Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಸ್ತೆ ಗುಂಡಿ, ಕಸ ಸಮಸ್ಯೆ ಪರಿಹಾರಕ್ಕೆ ನ.1ರಿಂದ ವಿಶೇಷ ಅಭಿಯಾನ
  • Bangalore
  • Front news
  • Politics
  • State

ರಸ್ತೆ ಗುಂಡಿ, ಕಸ ಸಮಸ್ಯೆ ಪರಿಹಾರಕ್ಕೆ ನ.1ರಿಂದ ವಿಶೇಷ ಅಭಿಯಾನ

Praja Vahini October 28, 2026
IMG_2720
Spread the love

ಬೆಂಗಳೂರು: ನಗರದ ರಸ್ತೆ ಗುಂಡಿ, ಕಸದ ಸಮಸ್ಯೆ, ಚರಂಡಿ ನಿರ್ವಹಣೆ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನವೆಂಬರ್ 1ರಿಂದ 30ರವರೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ನಗರದ ಮೂಲಸೌಕರ್ಯ ಸಮಸ್ಯೆಗಳ ಕುರಿತು ನಗರ ಪಾಲಿಕೆ ಆಯುಕ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಮಳೆಯಿಂದ ಹದಗೆಟ್ಟಿರುವ ರಸ್ತೆಗಳ ದುರಸ್ತಿ ಸೇರಿದಂತೆ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಈ ಹಿಂದೆ ವಾರ್ಡ್ ಮಟ್ಟದಲ್ಲಿ ನಡೆಯುತ್ತಿದ್ದ ತೀವ್ರ ಸ್ವಚ್ಛತಾ ಅಭಿಯಾನವನ್ನು ವಿಸ್ತರಿಸಿ, ರಸ್ತೆ ಗುಂಡಿ ಮುಚ್ಚುವುದು, ಹಾಳಾದ ಚರಂಡಿ ಮುಚ್ಚಳಗಳ ದುರಸ್ತಿ, ವಾಲಿರುವ ವಿದ್ಯುತ್ ಕಂಬಗಳ ಸರಿಪಡಿಸುವಿಕೆ, ನೀರು ಸೋರಿಕೆ ತಡೆ ಹಾಗೂ ರಸ್ತೆ ಬದಿಯ ತ್ಯಾಜ್ಯ ತೆರವು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಬೆಸ್ಕಾಂ, ಜಲಮಂಡಳಿ ಸೇರಿದಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳು ಒಟ್ಟಾಗಿ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.

ನವೆಂಬರ್ 7ರೊಳಗೆ ವಾರ್ಡ್‌ವಾರು ಸಮೀಕ್ಷೆ ಪೂರ್ಣ

ಅಭಿಯಾನದ ಅಂಗವಾಗಿ ವಾರ್ಡ್‌ವಾರು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ರಸ್ತೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಗುರುತಿಸಿ ದಾಖಲಿಸಬೇಕು. ಹಾಳಾದ ಸ್ಲ್ಯಾಬ್‌ಗಳು, ಕಾರ್ಯನಿರ್ವಹಿಸದ ಬೀದಿದೀಪಗಳು, ಪಾದಚಾರಿ ಮಾರ್ಗಗಳ ಸ್ಥಿತಿ, ನೀರು ಸೋರಿಕೆ ಸೇರಿದಂತೆ ಎಲ್ಲ ಮೂಲಸೌಕರ್ಯ ಸಮಸ್ಯೆಗಳನ್ನು ಪರಿಶೀಲಿಸಬೇಕು ಎಂದು ಸಚಿವರು ಹೇಳಿದರು.

