Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬರದ ಹೊಡೆತಕ್ಕೆ ರೈತರು ಆತ್ಮಹತ್ಯೆ: ಸರ್ಕಾರ ತಕ್ಷಣ ಪರಿಹಾರ ನೀಡಲಿ – ವಿಜಯೇಂದ್ರ
  • Bangalore
  • Front news
  • Politics
  • State

ಬರದ ಹೊಡೆತಕ್ಕೆ ರೈತರು ಆತ್ಮಹತ್ಯೆ: ಸರ್ಕಾರ ತಕ್ಷಣ ಪರಿಹಾರ ನೀಡಲಿ – ವಿಜಯೇಂದ್ರ

Praja Vahini September 23, 2026 1 minute read
4b2eb47e-7ce0-487c-80de-b416b0b0edfa
Spread the love

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಆಘಾತಕಾರಿ ಪರಿಸ್ಥಿತಿ ಎದುರಾಗಿದೆ. ಸರ್ಕಾರ ರೈತರ ನೆರವಿಗೆ ತಕ್ಷಣ ಧಾವಿಸಿ ಸಮರ್ಪಕ ಪರಿಹಾರ ಮತ್ತು ನೀರಾವರಿ ಸೌಲಭ್ಯ ಒದಗಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವಿಧಾನಸಭೆಯಲ್ಲಿ ಆಗ್ರಹಿಸಿದರು.

ವಿಶೇಷ ಅಧಿವೇಶನದಲ್ಲಿ ಬರ ಪರಿಸ್ಥಿತಿ ಕುರಿತು ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ 294, ಬೀದರ್‌ನಲ್ಲಿ 219, ರಾಯಚೂರಿನಲ್ಲಿ 161 ಹಾಗೂ ಕೊಪ್ಪಳದಲ್ಲಿ 82 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ಗಂಭೀರ ವಿಚಾರ ಎಂದು ಹೇಳಿದರು.

“ಒಂದು ಕಡೆ ಭೀಕರ ಬರ, ಮತ್ತೊಂದು ಕಡೆ ನೀರಾವರಿ ಯೋಜನೆಗಳು ಪೂರ್ಣಗೊಳ್ಳದೆ ಇರುವ ಪರಿಸ್ಥಿತಿ. ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಭಾಗದ ರೈತರಿಗೆ ಎರಡನೇ ಬೆಳೆಗೆ ನೀರು ಸಿಗದೆ ಬೀದಿಗಿಳಿದು ಹೋರಾಟ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ನವಲಿ ಸಮಾನಾಂತರ ಜಲಾಶಯ ಸೇರಿದಂತೆ ಬಾಕಿ ಇರುವ ನೀರಾವರಿ ಯೋಜನೆಗಳನ್ನು ಸರ್ಕಾರ ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು” ಎಂದು ವಿಜಯೇಂದ್ರ ಒತ್ತಾಯಿಸಿದರು.

ರಾಜ್ಯದಲ್ಲಿ ವಿದ್ಯುತ್‌ ಅಭಾವ; ರೈತರಿಗೆ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ

ಬರದ ಸಂದರ್ಭದಲ್ಲಿ ರೈತರು ತಮ್ಮ ಬೋರ್‌ವೆಲ್‌ಗಳ ಮೂಲಕ ಬೆಳೆಗಳಿಗೆ ನೀರುಣಿಸಲು ಮುಂದಾಗಿದ್ದರೂ, ಅಗತ್ಯ ಪ್ರಮಾಣದ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಮೂರು ಹಂತದ ವಿದ್ಯುತ್‌ ಕೂಡ ಸಮರ್ಪಕವಾಗಿ ಸಿಗದೆ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಹವಾಮಾನ ಇಲಾಖೆ ಬರದ ಮುನ್ಸೂಚನೆ ನೀಡಿದ್ದರೂ, ವಿದ್ಯುತ್ ಬೇಡಿಕೆಯನ್ನು ಸರ್ಕಾರ ಮುಂಚಿತವಾಗಿ ಅಂದಾಜಿಸಿ ಅಗತ್ಯ ಪ್ರಮಾಣದ ವಿದ್ಯುತ್ ಖರೀದಿ ಮಾಡಬೇಕಿತ್ತು. ಈಗ ಹೆಚ್ಚಿನ ದರದಲ್ಲಿ ವಿದ್ಯುತ್ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಹೇಳಿದರು.

