ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (BIEC) ಗುರುವಾರ ನಡೆದಅಗ್ರಿಕಾನ್ ಇಂಡಿಯಾ ಹಾಗೂ ಹಾರ್ಟಿ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು.
ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ಈಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು. ಕೃಷಿ ಮತ್ತು ತೋಟಗಾರಿಕೆ ವಲಯದಲ್ಲಿನ ಹೊಸ ತಂತ್ರಜ್ಞಾನ, ಉತ್ಪನ್ನಗಳು ಹಾಗೂ ಬೆಳವಣಿಗೆಗಳ ಕುರಿತು ಕಾರ್ಯಕ್ರಮದಲ್ಲಿ ಗಮನ ಹರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಹಾರ್ಟಿಕನೆಕ್ಟ್ ಇಂಡಿಯಾ ನಿರ್ದೇಶಕರಾದ ಸತ್ಯೇಂದ್ರ ಕುಮಾರ್ ಗುಟ್ಗೂಟಿಯಾ, ಶ್ರೀಕಂಠ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
