Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಏರ್ ಇಂಡಿಯಾ ವಿಮಾನಕ್ಕೆ ಹೈಜಾಕ್ ಬೆದರಿಕೆ
  • Front news
  • State

ಏರ್ ಇಂಡಿಯಾ ವಿಮಾನಕ್ಕೆ ಹೈಜಾಕ್ ಬೆದರಿಕೆ

Praja Vahini November 11, 2026
IMG_2936
Spread the love

ಕೋಲ್ಕತ್ತಾ: ಕೋಲ್ಕತ್ತಾದಿಂದ ಮುಂಬೈಗೆ ಪ್ರಯಾಣ ಬೆಳೆಸಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನಕ್ಕೆ ಹೈಜಾಕ್ ಬೆದರಿಕೆ ಬಂದಿರುವ ಘಟನೆ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದೆ. ವಿಮಾನದ ಶೌಚಾಲಯದ ಕನ್ನಡಿಯಲ್ಲಿ ಹೈಜಾಕ್ ಮಾಡುವುದಾಗಿ ಬೆದರಿಕೆ ಹಾಕಿರುವ ಕೈಬರಹದ ಸಂದೇಶ ಪತ್ತೆಯಾಗಿದ್ದು, ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.

ನವೆಂಬರ್ 11ರಂದು ಬೆಳಗ್ಗೆ 10.20ರ ಸುಮಾರಿಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಏರ್ ಇಂಡಿಯಾದ ಎಐ 2772 ವಿಮಾನವು ಮುಂಬೈಗೆ ಹಾರಾಟ ನಡೆಸಲು ಸಿದ್ಧವಾಗಿದ್ದ ವೇಳೆ ಶೌಚಾಲಯದ ಕನ್ನಡಿಯಲ್ಲಿ ಬೆದರಿಕೆ ಸಂದೇಶ ಪತ್ತೆಯಾಗಿದೆ.

ಕೂಡಲೇ ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ನೀಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಕೆಳಗಿಳಿಸಲಾಗಿದೆ. ನಂತರ ವಿಮಾನವನ್ನು ಪ್ರತ್ಯೇಕ ಐಸೋಲೇಷನ್ ಬೇಗೆ ಸ್ಥಳಾಂತರಿಸಿ ತಪಾಸಣೆ ಆರಂಭಿಸಲಾಗಿದೆ.

ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸೇರಿದಂತೆ ವಿವಿಧ ಭದ್ರತಾ ತಂಡಗಳು ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸುವ ಕಾರ್ಯ ಕೈಗೊಂಡಿವೆ. ಯಾವುದೇ ಅಪಾಯಕಾರಿ ವಸ್ತುಗಳು ಪತ್ತೆಯಾಗಿವೆಯೇ ಎಂಬ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ.

ಇತ್ತೀಚಿನ ದಿನಗಳಲ್ಲಿ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಇಂತಹ ಬೆದರಿಕೆ ಘಟನೆಗಳು ಮರುಕಳಿಸುತ್ತಿವೆ. ಅಕ್ಟೋಬರ್ 23ರಂದು ವಿಮಾನ ನಿಲ್ದಾಣದ ಮಹಿಳೆಯರ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಚೀಟಿ ಪತ್ತೆಯಾಗಿತ್ತು. ಅಕ್ಟೋಬರ್ 24ರಂದು ಫುಕೆಟ್‌ನಿಂದ ಬಂದಿದ್ದ ಇಂಡಿಗೋ ವಿಮಾನದಲ್ಲೂ ಬಾಂಬ್ ಬೆದರಿಕೆ ಸಂದೇಶ ಕಂಡುಬಂದಿತ್ತು.

ಸದ್ಯ ಏರ್ ಇಂಡಿಯಾ ವಿಮಾನಕ್ಕೆ ಬಂದಿರುವ ಬೆದರಿಕೆಯ ಹಿಂದಿನ ವ್ಯಕ್ತಿ ಯಾರು ಮತ್ತು ಸಂದೇಶದ ಉದ್ದೇಶವೇನು ಎಂಬ ಬಗ್ಗೆ ತನಿಖೆ ನಡೆಯಬೇಕಿದೆ.

About the Author

Praja Vahini

Editor

View All Posts

Spread the love

Post navigation

Previous: ಭಕ್ತರಿಗೆ ವಿದಾಯ ಹೇಳಿದ ಹಾಸನಾಂಬೆ
Next: ಅರ್ಹ ಪ್ರತಿಯೊಬ್ಬ ರೈತರಿಗೂ ಎರಡು ಕಂತುಗಳಲ್ಲಿ ₹5,000 ಬರಪರಿಹಾರ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.