Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರತಿಷ್ಠಿತ ಸಂಗೀತ ವಿದ್ವಾನ್‌ ಪ್ರಶಸ್ತಿಗೆ ಹಿರಿಯ ಗಾಯಕಿ ಡಾ. ಮೈಸೂರು ನಾಗಮಣಿ ಶ್ರೀನಾಥ್‌ ಆಯ್ಕೆ
  • Bangalore
  • Front news
  • Politics
  • State

ಪ್ರತಿಷ್ಠಿತ ಸಂಗೀತ ವಿದ್ವಾನ್‌ ಪ್ರಶಸ್ತಿಗೆ ಹಿರಿಯ ಗಾಯಕಿ ಡಾ. ಮೈಸೂರು ನಾಗಮಣಿ ಶ್ರೀನಾಥ್‌ ಆಯ್ಕೆ

Praja Vahini October 1, 2026
af379504-b84b-428d-a816-eab3c8157382
Spread the love

ಬೆಂಗಳೂರು:  ಪ್ರತಿ ವರ್ಷ ಮೈಸೂರು ದಸರಾ ಉತ್ಸವದ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ನೀಡಲಾಗುವ ರಾಜ್ಯ ಸರ್ಕಾರದ ಪ್ರತಿಷ್ಠಿತ ಸಂಗೀತ ವಿದ್ವಾನ್‌ ಪ್ರಶಸ್ತಿಗೆ ಈ ಬಾರಿ ಪ್ರಸಿದ್ಧ ಗಾಯಕಿ ಡಾ. ಮೈಸೂರು ನಾಗಮಣಿ ಶ್ರೀನಾಥ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಪಂ. ಫಯಾಜ಼್ ಖಾನ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಆಯ್ಕೆ ಸಮಿತಿ ಇವರನ್ನು ಆಯ್ಕೆ ಮಾಡಿದೆ. ನಾಗಮಣಿ ಶ್ರೀನಾಥ್‌ ಅವರು ರಾಷ್ಟ್ರ, ಅಂತರರಾಷ್ಟ್ರ ಮಟ್ಟದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನದಲ್ಲಿ ಹೆಸರು ಮಾಡಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಸಂಗೀತ ವಿಭಾಗದ ಮುಖ್ಯರಸ್ಥರಾಗಿ ಹಾಗೂ ಪ್ರೊಫೆಸರ್‌ ಆಗಿ ಸೇವೆ ಸಲ್ಲಿಸಿದ್ದಾರೆ. ಸ್ವತಃ ನೂರಕ್ಕೂ ಹೆಚ್ಚು ಶಾಸ್ತ್ರೀಯ ಕೃತಿಗಳನ್ನು ಮತ್ತು ವರ್ಣಗಳನ್ನು ರಚಿಸಿರುವ ಇವರು “ಸುನಾದ ಕಲ್ಚರಲ್‌ ಸೆಂಟರ್” ಸಂಗೀತ ಶಾಲೆಯ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಮುಂತಾದ ಪ್ರತಿಷ್ಠಿತ ಪುರಸ್ಕಾರಗಳಿಗೆ ಇವರು ಭಾಜನರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸುವುದೇ ನನ್ನ ಗುರಿ: ಟಿ. ರಘುಮೂರ್ತಿ
Next: ರಿಯಲ್ ಎಸ್ಟೇಟ್ ಬಗ್ಗೆ ಇರುವ ಕಾಳಜಿ ರೈತರ ಬಗ್ಗೆ ಇಲ್ಲದ ಸರಕಾರ: ಬಿ.ವೈ.ವಿಜಯೇಂದ್ರ ಆಕ್ಷೇಪ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.