ಶಹಾಪುರ: ತಾಲೂಕಿನ ಮಡ್ನಾಳ ಗ್ರಾಮದಲ್ಲಿ ಆ.23 ರಂದು ನಡೆದ ರಸ್ತೆ ಅಪಘಾತದಲ್ಲಿ ಮೂವರು ಕೂಲಿ ಕಾರ್ಮಿಕ ಮಹಿಳೆಯರಾದ ಸತ್ಯಮ್ಮ, ಸೌಭಾಗ್ಯ, ಹೊನ್ನನಿಂಗಮ್ಮ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದರು, ಪರಿಹಾರಕ್ಕಾಗಿ ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿತ್ತು, ಈ ಮನವಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿಯವರು ಮಾನವೀಯತೆಯ ಆಧಾರದ ಮೇಲೆ ಮೃತರ ಕುಟುಂಬದವರಿಗೆ ಹಾಗೂ ಗಾಯಾಳುಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ವಿಶೇಷ ಧನಸಹಾಯವನ್ನು ಮಂಜೂರು ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಮ್ಮ ವಿಶೇಷ ಕರ್ತವ್ಯಾಧೀಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮನವಿಯನ್ನು ಪುರಸ್ಕರಿಸಿರುವ ಸಿಎಂ ಸಚಿವಾಲಯವು ಅಪಘಾತವು ಎಮ್ಎಲ್ಸಿ ಅಡಿಯಲ್ಲಿ ದಾಖಲಾಗಿರುವುದರಿಂದ ನಿಯಾಮಾನುಸಾರ ಪರಿಹಾರ ಒದಗಿಸಲು ಅಗತ್ಯ ದಾಖಲೆಗಳನ್ನು ಒದಗಿಸುವಂತೆ ಸೂಚಿಸಲಾಗಿದೆ.
ಪರಿಹಾರ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲು ಮೃತರ ವಾರಸುದಾರರ ಮತ್ತು ಗಾಯಾಳುಗಳ ಆಧಾರ್ ಕಾರ್ಡ್ , ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್, ಪ್ರಥಮ ಮಾಹಿತಿ ವರದಿ, ಶವ ಪರೀಕ್ಷೆ ವರದಿ, ಮತ್ತು ಗಾಯದ ಪ್ರಮಾಣ ಪತ್ರಗಳನ್ನು ತಕ್ಷಣವೇ ಸಲ್ಲಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ಪತ್ರದಲ್ಲಿ ನಿರ್ಧೇಶನ ನೀಡಿ ಆದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಆರ್ಥಿಕ ನೆರವು
ತಮ್ಮ ತಾಯಿಯರನ್ನು ಕಳೆದುಕೊಂಡ ಮಕ್ಕಳು, ಕುಟುಂಬಸ್ಥರು ಕಣ್ಣಿರಲ್ಲಿ ಮುಳುಗಿದ್ದು, ನೋವಿನಲ್ಲಿ ಇದ್ದಾರೆ. ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಭಾದಿಸದಿರಲಿ ಮತ್ತು ಮೃತ ಮಹಿಳೆಯರ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಪರಿಹಾರ ನೀಡಲು ಸರ್ಕಾರ ಅನುಮೋದನೆ ನೀಡಿದೆ ಮತ್ತು ಮೃತರ ಅಗತ್ಯ ದಾಖಲೆ ಸಲ್ಲಿಸಲು ತಿಳಿಸಿದ್ದಾರೆ ಎಂದು ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು.
