Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ಆಕ್ರೋಶ
  • Bangalore
  • Front news
  • Politics
  • State

ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ಆಕ್ರೋಶ

Praja Vahini October 30, 2026 1 minute read
WhatsApp Image 2026-08-22 at 18.26.42
Spread the love

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೃಹ ಇಲಾಖೆಯ ಕಾರ್ಯವೈಖರಿಯನ್ನು ಪ್ರಶ್ನಿಸಿರುವ ಅವರು, “ಮಂಗನ ಕೈಗೆ ಮಾಣಿಕ್ಯ ಸಿಕ್ಕಂತಾಗಿದೆ ಗೃಹ ಇಲಾಖೆಯ ಸ್ಥಿತಿ” ಎಂದು ಕಿಡಿಕಾರಿದ್ದಾರೆ.

“ಮಿಸ್ಟರ್ ತುಘಲಕ್ ಕೈಗೆ ಸಿಕ್ಕಿ ಪೊಲೀಸರು ಹೈರಾಣಾಗಿದ್ದಾರೆ” ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

ವಿಷಯಾಂತರ ಮಾಡುವುದು ಕಿಡಿಗೇಡಿಗಳ ಲಕ್ಷಣ ಎಂದು ಟೀಕಿಸಿರುವ ಕುಮಾರಸ್ವಾಮಿ, ವಿಷಯ ಬಿಟ್ಟು ಬೇರೆ ವಿಚಾರಗಳನ್ನು ಪ್ರಸ್ತಾಪಿಸುವುದೇಕೆ? ನೇರವಾಗಿ ಯುದ್ಧಕ್ಕೆ ಬನ್ನಿ, ಪಲಾಯನ ಮತ್ತು ಪಡಿಪಾಟಲು ಏಕೆ? ಎಂದು ಪ್ರಶ್ನಿಸಿದ್ದಾರೆ.

ಪ್ರಕರಣದ ದಿಕ್ಕು ತಪ್ಪಿಸಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, “ನೀವು, ನಿಮ್ಮ ತಂದೆ ಹಾಗೂ ಮುಖ್ಯಮಂತ್ರಿ ಸೇರಿ ರೂಪಿಸಿದ ಕುತಂತ್ರಕ್ಕೆ ಬಲಿಯಾದವರಿಗೇ ಕ್ಲೀನ್‌ಚಿಟ್ ನೀಡಲಾಗಿದೆ. ಆದರೆ ಕ್ಲೀನ್‌ಚಿಟ್ ನಿಮ್ಮ ಪಾಪಕ್ಕೆ ಪ್ರಾಯಶ್ಚಿತ್ತವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ಇಂತಹ ಐನಾತಿ ಐಡಿಯಾ ರೂಪಿಸಿದ ಗೃಹ ಸಚಿವರ ತನಿಖೆಯೇ ಇದೀಗ ಸ್ಟಿಂಗ್ ಆಗುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಸೋರಿಕೆಯಾಗುತ್ತಿರುವ ಸುದ್ದಿಗಳು ಈ ಅನುಮಾನಕ್ಕೆ ಪುಷ್ಟಿ ನೀಡುತ್ತಿವೆ ಎಂದೂ ಹೇಳಿದ್ದಾರೆ.

ಕೊನೆಯಲ್ಲಿ ಪ್ರಿಯಾಂಕ್ ಖರ್ಗೆಗೆ ನೇರ ಸವಾಲು ಹಾಕಿರುವ ಕುಮಾರಸ್ವಾಮಿ, “ರೀ ತುಘಲಕ್, ನೀವು ಆರಂಭಿಸಿದ್ದೀರಿ, ನಾನು ಮುಗಿಸುತ್ತೇನೆ” ಎಂದು ಗುಡುಗಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಆದಿವಾಸಿಗಳ ಕಲ್ಯಾಣಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ: ಸಚಿವ ಸಂಪುಟ ಒಪ್ಪಿಗೆ
Next: 38 ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ: ಎಂ.ಬಿ. ಪಾಟೀಲ್

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.