Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹೋಟೆಲ್‌ನಲ್ಲಿ ದುರಂತ: ಈಜುಕೊಳದಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸಾವು
  • Bangalore
  • Front news
  • State

ಹೋಟೆಲ್‌ನಲ್ಲಿ ದುರಂತ: ಈಜುಕೊಳದಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸಾವು

Praja Vahini October 31, 2026 1 minute read
IMG_2773
Spread the love

ಬೆಂಗಳೂರು: ನಗರದ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್‌ವೊಂದರಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಈಜುಕೊಳದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಓರಿಯಾಟ್ (45) ಹಾಗೂ ಅಲೆಕ್ಸಾಂಡರ್ ಮ್ಯಾಕ್ಸಿಲನ್ (59) ಎಂದು ಗುರುತಿಸಲಾಗಿದೆ.

ಈಜುಕೊಳದಲ್ಲಿ ಈಜುತ್ತಿದ್ದ ವೇಳೆ ವಿದ್ಯುತ್ ಆಘಾತ ತಗುಲಿ ಇಬ್ಬರೂ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ ಹೋಟೆಲ್ ವಲಯದಲ್ಲಿ ಆತಂಕ ಮೂಡಿಸಿದೆ.

ಹೋಟೆಲ್ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಮೃತ ಅಲೆಕ್ಸಾಂಡರ್ ಅವರ ಪತ್ನಿ ಹೋಟೆಲ್ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೋಟೆಲ್ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

About the Author

Praja Vahini

Editor

View All Posts

Spread the love

Post navigation

Previous: ಬೆಂಗಳೂರಿನಲ್ಲಿ ಇಂದಿನಿಂದ BREDAI Property Expo 2026 ಆರಂಭ
Next: ಕೆಎಸ್‌ಆರ್‌ಟಿಸಿಯಿಂದ 2,600 ವಿಶೇಷ ಬಸ್‌ಗಳ ವ್ಯವಸ್ಥೆ: ಪ್ರಯಾಣಿಕರಿಗೆ ಶೇ.10ರವರೆಗೆ ರಿಯಾಯಿತಿ

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.