ಜಿಬಿಎ ಮುಖ್ಯ ಆಯುಕ್ತರು ಸಮೀಕ್ಷೆಗೆ ಅಗತ್ಯವಾದ ಪರಿಶೀಲನಾ ಪಟ್ಟಿಯನ್ನು ಒದಗಿಸಲಿದ್ದು, ನವೆಂಬರ್ 7ರೊಳಗೆ ಎಲ್ಲ ವಾರ್ಡ್‌ಗಳ ಸಮೀಕ್ಷೆ ಪೂರ್ಣಗೊಳಿಸಬೇಕು. ಬಳಿಕ ಗುರುತಿಸಲಾದ ಸಮಸ್ಯೆಗಳ ಆಧಾರದ ಮೇಲೆ ದುರಸ್ತಿ ಕಾಮಗಾರಿಗಳಿಗೆ ಯೋಜನೆ ರೂಪಿಸಲಾಗುತ್ತದೆ. ಪ್ರಮುಖ ಜಂಕ್ಷನ್‌ಗಳಲ್ಲಿನ ರಸ್ತೆ ಗುಂಡಿಗಳಿಗೆ ಆದ್ಯತೆ ನೀಡುವಂತೆ ಸಹಾಯಕ ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ ಎಂದರು.

ಮುಖ್ಯಮಂತ್ರಿಗಳೂ ನಗರದ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚನೆ ನೀಡಿದ್ದು, ಅವರ ಸಲಹೆಗಳ ಆಧಾರದ ಮೇಲೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಕಸ ಸಂಗ್ರಹಕ್ಕೆ ಹೊಸ ವಾಹನ, ಜಿಪಿಎಸ್ ಕಡ್ಡಾಯ

ನಗರದಲ್ಲಿ ಕಸ ಸಂಗ್ರಹ ಮತ್ತು ವಿಲೇವಾರಿ ವ್ಯವಸ್ಥೆಯನ್ನು ಸುಧಾರಿಸಲು ಹೊಸ ಟೆಂಡರ್ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ. ಇದರನ್ವಯ ಗುತ್ತಿಗೆದಾರರು ಹೊಸ ವಾಹನಗಳನ್ನು ಒದಗಿಸುವುದು ಹಾಗೂ ಕಸ ಸಂಗ್ರಹಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸುವುದು ಕಡ್ಡಾಯವಾಗಲಿದೆ.

ವಾಹನಗಳು ನಿಗದಿತ ಮಾರ್ಗದಲ್ಲೇ ಸಂಚರಿಸುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ವಾಹನಗಳ ಚಲನವಲನದ ಮೇಲೆ ನಿಗಾ ಇರಿಸುವುದರ ಜೊತೆಗೆ ರಸ್ತೆ ಬದಿಯಲ್ಲಿ ಕಸ ಸುರಿಯುವುದನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದರು.

ಸಿಬ್ಬಂದಿಯ ಹಾಜರಾತಿ ದಾಖಲಿಸಲು ಮುಖ ಗುರುತಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಟೆಂಡರ್‌ನಲ್ಲಿ ನಿಗದಿಪಡಿಸಿದಂತೆ ವಾಹನಗಳು ಮತ್ತು ಸಿಬ್ಬಂದಿಯನ್ನು ಒದಗಿಸುವುದು ಗುತ್ತಿಗೆದಾರರ ಜವಾಬ್ದಾರಿಯಾಗಿದೆ. ಹಳೆಯ ವಾಹನಗಳ ಬದಲಿಗೆ ಹೆಚ್ಚಿನ ಸಾಮರ್ಥ್ಯದ ನಾಲ್ಕು ಚಕ್ರದ ವಾಹನಗಳನ್ನು ಪರಿಚಯಿಸಲು ಯೋಜಿಸಲಾಗಿದ್ದು, ಮೂರು ಚಕ್ರದ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುತ್ತಿದೆ ಎಂದರು.

ಪ್ರಸ್ತುತ ದಿನಕ್ಕೆ ಸುಮಾರು 5,600 ಟನ್‌ಗಳಷ್ಟಿರುವ ಕಸ ನಿರ್ವಹಣಾ ಸಾಮರ್ಥ್ಯವನ್ನು 9,000 ಟನ್‌ಗಳಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಬೆಂಗಳೂರಿನ ಖ್ಯಾತ CTR ಹೋಟೆಲ್‌ನಲ್ಲಿ ದೋಸೆಯಲ್ಲಿ ಜಿರಳೆ ಪತ್ತೆ?
Next: ಸ್ವಪಕ್ಷದವರ ವಿರುದ್ಧ ಕೆಎನ್ ರಾಜಣ್ಣ ಅಸಮಾಧಾನ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.