Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ
  • Bangalore
  • Front news
  • Politics
  • State

ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ

Praja Vahini November 3, 2026
IMG_2853
Spread the love

ಬೆಂಗಳೂರು, ನ. 3: ಇತ್ತೀಚೆಗೆ ನಡೆದ ಇಬ್ಬರು ವಕೀಲರ ಹತ್ಯೆ ಹಾಗೂ ವೃತ್ತಿನಿರತ ವಕೀಲರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ, ವಕೀಲರಿಗೆ ಸೂಕ್ತ ಭದ್ರತೆ ಮತ್ತು ಪರಿಣಾಮಕಾರಿ ಕಾನೂನು ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ವತಿಯಿಂದ ಇಂದು ಹೈಕೋರ್ಟ್‌ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಿಟಿ ಸಿವಿಲ್‌ ಕೋರ್ಟ್‌ ಮತ್ತು ಹೈಕೋರ್ಟ್‌ ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳ ಕಲಾಪಗಳಿಂದ ವಕೀಲರು ದೂರ ಉಳಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ವಿವಿಧ ವಕೀಲರ ಸಂಘಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿವೆ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್‌ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಚ್‌.ವಿ. ಪ್ರವೀಣ್‌ಗೌಡ ಹಾಗೂ ಉಪಾಧ್ಯಕ್ಷ ಗಿರೀಶ್‌ಕುಮಾರ್‌ ತಿಳಿಸಿದರು.

ವೈಟ್‌ಫೀಲ್ಡ್‌ನ ವಕೀಲ ಮಂಜುನಾಥ್‌ ಅವರ ಹತ್ಯೆ, ಅನ್ನಪೂರ್ಣೇಶ್ವರಿನಗರದ ವಕೀಲ ಶ್ರೀರಾಮ್‌ ಅವರ ಕೊಲೆ ಹಾಗೂ ಗೌರಿಬಿದನೂರಿನ ವಕೀಲ ವೆಂಕಟರಮಣ ಸಣ್ಣಕ್ಕಿ ಅವರ ಮೇಲಿನ ಕೊಲೆ ಯತ್ನ ಸೇರಿದಂತೆ ಇತ್ತೀಚಿನ ಘಟನೆಗಳು ವಕೀಲರ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿವೆ. ವಕೀಲರು ನಿರ್ಭೀತಿಯಿಂದ ವೃತ್ತಿ ನಿರ್ವಹಿಸಲು ಅಗತ್ಯ ಭದ್ರತೆ ಒದಗಿಸುವುದರ ಜತೆಗೆ, ಅವರ ರಕ್ಷಣೆಗೆ ಪರಿಣಾಮಕಾರಿ ಕಾನೂನು ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇಂದು ಬೆಳಿಗ್ಗೆ 11 ಗಂಟೆಗೆ ಆರಂಭವಾದ ಪ್ರತಿಭಟನೆಯಿಂದ ಹೈಕೋರ್ಟ್‌ ಆವರಣ ಬಿಕೋ ಎನ್ನುತ್ತಿತ್ತು. ಈ ಸಂದರ್ಭದಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರು ನ್ಯಾಯಾಧೀಶರನ್ನು ಭೇಟಿ ಮಾಡಿ, ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಹಿನ್ನೆಲೆಯಲ್ಲಿ ಯಾವುದೇ ವ್ಯತಿರಿಕ್ತ ಆದೇಶಗಳನ್ನು ಹೊರಡಿಸದಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ನ್ಯಾಯಾಧೀಶರು, ಅಂತಹ ಆದೇಶಗಳನ್ನು ನೀಡುವುದಿಲ್ಲ ಎಂದು ಭರವಸೆ ನೀಡಿದರು.

ವಕೀಲರ ಮೇಲಿನ ದಾಳಿಗಳನ್ನು ತಡೆಗಟ್ಟಲು ರಕ್ಷಣಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಹಾಗೂ ವಕೀಲರು ಯಾವುದೇ ಭಯವಿಲ್ಲದೆ ವೃತ್ತಿ ನಿರ್ವಹಿಸುವಂತಹ ವಾತಾವರಣ ನಿರ್ಮಿಸಬೇಕು ಎಂದು ವಿವೇಕ್‌ ಸುಬ್ಬಾರೆಡ್ಡಿ ಆಗ್ರಹಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಟಿಡಿಆರ್‌ ಖರೀದಿ, ಮಾರಾಟಕ್ಕೆ ಡಿಜಿಟಲ್ ವೇದಿಕೆ: ಜಿಬಿಎ ಮಹತ್ವದ ನಿರ್ಧಾರ
Next: ಅಂಗವಿಕಲ ವ್ಯಕ್ತಿಯಿಂದ ಅಂಗವಿಕಲನ ಕುಟುಂಬಕ್ಕೆ ಸೂರಿನ ಆಸರೆ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.