SDRF ಹಣದಲ್ಲಿ ಕೇವಲ ₹187 ಕೋಟಿ ಖರ್ಚು

ಬರ ಮತ್ತು ವಿಪತ್ತು ನಿರ್ವಹಣೆಯಲ್ಲಿ ಸರ್ಕಾರದ ಸಿದ್ಧತೆಯ ಬಗ್ಗೆ ಪ್ರಶ್ನಿಸಿದ ವಿಜಯೇಂದ್ರ, SDRF ಅಡಿಯಲ್ಲಿ ಅನುಮೋದನೆಯಾದ ₹1,229 ಕೋಟಿಯಲ್ಲಿ ಕೇವಲ ₹187 ಕೋಟಿ ಮಾತ್ರ ಖರ್ಚಾಗಿದೆ ಎಂದು ಸದನದ ಗಮನಕ್ಕೆ ತಂದರು.

ರಾಜ್ಯದ ಸುಮಾರು ಶೇ.45ರಷ್ಟು ಮಳೆಮಾಪಕಗಳು ದುರಸ್ತಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಮತ್ತೊಂದು ಆತಂಕಕಾರಿ ಸಂಗತಿ. ರಾಜ್ಯ ವಿಪತ್ತು ನಿರ್ವಹಣಾ ಪಡೆಯಲ್ಲೂ ಶೇ.70–75ರಷ್ಟು ಹುದ್ದೆಗಳು ಖಾಲಿ ಇರುವುದರಿಂದ, ಬರವನ್ನು ಎದುರಿಸಲು ಸರ್ಕಾರದ ಸಿದ್ಧತೆಯ ಕೊರತೆ ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು.

ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ವೇಗ ನೀಡಿ

ಕಳೆದ ಮೂರು ವರ್ಷಗಳಲ್ಲಿ ಉತ್ತರ ಕರ್ನಾಟಕದ ಹಲವು ನೀರಾವರಿ ಯೋಜನೆಗಳು ಪೂರ್ಣಗೊಳ್ಳದೆ ಬಾಕಿ ಉಳಿದಿವೆ. ಶೇ.20–30ರಷ್ಟು ಕಾಮಗಾರಿಗಳು ಪೂರ್ಣಗೊಳ್ಳದೆ ಇರುವ ಯೋಜನೆಗಳನ್ನು ತ್ವರಿತವಾಗಿ ಮುಗಿಸಿದರೆ ರೈತರಿಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ವಿಜಯೇಂದ್ರ ಹೇಳಿದರು.

“ಕಲ್ಯಾಣ ಕರ್ನಾಟಕದ ರೈತರು ಗ್ಯಾರಂಟಿಗಳ ಬಗ್ಗೆ ಕೇಳುತ್ತಿಲ್ಲ. ತಮ್ಮ ಹೊಲಕ್ಕೆ ನೀರು ಬೇಕು, ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಎಂದು ಕೇಳುತ್ತಿದ್ದಾರೆ. ಸರ್ಕಾರ ರೈತರ ಈ ಮೂಲಭೂತ ಬೇಡಿಕೆಗೆ ಸ್ಪಂದಿಸಬೇಕು” ಎಂದು ಅವರು ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನ ಖಂಡಿಸಿ ನಾಳೆ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯಿಂದ ‘ಶವಯಾತ್ರೆ’: ವಿಜಯೇಂದ್ರ
Next: ಎಸ್‌ಐಆರ್ ಒಂದು ಪಿತೂರಿ, ಅಸಂವಿಧಾನಿಕ ಪ್ರಕ್ರಿಯೆ: ನಟ ಪ್ರಕಾಶ್ ರಾಜ್ ಆಕ್ರೋಶ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.