Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ವಸತಿ ಶಾಲೆ ಪೂರಕ
  • Politics
  • State
  • ಶಹಾಪುರ

ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ವಸತಿ ಶಾಲೆ ಪೂರಕ

Praja Vahini September 28, 2026
WhatsApp Image 2026-09-28 at 17.14.03
Spread the love

ಪ್ರಗತಿಯಲ್ಲಿರುವ ಶಾಲಾ ಕಟ್ಟಡ ಕಾಮಗಾರಿ ವೀಕ್ಷಿಸಿದ ಶಾಸಕ ದರ್ಶನಾಪುರ

ಶಹಾಪುರ: ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ವಸತಿ ಶಾಲೆ ನಿರ್ಮಾಣಕ್ಕೆ ಕಂಚನಕವಿ ಗ್ರಾಮದಲ್ಲಿ ೫ ಎಕರೆ ೯ ಗುಂಟೆ ಜಾಗದಲ್ಲಿ ಸ್ಥಳ ಗುರುತಿಸಲಾಗಿದ್ದು ಕಾಮಗಾರಿ ಪ್ರಗತಿಯಲ್ಲಿದ್ದು ಸಕಲ ತಯಾರಿಗಳು ಭರದಿಂದ ಸಾಗಿವೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು. ತಾಲೂಕಿನ ಕಂಚನಕವಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಪ್ರಗತಿಯಲ್ಲಿರುವ ಕಾರ್ಮಿಕ ಮಕ್ಕಳ ಶಾಲೆ ಕಾಮಗಾರಿ ವೀಕ್ಷಿಸಿ ಮಾತನಾಡಿ,ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಮೂರಾರ್ಜಿ ದೇಸಾಯಿ ವಸತಿ ಶಾಲೆಯ ಮಾದರಿಯಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಇದಕ್ಕೆ ಅಂದಾಜು 25 ಕೋಟಿ ರೂ. ಅನುದಾನ ಮಿಸಲಿಟ್ಟಿದೆ. 6 ನೇ ತರಗತಿಯಿಂದ ಪಿಯುಸಿ ವರೆಗೆ ಉಚಿತ ಶಿಕ್ಷಣ ದೊರೆಯಲಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ ಎಂದರು.

ಪ್ರತಿ ವಸತಿ ಶಾಲೆಯಲ್ಲಿ ಅಂದಾಜು 300 ರಿಂದ 350 ವಿದ್ಯಾರ್ಥಿಗಳು ವ್ಯಾಸಂಗ ಮಾಡಲಿದ್ದಾರೆ. ಇಷ್ಟು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶಾಲಾ ಕಟ್ಟಡ, ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತದೆ. ವಿದ್ಯಾರ್ಥಿನಿಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಸತಿ, ಹಾಗೂ ತರಗತಿ ಕೊಠಡಿ, ಪ್ರಯೋಗಾಲಯ, ಕ್ರೀಡಾಂಗಣ, ಗ್ರಂಥಾಲಯ, ಕಂಪೌಂಡ್, ಶಾಲಾ ಕಚೇರಿ, ವಸತಿ ಸಮುಚ್ಚಯ ವ್ಯವಸ್ಥೆ ಇರಲಿದೆ.

ಆರ್ಥಿಕವಾಗಿ ದುರ್ಬಲರಾಗಿರುವ ಕಟ್ಟಡ ಕಾರ್ಮಿಕರು ಸಾಮಾನ್ಯವಾಗಿ ವಲಸೆ ಪ್ರವೃತ್ತಿ ಹೊಂದಿರುತ್ತಾರೆ. ರಾಜ್ಯದ ಇತರೆ ನಗರ ಹಾಗೂ ಹೊರ ರಾಜ್ಯಗಳಿಗೂ ವಲಸೆ ಹೋಗುತ್ತಾರೆ. ಬದುಕು ಸಾಗಿಸುವ ಅನಿವಾರ್ಯತೆಯಲ್ಲಿ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವುದು ಕಡಿಮೆ. ಇಂತಹ ಕಾರ್ಮಿಕರು ವಲಸೆ ಹೋದರೂ ಅವರ ಮಕ್ಕಳೂ ವಸತಿ ಶಾಲೆಯಲ್ಲಿ ಓದಲು ಅನುಕೂಲವಾಗಲಿದೆ. ಇದರಿಂದ ಕಾರ್ಮಿಕರು ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದು ತಪ್ಪಲಿದೆ ಎಂದು ತಿಳಿಸಿದರು.

