Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪಟಾಕಿ ಅಂಗಡಿಗೆ ಆಕಸ್ಮಿಕ ಬೆಂಕಿ; ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ
  • Cinema
  • State
  • Uncategorized

ಪಟಾಕಿ ಅಂಗಡಿಗೆ ಆಕಸ್ಮಿಕ ಬೆಂಕಿ; ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

Praja Vahini November 8, 2026
Screenshot_2026-11-08-17-28-06-73_6012fa4d4ddec268fc5c7112cbb265e7
Spread the love

ಚಿಂಚೋಳಿ: ತಾಲ್ಲೂಕಿನ ಸುಲೇಪೇಟ ಗ್ರಾಮದ ಬಸವೇಶ್ವರ ವೃತ್ತದಲ್ಲಿರುವ ಸಿದ್ದಸಿರಿ ಬ್ಯಾಂಕ್ ಎದುರು ದೀಪಾವಳಿ ಹಬ್ಬದ ನಿಮಿತ್ತ ಪಟಾಕಿ ಮಾರಾಟಕ್ಕಾಗಿ ತೆರೆಯಲಾಗಿದ್ದ ಅಂಗಡಿಗೆ ಭಾನುವಾರ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ತಗುಲಿದೆ.

ಬೆಂಕಿಯ ಪರಿಣಾಮ ಅಂಗಡಿಯಲ್ಲಿದ್ದ ಪಟಾಕಿಗಳು ಸುಟ್ಟು ಭಸ್ಮವಾಗಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಇಡೀ ಅಂಗಡಿಗೆ ವ್ಯಾಪಿಸಿ ದಟ್ಟ ಹೊಗೆ ಆವರಿಸಿತು. ಪಟಾಕಿ ಅಂಗಡಿಯ ಸುತ್ತಮುತ್ತ ನಿಲ್ಲಿಸಿದ್ದ ಆಟೋಗಳು ಹಾಗೂ ದ್ವಿಚಕ್ರ ವಾಹನಗಳಿಗೂ ಬೆಂಕಿಯ ಕೆನ್ನಾಲಿಗೆ ತಗುಲುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಅಂಗಡಿಯ ಸುತ್ತ ಜನಸಂದಣಿ ಹೆಚ್ಚಿದ್ದರಿಂದ ಸ್ಥಳೀಯರಲ್ಲಿ ಆತಂಕ ಮೂಡಿತ್ತು. ಅಲ್ಲದೆ, ಸಮೀಪದಲ್ಲೇ ಹೋಟೆಲ್‌ಗಳು ಹಾಗೂ ಜನವಸತಿ ಕಟ್ಟಡಗಳಿದ್ದ ಕಾರಣ ಬೆಂಕಿ ಪಕ್ಕದ ಅಂಗಡಿಗಳಿಗೆ ಅಥವಾ ಕಟ್ಟಡಗಳಿಗೆ ಹರಡಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.

ಆದರೆ, ಸ್ಥಳದಲ್ಲಿದ್ದ ಸಾರ್ವಜನಿಕರು ಸಮಯ ಪ್ರಜ್ಞೆ ಮೆರೆದು ಕೂಡಲೇ ನೀರು ಬಳಸಿ ಬೆಂಕಿ ನಂದಿಸಲು ಮುಂದಾದರು. ಪರಿಣಾಮ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯುವ ಮೂಲಕ ಸಂಭವಿಸಬಹುದಾಗಿದ್ದ ಭಾರಿ ದುರಂತವನ್ನು ತಪ್ಪಿಸಲಾಯಿತು.

ಘಟನೆಯಿಂದ ಪಟಾಕಿ ಅಂಗಡಿಯಲ್ಲಿದ್ದ ಸಾಮಗ್ರಿಗಳು ಸುಟ್ಟುಹೋಗಿದ್ದು, ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

About the Author

Praja Vahini

Editor

View All Posts

Spread the love

Post navigation

Previous: ಶಾಸಕ ಕೆ.ವೈ. ನಂಜೇಗೌಡಗೆ ಹೈಕೋರ್ಟ್ ಬಿಗ್ ರಿಲೀಫ್
Next: ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳಿಗೆ ಕುತ್ತು: ಸಿಎಂ

Views:

344

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.