎಂದರು.

ಬಳ್ಳಾರಿ ಚಲೋ ಪಾದಯಾತ್ರೆಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ ಯಡಿಯೂರಪ್ಪ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಈ ಹೋರಾಟದ ಉದ್ದೇಶ ಎಂದರು.

‘ಬಿಜೆಪಿಯ ಪ್ರತಿಯೊಂದು ಹೆಜ್ಜೆಯೂ ರೈತಪರ’

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಕಾರ್ಯಕ್ರಮ ನಿರೂಪಿಸಿದರು. ಬರಪೀಡಿತ ಪ್ರದೇಶಗಳ ಘೋಷಣೆಯಲ್ಲಿ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ. ಬರ ಪರಿಹಾರ ನೀಡುವಲ್ಲಿಯೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.

ಬಳ್ಳಾರಿ ಚಲೋ ಪಾದಯಾತ್ರೆಯ ಪ್ರತಿಯೊಂದು ಹೆಜ್ಜೆಯೂ ರೈತರ ಪರವಾಗಿದೆ. ಬಿಜೆಪಿಯ ಹೋರಾಟದಲ್ಲಿ ದಲಿತರ ಧ್ವನಿಯೂ ಅಡಗಿದೆ ಎಂದು ಪಿ. ರಾಜೀವ್ ಹೇಳಿದರು.

About the Author

Praja Vahini

Editor

View All Posts

Spread the love

Post navigation

Previous: ನಾಗೇಂದ್ರ ರಾಜೀನಾಮೆ ಬಿಜೆಪಿ ಹೋರಾಟದ ಮೊದಲ ಹಂತದ ಜಯ: ಬಿವೈವಿ
Next: ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ದಾಖಲು ಪ್ರಜಾಪ್ರಭುತ್ವದ ಮೇಲಿನ ಗಂಭೀರ ದಾಳಿ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.