Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹಿಳಾ ಉದ್ಯಮಶೀಲತೆಗೆ ಮತ್ತಷ್ಟು ಉತ್ತೇಜನ ಅಗತ್ಯ: ಡಿ.ಕೆ. ಶಿವಕುಮಾರ್
  • Bangalore
  • Politics
  • State

ಮಹಿಳಾ ಉದ್ಯಮಶೀಲತೆಗೆ ಮತ್ತಷ್ಟು ಉತ್ತೇಜನ ಅಗತ್ಯ: ಡಿ.ಕೆ. ಶಿವಕುಮಾರ್

Praja Vahini September 2, 2026
WhatsApp Image 2026-09-02 at 12.19.54
Spread the love

ಬೆಂಗಳೂರು: ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಮತ್ತಷ್ಟು ಸಕ್ರಿಯವಾಗಿ ತೊಡಗಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು.

ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಇಂದು (ಬುಧವಾರ 02. ಸೆ) ನಡೆದ ‘ಉಬುಂತು’ – ಮಹಿಳಾ ಉದ್ಯಮಿಗಳ ಸಂಘಗಳ ಒಕ್ಕೂಟದ ‘ಟುಗೆದರ್ ವಿ ಗ್ರೋ’ ಅಂತರರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನಾಚರಣೆಯ 5ನೇ ಆವೃತ್ತಿಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಕಾರ್ಯಕ್ರಮದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಮಹಿಳಾ ಉದ್ಯಮಿಗಳಿಗೆ ವೇದಿಕೆ ಕಲ್ಪಿಸುವುದು, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು ಹಾಗೂ ಪರಸ್ಪರ ಸಹಕಾರದ ಮೂಲಕ ಉದ್ಯಮಗಳನ್ನು ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಹಿಳೆಯರ ಉದ್ಯಮಶೀಲತೆ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಸಾಂಪ್ರದಾಯಿಕ ಉದ್ಯೋಗ ಕ್ಷೇತ್ರಗಳ ಜೊತೆಗೆ ಹೊಸ ಉದ್ಯಮಗಳು, ತಂತ್ರಜ್ಞಾನ, ಸೇವಾ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ. ಇಂತಹ ಪ್ರಯತ್ನಗಳಿಗೆ ಸೂಕ್ತ ಮಾರ್ಗದರ್ಶನ, ತರಬೇತಿ, ಮಾರುಕಟ್ಟೆ ಸಂಪರ್ಕ ಮತ್ತು ಅಗತ್ಯ ಬೆಂಬಲ ದೊರೆಯುವಂತಾಗಬೇಕು ಎಂಬ ಆಶಯ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.

‘ಟುಗೆದರ್ ವಿ ಗ್ರೋ’ ಎಂಬ ಪರಿಕಲ್ಪನೆಯಡಿ ಮಹಿಳಾ ಉದ್ಯಮಿಗಳು ಪರಸ್ಪರ ಜ್ಞಾನ, ಅನುಭವ ಮತ್ತು ಅವಕಾಶಗಳನ್ನು ಹಂಚಿಕೊಳ್ಳುವ ಮೂಲಕ ಒಟ್ಟಾಗಿ ಬೆಳೆಯುವ ಅಗತ್ಯವನ್ನು ಕಾರ್ಯಕ್ರಮದಲ್ಲಿ ಒತ್ತಿ ಹೇಳಲಾಯಿತು.

ಅಂತರರಾಷ್ಟ್ರೀಯ ಮಟ್ಟದಲ್ಲಿ ಮಹಿಳಾ ಉದ್ಯಮಶೀಲತೆಗೆ ದೊರೆಯುತ್ತಿರುವ ಅವಕಾಶಗಳು, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲುಗಳು ಹಾಗೂ ಭವಿಷ್ಯದ ಸಾಧ್ಯತೆಗಳ ಕುರಿತು ಕಾರ್ಯಕ್ರಮದಲ್ಲಿ ಚರ್ಚೆ ನಡೆಯಿತು.

ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳು ಮತ್ತು ಸೇವೆಗಳಿಗೆ ಉತ್ತಮ ಮಾರುಕಟ್ಟೆ ರೂಪಿಸಿಕೊಳ್ಳಲು ನೆಟ್‌ವರ್ಕಿಂಗ್‌ ಹಾಗೂ ಸಹಭಾಗಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬ ಸಂದೇಶವೂ ಕಾರ್ಯಕ್ರಮದ ಮೂಲಕ ನೀಡಲಾಯಿತು.

ಕಾರ್ಯಕ್ರಮದಲ್ಲಿ ಉಬುಂತು ಸಂಸ್ಥಾಪಕ ಅಧ್ಯಕ್ಷೆ ಕೆ. ರತ್ನಾಪ್ರಭಾ, ಸಹ ಸಂಸ್ಥಾಪಕಿ ಹಾಗೂ ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾರೆಡ್ಡಿ, ಜ್ಯೋತಿ ಬಾಲಕೃಷ್ಣ, ಅತಿಥಿಗಳಾದ ಮರ್ಸಿ ಎಪಾವ್, ಮಿಕಿಕೋ ಟನಕ, ಮನೋಜ್ ಕೃಷ್ಣಪ್ಪ, ನಿಂಗಣ್ಣ, ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಹಲವು ಗಣ್ಯರು ಹಾಗೂ ಮಹಿಳಾ ಉದ್ಯಮಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: RSS ವಿಚಾರದಲ್ಲಿ ಅಶೋಕ್‌ಗೆ ಪ್ರಿಯಾಂಕ ಖರ್ಗೆ ತಿರುಗೇಟು: ಹಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ಸವಾಲು
Next: ಸರ್ಕಾರ ನಡೆಸಲು ಆಗದಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.