25 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ವಸತಿ ಶಾಲೆ

ತಾಲೂಕಿನಲ್ಲಿ 32 ಸಾವಿರ ಕಾರ್ಮಿಕರು ಕಾರ್ಡ್ದಾರರು ಇದ್ದಾರೆ. ಅಂತವರ ಮಕ್ಕಳಿಗೆ ವಸತಿ ಸಹಿತ ಶಿಕ್ಷಣ ನೀಡಲಾಗುವುದು. ಈಗಾಗಲೇ ತಾಲೂಕಿನ ಬೂದನೂರ ಬಳಿ 25 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ವಸತಿ ಶಾಲೆ, ಸಗರ ಗ್ರಾಮದಲ್ಲಿ ಮೈನಾರಿಟಿ ವಸತಿ ಸಹಿತ ಶಾಲೆ ಕಾಮಗಾರಿ ಪ್ರಗತಿಯಲ್ಲಿವೆ. ಕಂಚನಕವಿ ಗ್ರಾಮದಲ್ಲಿ ಒಟ್ಟು 52 ಎಕರೆ ಸರ್ಕಾರಿ ಭೂಮಿಯಲ್ಲಿ ಈಗಾಗಲೇ ಕಾರ್ಮಿಕರ ವಸತಿ ಶಾಲೆ ಪ್ರಗತಿಯಲ್ಲಿದೆ, ಇನ್ನೂ 20 ಗುಂಟೆಯಲ್ಲಿ ಮಹಿಳೆಯರ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲಾಗುವುದು. 9 ಎಕರೆ 36 ಗುಂಟೆಗಳ ಸ್ಥಳದಲ್ಲಿ 173 ಹಳೆ ಮನೆಗಳಿಗೆ ಬೈನಂಬರ್ ನೀಡಲಾಗುವುದು. ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ, 3 ಎಕರೆಯಲ್ಲಿ ರುದ್ರಭೂಮಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಂದ ಗ್ರಾಮದ ಜನರಿಗೆ ಅನುಕೂಲವಾಗಲಿದೆ ಎಂದು ಶರಣಬಸಪ್ಪಗೌಡ ದರ್ಶನಾಪುರ ತಳಿಸಿದರು

ಮಹಿಳೆಯರು ಶೌಚಾಲಯ ನಿರ್ಮಾಣಕ್ಕೆ ಮನವಿ

ಶಾಸಕರು ಕಂಚನಕವಿ ಗ್ರಾಮಕ್ಕೆ ತೆರಳಿದ್ದ ವೇಳೆ ಗ್ರಾಮದ ಮಹಿಳೆಯರು ಶೌಚಾಲಯ ನಿರ್ಮಾಣಕ್ಕೆ ಮನವಿ ಮಾಡಿದರು. ಈ ವೇಳೆ ಶಾಸಕರು ಶೌಚಾಲಯ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಿವಮಾಹಂತ ಚಂದಾಪುರ, ನಗರ ಆಶ್ರಯ ಸಮಿತಿ ಅಧ್ಯಕ್ಷ ವಸಂತ ಸುರಪುರಕರ್, ಭೀಮನಗೌಡ ಎನ್ ಬಿರೆದಾರ, ನಿಂಗನಗೌಡ ಎಮ್ ಬಿರೆದಾರ, ಅಶೋಕರೆಡ್ಡಿ ಗುರಸಣಗಿ, ಭೀಮನಗೌಡ ಪೊ.ಪಾಟೀಲ್, ಮಲ್ಲಣಗೌಡ ಪೊ.ಪಾಟೀಲ್, ಮಡಿವಾಳರೆಡ್ಡಿ, ಶರಣಗೌಡ ಸಾಲ್ವಡಗಿ, ಚಂದಪ್ಪ ಗೋಗಿ, ಸಾಯಿಬಣ್ಣ ನಾಟೇಕರ, ಖಂಡಪ್ಪ ನಾಟೇಕರ್, ದೇವಪ್ಪ ನಾಟೇಕರ, ಭೀಮರಾಯ ನಾಟೇಕರ ಸೇರಿದಂತೆ ಗ್ರಾಮದ ಮುಖಂಡರು ಗುತ್ತಿಗೆದಾರರು ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ವಿದ್ಯಾರ್ಥಿಗಳು ಶಿಕ್ಷಣ ಜೊತೆಗೆ ಬೌದ್ಧಿಕವಾಗಿ ಸದೃಢರಾಗಿ
Next: ‘ನಮಸ್ತೆ ಯೋಜನೆಯಡಿ’ ಕಾರ್ಮಿಕರಿಗೆ ಕಾರ್ಡ್ ವಿತರಣೆ

Views:

76

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.