Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪರಿಷತ್ ಚುನಾವಣೆಯಲ್ಲಿ ಸೋಲು: ಜನರ ಸಂದೇಶವನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಡಿಕೆಶಿ
  • Bangalore
  • Front news
  • Politics
  • State

ಪರಿಷತ್ ಚುನಾವಣೆಯಲ್ಲಿ ಸೋಲು: ಜನರ ಸಂದೇಶವನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಡಿಕೆಶಿ

Praja Vahini October 28, 2026
Screenshot_2026-06-25-14-32-19-43_6012fa4d4ddec268fc5c7112cbb265e7
Spread the love

ಬೆಂಗಳೂರು: ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಿರೀಕ್ಷಿತ ಗೆಲುವು ಸಿಗದಿರುವ ಹಿನ್ನೆಲೆಯಲ್ಲಿ, ಮತದಾರರು ನೀಡಿರುವ ತೀರ್ಪನ್ನು ಗೌರವಿಸಿ ಸೋಲಿನ ಕಾರಣಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ, ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಪಕ್ಷಕ್ಕೆ ಸೋಲಾಗಿದ್ದರೂ ಉತ್ತಮ ಮತಗಳು ಬಂದಿವೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ಮಾತ್ರ ಅನಿರೀಕ್ಷಿತವಾಗಿದ್ದು, ಈ ಕುರಿತು ಪಕ್ಷದ ಮಟ್ಟದಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪರಿಷತ್ ಚುನಾವಣೆಯ ಫಲಿತಾಂಶವನ್ನು ಮುಂದಿನ ರಾಜಕೀಯ ಬೆಳವಣಿಗೆಗಳ ಮುನ್ಸೂಚನೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹೇಳುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ಕ್ಷೇತ್ರಗಳ ಫಲಿತಾಂಶಗಳನ್ನೂ ಇದೇ ರೀತಿಯಲ್ಲಿ ನೋಡಬೇಕಲ್ಲವೇ ಎಂದು ಪ್ರಶ್ನಿಸಿದರು. ಚುನಾವಣೆಯ ಫಲಿತಾಂಶದಿಂದ ಕಲಿಯಬೇಕಾದ ಪಾಠಗಳಿದ್ದು, ಕಾರ್ಯಕರ್ತರನ್ನು ಮತ್ತಷ್ಟು ಸಂಘಟಿಸಿ ಪಕ್ಷವನ್ನು ಬಲಪಡಿಸುವುದಾಗಿ ತಿಳಿಸಿದರು.

ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಮತಪತ್ರ ಬಳಸಿದ್ದರೂ ಕಾಂಗ್ರೆಸ್ ಸೋತಿರುವ ಕುರಿತು ಮಾತನಾಡಿದ ಅವರು, ಚುನಾವಣಾ ಪ್ರಕ್ರಿಯೆಯಲ್ಲಿರುವ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನವೆಂಬರ್ ನಂತರ ಈ ಸಂಬಂಧ ಹೊಸ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದರು.

ಸಮುದಾಯವಾರು ಶಾಸಕರ ಸಭೆ ಕುರಿತು ಪ್ರತಿಕ್ರಿಯಿಸಿದ ಅವರು, ವಿವಿಧ ಸಮುದಾಯಗಳ ಸಮಸ್ಯೆಗಳು ಮತ್ತು ನ್ಯಾಯಾಲಯದ ತೀರ್ಪುಗಳ ಕುರಿತು ಚರ್ಚಿಸುವ ಉದ್ದೇಶದಿಂದ ಸಭೆ ಕರೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಅಧಿಕಾರಕ್ಕೆ ಬಂದ ಮೇಲೆ ಕಿರುಕುಳ ನೀಡಿದ ಅಧಿಕಾರಿಗಳ ಲೆಕ್ಕ ಚುಕ್ತಾ: ಹೆಚ್.ಡಿ. ಕೆ
Next: ಮೈಸೂರಿನಲ್ಲಿ ನವೆಂಬರ್ 26ರಂದು ರಾಜ್ಯಮಟ್ಟದ ಸಂವಿಧಾನ ದಿನಾಚರಣೆ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.