Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮುರಾಸು ಚಂಡಮಾರುತಕ್ಕೆ ತೆಲಂಗಾಣ, ಆಂಧ್ರ ತತ್ತರ
  • Uncategorized

ಮುರಾಸು ಚಂಡಮಾರುತಕ್ಕೆ ತೆಲಂಗಾಣ, ಆಂಧ್ರ ತತ್ತರ

Praja Vahini November 5, 2026 1 minute read
Spread the love

ಹೈದರಾಬಾದ್: ಮುರಾಸು ಚಂಡಮಾರುತದ ಪ್ರಭಾವದಿಂದ ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಪ್ರವಾಹದ ಭೀತಿಗೆ ಸಿಲುಕಿವೆ. ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಕ್ಷಣಾ ಕಾರ್ಯಾಚರಣೆಗಳೂ ಸವಾಲಾಗಿ ಪರಿಣಮಿಸಿವೆ. ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ಮೀನುಗಾರರನ್ನು ರಕ್ಷಿಸಲು ತೆರಳಿದ್ದ ಎಸ್‌ಡಿಆರ್‌ಎಫ್ ತಂಡದ ಎರಡು ಬೋಟ್‌ಗಳು ಪ್ರವಾಹದ ನೀರಿನ ರಭಸಕ್ಕೆ ಪಲ್ಟಿಯಾಗಿರುವ ಘಟನೆ ಆತಂಕ ಮೂಡಿಸಿದೆ.

ಮೀನುಗಾರರ ರಕ್ಷಣೆಗೆ ತೆರಳಿದ್ದ ಬೋಟ್‌ಗಳೇ ಪಲ್ಟಿ!

ಖಮ್ಮಂ ಜಿಲ್ಲೆಯ ಸತ್ತುಪಲ್ಲಿ ಮಂಡಲದ ಬೇತುಪಲ್ಲಿ ಕೆರೆಯಲ್ಲಿ ಐವರು ಮೀನುಗಾರರು ಪ್ರವಾಹದ ನೀರಿನಲ್ಲಿ ಸಿಲುಕಿಕೊಂಡಿದ್ದರು. ಇವರನ್ನು ರಕ್ಷಿಸಲು ಎಸ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ಬೋಟ್‌ಗಳಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ನೀರಿನ ಭಾರಿ ಹರಿವಿನಿಂದ ಎರಡೂ ಬೋಟ್‌ಗಳು ಪಲ್ಟಿಯಾಗಿವೆ. ಪರಿಣಾಮ 11 ರಕ್ಷಣಾ ಸಿಬ್ಬಂದಿ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ರಕ್ಷಣಾ ತಂಡಗಳು ಪರ್ಯಾಯ ಬೋಟ್‌ಗಳ ನೆರವಿನಿಂದ ಕಾರ್ಯಾಚರಣೆ ನಡೆಸಿವೆ. 11 ಸಿಬ್ಬಂದಿಯಲ್ಲಿ 10 ಮಂದಿಯನ್ನು ಸುರಕ್ಷಿತವಾಗಿ ದಡಕ್ಕೆ ಕರೆತರಲಾಗಿದ್ದು, ಮತ್ತೊಬ್ಬ ಸಿಬ್ಬಂದಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಕಾರ್ಯಾಚರಣೆಯ ಉಸ್ತುವಾರಿ ವಹಿಸಿಕೊಂಡ ಸಿಎಂ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಅವರು ರಕ್ಷಣಾ ಕಾರ್ಯಾಚರಣೆಯ ಮೇಲೆ ನಿಗಾ ವಹಿಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆಂಧ್ರದಲ್ಲಿ 20ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ

ಇತ್ತ ಆಂಧ್ರಪ್ರದೇಶದಲ್ಲೂ ಮುರಾಸು ಚಂಡಮಾರುತದ ಪರಿಣಾಮ ಭಾರೀ ಮಳೆಯಾಗುತ್ತಿದೆ. ಪೋಲವರಂ ಹಾಗೂ ಪೂರ್ವ ಗೋದಾವರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಪ್ರವಾಹದ ನೀರು ರಸ್ತೆಗಳ ಮೇಲೆ ಹರಿಯುತ್ತಿರುವುದರಿಂದ 20ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಹಲವು ಪ್ರದೇಶಗಳಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚಂದ್ರಬಾಬು ನಾಯ್ಡುಗೆ ಪ್ರಧಾನಿ ಮೋದಿ ಕರೆ

ಆಂಧ್ರಪ್ರದೇಶದ ಪ್ರವಾಹ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡುವ ಭರವಸೆಯನ್ನೂ ನೀಡಿದ್ದಾರೆ. ಮತ್ತೊಂದೆಡೆ, ಸಿಎಂ ಚಂದ್ರಬಾಬು ನಾಯ್ಡು ಅವರು ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಮುರಾಸು ಚಂಡಮಾರುತದ ಪರಿಣಾಮ ಎರಡೂ ರಾಜ್ಯಗಳಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಮಳೆ ಮತ್ತು ಪ್ರವಾಹದ ನಡುವೆ ಜನರ ರಕ್ಷಣೆ ಹಾಗೂ ಪರಿಹಾರ ಕಾರ್ಯಗಳಿಗೆ ಆಡಳಿತ ವ್ಯವಸ್ಥೆ ಹೆಚ್ಚಿನ ಆದ್ಯತೆ ನೀಡಿದೆ.

About the Author

Praja Vahini

Editor

View All Posts

Spread the love

Post navigation

Previous: ಹಲವು ಶತಕಗಳ ನಡುವೆ ಕೊಹ್ಲಿಆಯ್ಕೆ ಮಾಡಿದ ಬೆಸ್ಟ್ ಇನ್ನಿಂಗ್ಸ್ ಇದೇ!
Next: ಟನ್‌ಗೆ ₹3,600 ದರ ಘೋಷಣೆ, ರೈತ ಸಂಘಟನೆಗಳಲ್ಲಿ ಭಿನ್ನಮತ!

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.