Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ದಾಖಲು ಪ್ರಜಾಪ್ರಭುತ್ವದ ಮೇಲಿನ ಗಂಭೀರ ದಾಳಿ
  • Bangalore
  • Front news
  • Politics
  • State
  • Uncategorized

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ದಾಖಲು ಪ್ರಜಾಪ್ರಭುತ್ವದ ಮೇಲಿನ ಗಂಭೀರ ದಾಳಿ

Praja Vahini September 1, 2026 1 minute read
IMG_2344
Spread the love

 

ಬೆಂಗಳೂರು:  ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ್ದ ಸ್ಥಳವನ್ನು ‘ಶುದ್ಧೀಕರಣ’ ಮಾಡಲಾಗಿದೆ ಎನ್ನಲಾದ ಕೃತ್ಯವನ್ನು ಪ್ರಶ್ನಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದನ್ನು *ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ* ತೀವ್ರವಾಗಿ ಖಂಡಿಸಿದ್ದಾರೆ.

ಇದು ಬಿಜೆಪಿ ಸರ್ಕಾರದ ಅಸಂವಿಧಾನಿಕ ಮತ್ತು ದಲಿತ ವಿರೋಧಿ ಮನಸ್ಥಿತಿಯನ್ನು ಬಹಿರಂಗಪಡಿಸಿದೆ. ದೇಶದ ಪ್ರಮುಖ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ ಸ್ಥಳವನ್ನು ‘ಶುದ್ಧೀಕರಣ’ ಮಾಡಿದ ಅಮಾನವೀಯ ಕೃತ್ಯವನ್ನು ಖಂಡಿಸಿ, ಅಸ್ಪೃಶ್ಯತೆಯಂತಹ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಿಸಿರುವುದು ವಿಪರ್ಯಾಸದ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಲಿತರ ರಕ್ಷಣೆಗಾಗಿ ರೂಪಿಸಲಾದ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದಲಿತರ ಪರವಾಗಿ ಧ್ವನಿ ಎತ್ತುವವರ ಮೇಲೆಯೇ ಮೊಕದ್ದಮೆ ಹೂಡುವುದು ಕಾನೂನಿನ ಸ್ಪಷ್ಟ ದುರುಪಯೋಗ ಹಾಗೂ ಸಂವಿಧಾನದ ಆಶಯಗಳಿಗೆ ಮಾಡಿರುವ ಅಪಮಾನವಾಗಿದೆ. ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯ ಎಸಗಿದವರ ಮೇಲೆ ಕ್ರಮ ಕೈಗೊಳ್ಳಬೇಕಿದ್ದ ಸರ್ಕಾರ, ಅದನ್ನು ಪ್ರಶ್ನಿಸಿದವರ ಬಾಯಿಯನ್ನು ಪೊಲೀಸ್ ಅಸ್ತ್ರ ಬಳಸಿ ಅಡಗಿಸಲು ಹೊರಟಿದೆ ಎಂದು ಸಚಿವ ಟಿ. ರಘುಮೂರ್ತಿ ಕಿಡಿಕಾರಿದ್ದಾರೆ.

“ಒಬ್ಬ ದಲಿತ ನಾಯಕ ಭೇಟಿ ನೀಡಿದ ಸ್ಥಳವನ್ನು ಶುದ್ಧೀಕರಿಸುವ ಅಗತ್ಯ ಏಕೆ ಎದುರಾಯಿತು? ಇಂತಹ ಆಚರಣೆಗಳು ಸಮಾಜದಲ್ಲಿ ಜಾತಿ ಆಧಾರಿತ ಅಸಮಾನತೆಯ ಮನೋಭಾವ ಇನ್ನೂ ಜೀವಂತವಾಗಿರುವುದನ್ನು ತೋರಿಸುವುದಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.
ಆದಾಗ್ಯೂ, ಈ ಆರೋಪವನ್ನು ಬಿಜೆಪಿ ತಳ್ಳಿಹಾಕಿದ್ದು, ಘಟನೆಗೆ ಬಿಜೆಪಿ ಅಥವಾ ಆರ್‌ಎಸ್‌ಎಸ್‌ಗೆ ಸಂಬಂಧವಿಲ್ಲ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

ಎಫ್‌ಐಆರ್ ಕೂಡಲೇ ವಾಪಸ್ ಪಡೆಯಬೇಕು

ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಲಾಗಿರುವ ದುರುದ್ದೇಶಪೂರ್ವಕ ಎಫ್‌ಐಆರ್ ಅನ್ನು ಕೂಡಲೇ ವಾಪಸ್ ಪಡೆಯಬೇಕು.ಹಲ್ದ್ವಾನಿಯಲ್ಲಿ ನಡೆದಿದೆ ಎನ್ನಲಾದ ‘ಶುದ್ಧೀಕರಣ’ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ದಲಿತರು ಮತ್ತು ಆದಿವಾಸಿಗಳ ಮೇಲಿನ ದೌರ್ಜನ್ಯದಿಂದ ರಕ್ಷಣೆ ನೀಡಲು ರೂಪಿಸಲಾದ ಕಾನೂನು. ಅಂತಹ ಕಾಯ್ದೆಯನ್ನೇ ದಲಿತರ ಪರವಾಗಿ ಧ್ವನಿ ಎತ್ತಿದ ನಾಯಕನ ವಿರುದ್ಧ ಬಳಸಿರುವುದು ಕಾನೂನಿನ ಆಶಯವನ್ನು ತಿರುವು ಮಾಡುವ ಪ್ರಯತ್ನ ಎಂದು ಸಚಿವ ರಘುಮೂರ್ತಿ ಆರೋಪಿಸಿದ್ದಾರೆ.

“ದಲಿತರ ಗೌರವ, ಸಮಾನತೆ ಮತ್ತು ಸಂವಿಧಾನಾತ್ಮಕ ಹಕ್ಕುಗಳ ಪರವಾಗಿ ಮಾತನಾಡಿದ ರಾಹುಲ್ ಗಾಂಧಿ ಅವರ ವಿರುದ್ಧವೇ ಪ್ರಕರಣ ದಾಖಲಿಸಿರುವುದು ವಿಪರ್ಯಾಸ. ದಲಿತರ ರಕ್ಷಣೆಗೆ ರೂಪಿಸಿರುವ ಕಾನೂನನ್ನು ದಲಿತರ ಪರವಾಗಿ ಧ್ವನಿ ಎತ್ತುವವರ ವಿರುದ್ಧ ಬಳಸುವುದು ಕಾನೂನಿನ ದುರುಪಯೋಗವಲ್ಲದೆ ಮತ್ತೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದಡಿ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾಭಿಮಾನದಿಂದ ಬದುಕುವ ಹಕ್ಕಿದೆ. ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಶೋಷಿತರ ಧ್ವನಿಯಾಗಿ ನಮ್ಮ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಸಚಿವ ಟಿ. ರಘುಮೂರ್ತಿ ಪತ್ರಿಕಾ ಪ್ರಕಟಣೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಬಳ್ಳಾರಿ ಚಲೋ ಪಾದಯಾತ್ರೆಗೆ ಚಾಲನೆ: ‘6 ಕೋಟಿ ಕನ್ನಡಿಗರ ಆಶಯದ ಕಹಳೆ’ ಎಂದ ಯಡಿಯೂರಪ್ಪ
Next: ಏವೂರ ಬಸವಣ್ಣ ದೇವಸ್ಥಾನ ಕಾಮಗಾರಿ ವೀಕ್ಷಣೆ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.