Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಂಡೀಪುರ ಅರಣ್ಯ ಸಂರಕ್ಷಣೆಗೆ ಸಚಿವ ರಾಮಲಿಂಗಾ ರೆಡ್ಡಿ ಕಟ್ಟುನಿಟ್ಟಿನ ಸೂಚನೆ
  • Bangalore
  • Front news
  • Politics
  • State

ಬಂಡೀಪುರ ಅರಣ್ಯ ಸಂರಕ್ಷಣೆಗೆ ಸಚಿವ ರಾಮಲಿಂಗಾ ರೆಡ್ಡಿ ಕಟ್ಟುನಿಟ್ಟಿನ ಸೂಚನೆ

Praja Vahini November 7, 2026 1 minute read
Spread the love

ಗುಂಡ್ಲುಪೇಟೆ: ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾ ರೆಡ್ಡಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿ, ವನ್ಯಜೀವಿ ಸಂರಕ್ಷಣೆ, ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣ, ಅರಣ್ಯ ಸಂರಕ್ಷಣೆ ಹಾಗೂ ಮುಂಚೂಣಿ ಸಿಬ್ಬಂದಿಯ ಕ್ಷೇಮಾಭಿವೃದ್ಧಿ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ 155ರ ಗಡಿ ದಾಟಿರುವುದು ಹಾಗೂ ಪ್ರತಿ ಚದರ ಕಿಲೋಮೀಟರ್ ವ್ಯಾಪ್ತಿಯಲ್ಲಿ ಜಿಂಕೆ, ಕಾಡೆಮ್ಮೆ ಮತ್ತು ಕಡವೆಗಳಂತಹ ಬೇಟೆ ಪ್ರಾಣಿಗಳು ಹೇರಳವಾಗಿರುವುದು ಆರೋಗ್ಯಕರ ಪರಿಸರ ವ್ಯವಸ್ಥೆಗೆ ಸಾಕ್ಷಿಯಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅರಣ್ಯ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

ಅರಣ್ಯ ಕಣ್ಗಾವಲು ಬಲಪಡಿಸುವ ಉದ್ದೇಶದಿಂದ ಬಂಡೀಪುರ ವಿಭಾಗ ಸಿದ್ಧಪಡಿಸಿರುವ ‘ಡ್ರೋನ್ ಪೈಲಟ್ ಕ್ಷೇತ್ರ ಕೈಪಿಡಿ’ಯನ್ನು ಬಿಡುಗಡೆ ಮಾಡಿದರು. ಪ್ರವಾಸಿಗರ ಸುರಕ್ಷತೆ ಮತ್ತು ಸೇವೆಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ‘ಇಕೋ-ಟೂರಿಸಂ ಕ್ವಾಲಿಟಿ ಅಶ್ಯುರೆನ್ಸ್ ಮತ್ತು ವಿಸಿಟರ್ ರಿಡ್ರೆಸಲ್ ಪ್ಲಾಟ್‌ಫಾರ್ಮ್’ಗೂ ಚಾಲನೆ ನೀಡಿದರು.

ಅರಣ್ಯ ರಕ್ಷಣೆಯಲ್ಲಿ ತೊಡಗಿರುವ ಮುಂಚೂಣಿ ಸಿಬ್ಬಂದಿಗೆ ರೇಷನ್ ಕಿಟ್‌ಗಳು ಹಾಗೂ ಕ್ಷೇತ್ರ ಕಾರ್ಯಾಚರಣೆಗಾಗಿ ನೂತನ ವಾಹನಗಳನ್ನು ವಿತರಿಸಿದರು. ಎಲಿಫೆಂಟ್ ಟಾಸ್ಕ್ ಫೋರ್ಸ್ ಮತ್ತು ಚಿರತೆ ಕಾರ್ಯಪಡೆ ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿ ಸಾರ್ವಜನಿಕರ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು. ಥರ್ಮಲ್ ಡ್ರೋನ್‌ಗಳು, ಜಿಪಿಎಸ್ ರೇಡಿಯೋ ಕಾಲರ್‌ಗಳು, ವನ್ಯಜೀವಿ ಟೆಲಿಮೆಟ್ರಿ ತಂತ್ರಜ್ಞಾನ, ಶ್ವಾನದಳ ಹಾಗೂ ಜಿಲ್ಲಾ ಸಂಘರ್ಷ ನಿಯಂತ್ರಣ ಕೇಂದ್ರದ ಕಾರ್ಯವೈಖರಿಯನ್ನು ವೀಕ್ಷಿಸಿದರು.

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ರೈಲ್ವೆ ಬ್ಯಾರಿಕೇಡ್, ಸೋಲಾರ್ ತಂತಿಬೇಲಿ ಮತ್ತು ಆನೆ ಕಂದಕಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದರು. ಬಂಡೀಪುರ ವ್ಯಾಪ್ತಿಯ ಅರಣ್ಯ ಒತ್ತುವರಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವುದರ ಜೊತೆಗೆ ಕಳ್ಳಬೇಟೆ ತಡೆ ಶಿಬಿರಗಳನ್ನು (APC) ತಕ್ಷಣ ದುರಸ್ತಿಗೊಳಿಸಲು ಕಟ್ಟುನಿಟ್ಟಿನ ಆದೇಶ ನೀಡಿದರು.

ಕೇರಳ ಗಡಿಯ ಮೂಲೆಹೊಳೆ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ, ಹೊರರಾಜ್ಯಗಳಿಂದ ಅಕ್ರಮವಾಗಿ ತರಲಾಗುವ ವೈದ್ಯಕೀಯ ತ್ಯಾಜ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ವನ್ಯಜೀವಿಗಳ ದಾಳಿಯಿಂದ ಬೆಳೆ ನಷ್ಟ ಅನುಭವಿಸುವ ರೈತರಿಗೆ ಶೀಘ್ರ ಪರಿಹಾರ ಹಾಗೂ ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಅರಣ್ಯದಲ್ಲಿ ಸಫಾರಿ ನಡೆಸಿ ಪರಿಸರ ಸ್ಥಿತಿಗತಿ ಪರಿಶೀಲಿಸಿದ ಸಚಿವರು, ಆಕ್ರಮಣಕಾರಿ ಲ್ಯಾಂಟಾನಾ ಮತ್ತು ಸೆನ್ನಾ ಸ್ಪೆಕ್ಟಾಬಿಲಿಸ್ ಸಸ್ಯಗಳನ್ನು ವೈಜ್ಞಾನಿಕವಾಗಿ ತೆರವುಗೊಳಿಸುವಂತೆ ಸೂಚಿಸಿದರು. ಮುಂಬರುವ ದಿನಗಳಲ್ಲಿ ಕಾಳ್ಗಿಚ್ಚು ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ರಾಜನ್ ಸೇರಿದಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಸಕಾಲದಲ್ಲಿ ಅರ್ಜಿ ವಿಲೇವಾರಿಗೆ ಸಚಿವ ರಘುಮೂರ್ತಿ ಸೂಚನೆ
Next: ಶಾಸಕ ಕೆ.ವೈ. ನಂಜೇಗೌಡಗೆ ಹೈಕೋರ್ಟ್ ಬಿಗ್ ರಿಲೀಫ್

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.