Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅರ್ಹ ಪ್ರತಿಯೊಬ್ಬ ರೈತರಿಗೂ ಎರಡು ಕಂತುಗಳಲ್ಲಿ ₹5,000 ಬರಪರಿಹಾರ
  • Bangalore
  • Front news
  • Politics
  • State

ಅರ್ಹ ಪ್ರತಿಯೊಬ್ಬ ರೈತರಿಗೂ ಎರಡು ಕಂತುಗಳಲ್ಲಿ ₹5,000 ಬರಪರಿಹಾರ

Praja Vahini November 11, 2026
WhatsApp Image 2026-08-14 at 18.35.23
Spread the love

ಬೆಂಗಳೂರು: ರಾಜ್ಯದ ಅರ್ಹ ಪ್ರತಿಯೊಬ್ಬ ರೈತರಿಗೂ ಎರಡು ಕಂತುಗಳಲ್ಲಿ ಒಟ್ಟು ₹5,000 ಬರ ಪರಿಹಾರ ನೀಡಲಾಗುವುದು. ಈಕುರಿತು ರೈತರು ಯಾವುದೇ ಗೊಂದಲ ಅಥವಾ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಭರವಸೆ ನೀಡಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ ಕಂತಿನ ಪರಿಹಾರದ ಹಣಈಗಾಗಲೇ ಅನೇಕ ರೈತರ ಖಾತೆಗಳಿಗೆ ಜಮೆಯಾಗಿದೆ. ಉಳಿದ ಅರ್ಹ ರೈತರಿಗೂ ಹಣ ತಲುಪಿಸಲು ಸರ್ಕಾರ ವಿಶೇಷ ಸೂತ್ರ ರೂಪಿಸಿದೆಎಂದು ತಿಳಿಸಿದರು.

ಪ್ರತಿಯೊಬ್ಬ ರೈತರಿಗೂ ನಿಗದಿತ ಪರಿಹಾರದ ಮೊತ್ತವನ್ನು ನೀಡಲಾಗುತ್ತಿದೆ. ಸರಿಯಾದ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ.ಆದರೆ ಕೆಲವು ರೈತರ ಖಾತೆಗಳಲ್ಲಿ ತಾಂತ್ರಿಕ ಸಮಸ್ಯೆ ಹಾಗೂ ಇತರ ಅಡಚಣೆಗಳಿರುವುದರಿಂದ ಹಣ ಜಮೆಯಾಗಿಲ್ಲ. ಅಂತಹಸಮಸ್ಯೆಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಪರಿಹಾರ ಹಣ ಪಾವತಿಸಲಾಗುವುದು ಎಂದರು.

ಕೇಂದ್ರದಿಂದ ಪರಿಹಾರ ಬಾರದಿದ್ದರೂ ರಾಜ್ಯ ಸರ್ಕಾರದಿಂದ ನೆರವು

ಕೇಂದ್ರ ಸರ್ಕಾರದಿಂದ ಪರಿಹಾರದ ಅನುದಾನ ಬಿಡುಗಡೆಯಾಗದಿದ್ದರೂ ರಾಜ್ಯ ಸರ್ಕಾರ ರೈತರಿಗೆ ನೀಡಿದ ಭರವಸೆಯಂತೆ ಎರಡುಕಂತುಗಳಲ್ಲಿ ಒಟ್ಟು ₹5,000 ಪಾವತಿಸಲಿದೆ. ಒಂದು ವೇಳೆ ರೈತರಿಗೆ ತಲುಪಬೇಕಾದ ಪರಿಹಾರದ ಮೊತ್ತದಲ್ಲಿ ವ್ಯತ್ಯಾಸ ಕಂಡುಬಂದರೆ ಅದನ್ನುಸರಿಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಒಂದೇ ಬಟನ್ ಮೂಲಕ ರೈತರ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಿದೆ. ಕೆಲವು ಬ್ಯಾಂಕ್ ಖಾತೆಗಳಲ್ಲಿನ ದೋಷಗಳು ಹಾಗೂ ಸಾಲದಖಾತೆಗಳಿಗೆ ಲಿಂಕ್ ಆಗಿರುವ ಸಮಸ್ಯೆಗಳಿಂದ ಹಣ ತಲುಪಿಲ್ಲ. ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿ ತಾಂತ್ರಿಕ ಅಡಚಣೆಗಳನ್ನುನಿವಾರಿಸಿದ ಬಳಿಕ ಅರ್ಹ ರೈತರಿಗೆ ಪರಿಹಾರ ಮೊತ್ತವನ್ನು ತಲುಪಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಏರ್ ಇಂಡಿಯಾ ವಿಮಾನಕ್ಕೆ ಹೈಜಾಕ್ ಬೆದರಿಕೆ
Next: ಪಂಜಾಬ್ ಸೇರಿದ ಹಾರ್ದಿಕ್ ಪಾಂಡ್ಯ, ಮುಂಬೈಪಾಲಾದ ಅರ್ಷದೀಪ್ ಸಿಂಗ್

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.