Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ARAI ಘಟಕಕ್ಕೆ ಭೂಮಿ ನೀಡುವ ವಿಚಾರ: ಎಚ್.ಡಿ.ಕೆ ಆರೋಪಕ್ಕೆ ಡಿಕೆಶಿ ತಿರುಗೇಟು
  • Bangalore
  • Front news
  • Politics
  • State

ARAI ಘಟಕಕ್ಕೆ ಭೂಮಿ ನೀಡುವ ವಿಚಾರ: ಎಚ್.ಡಿ.ಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Praja Vahini October 31, 2026 1 minute read
Screenshot_2026-07-07-20-37-54-94_a23b203fd3aafc6dcb84e438dda678b6
Spread the love

ಮಂಡ್ಯ: ಮಂಡ್ಯದಲ್ಲಿ ARAI (ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ) ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರ ಭೂಮಿ ಒದಗಿಸಲು ವಿಳಂಬ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ARAI ಘಟಕ ಸ್ಥಾಪನೆಗಾಗಿ ಆರಂಭದಲ್ಲಿ 100 ಎಕರೆ ಜಮೀನು ಕೇಳಲಾಗಿತ್ತು. ಆದರೆ ಇದೀಗ 500 ಎಕರೆ ಜಮೀನಿನ ಬೇಡಿಕೆ ಇಟ್ಟಿದ್ದಾರೆ. ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರ ಖಂಡಿತವಾಗಿಯೂ ಅಗತ್ಯ ಸಹಕಾರ ನೀಡಲಿದೆ. ಕಳೆದ ಎರಡು-ಮೂರು ವರ್ಷಗಳಿಂದ ಸರ್ಕಾರ ಜಾಗ ನೀಡಿಲ್ಲ ಎಂಬ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಮಂಡ್ಯ ಶಾಸಕ ರವಿ ಅವರೂ ಈಗಾಗಲೇ ಜಮೀನು ನೀಡುವ ಕುರಿತು ಘೋಷಣೆ ಮಾಡಿದ್ದಾರೆ. ಹೀಗಿರುವಾಗ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸುವುದು ಸರಿಯಲ್ಲ. ಅಭಿವೃದ್ಧಿ ಪರವಾದ ಉತ್ತಮ ಕೆಲಸಗಳಿಗೆ ಸರ್ಕಾರ ಸದಾ ಬೆಂಬಲ ನೀಡಲಿದೆ ಎಂದರು.

ARAI ಅಧಿಕಾರಿಗಳು ತಮಗೆ ಯಾವ ಪ್ರದೇಶದಲ್ಲಿ ಜಮೀನು ಬೇಕು ಎಂಬುದನ್ನು ನಿಖರವಾಗಿ ಗುರುತಿಸಿ ತಿಳಿಸಬೇಕು. ಅವರು ಸೂಚಿಸುವ ಸ್ಥಳವನ್ನು ಪರಿಶೀಲಿಸಿ, ಅಗತ್ಯವಿದ್ದರೆ ಭೂಸ್ವಾಧೀನ ಪ್ರಕ್ರಿಯೆ ಮೂಲಕ ಜಮೀನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು.

ಆದರೆ, ಭೂಸ್ವಾಧೀನ ಪ್ರಕ್ರಿಯೆ ಕೈಗೊಂಡಾಗ ರೈತರಿಂದ ವಿರೋಧ ವ್ಯಕ್ತವಾಗುವ ಸಾಧ್ಯತೆಯಿದೆ. ರೈತರನ್ನು ಅವರ ಜಮೀನಿನಿಂದ ಒಕ್ಕಲೆಬ್ಬಿಸುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದು ಸರ್ಕಾರದ ಉದ್ದೇಶ. ಆದ್ದರಿಂದ ARAI ಅಧಿಕಾರಿಗಳೇ ಸೂಕ್ತ ಸ್ಥಳವನ್ನು ಗುರುತಿಸಿ ಪ್ರಸ್ತಾವನೆ ಸಲ್ಲಿಸಲಿ. ಅದಕ್ಕೆ ಅನುಗುಣವಾಗಿ ಜಮೀನು ಒದಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು

About the Author

Praja Vahini

Editor

View All Posts

Spread the love

Post navigation

Previous: ಮೇಕೆದಾಟು ಯೋಜನೆಗೆ ರಾಜ್ಯ ಸರ್ಕಾರದ ವೇಗ:
Next: ವಿಜಯ್ ಸರ್ಕಾರದಿಂದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ, ಉಪ ಜೈಲು ಅಧೀಕ್ಷಕ ಸಸ್ಪೆಂಡ್!

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.