Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಖಜಾನೆ ಖಾಲಿಯಾದ ಸರಕಾರ: ಜಗದೀಶ ಶೆಟ್ಟರ್
  • Bangalore
  • Politics
  • State

ಖಜಾನೆ ಖಾಲಿಯಾದ ಸರಕಾರ: ಜಗದೀಶ ಶೆಟ್ಟರ್

Praja Vahini November 11, 2026 1 minute read
ce27ad2c-4482-4811-ab95-b18bc97306f8
Spread the love

ಬೆಂಗಳೂರು: ರಾಜ್ಯದ ಖಜಾನೆ ಖಾಲಿಯಾಗಿದೆ. ಪ್ರತಿಯೊಂದು ವಸ್ತುಗಳ ದರ ಏರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ತಿಳಿಸಿದರು. ಸರಕಾರ ಡಿ.ಕೆ.ಶಿವಕುಮಾರ್ ಅವರ ನಿಯಂತ್ರಣದಲ್ಲಿಲ್ಲ ಎಂದು ಟೀಕಿಸಿದ್ದಾರೆ.

ರಾಜ್ಯ ಸರಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ರಾಜ್ಯ ಘಟಕದ ವತಿಯಿಂದ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.

ಈ ಸರಕಾರಕ್ಕೆ ಕಾಂಗ್ರೆಸ್ಸಿನ ಶಾಸಕರೇ ಹಿಡಿಶಾಪ ಹಾಕುತ್ತಿದ್ದಾರೆ ಎಂದರು. ಉಚಿತ ಸಾರಿಗೆ ವ್ಯವಸ್ಥೆಯಿಂದ ಸಾರಿಗೆ ಸಂಸ್ಥೆಗಳಿಗೆ ಕೊಡಬೇಕಾದ 6 ಸಾವಿರ ಕೋಟಿ ಹಣವನ್ನು ಸರಕಾರ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದರು. ಸ್ಟಿಂಗ್ ಆಪರೇಷನ್, ಎಥೆನಾಲ್ ವಿಚಾರದಲ್ಲಿ ಚರ್ಚೆ ಹುಟ್ಟು ಹಾಕಿ ಗಮನ ಬೇರೆಡೆ ಸೆಳೆಯುತ್ತಿದ್ದಾರೆ ಎಂದು ದೂರಿದರು. ಶಿವಕುಮಾರರ ಸರಕಾರದ ಅಂತ್ಯ ಸಮೀಪಿಸುತ್ತಿದೆ ಎಂದು ತಿಳಿಸಿದರು.

ಪ್ರತಿಯೊಂದು ಉತ್ಪನ್ನಕ್ಕೆ ದರ ಹೆಚ್ಚಳ- ಯದುವೀರ ಒಡೆಯರ್
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ಶೂನ್ಯ ಪ್ರಗತಿಯ ಸರಕಾರ ಇಲ್ಲಿದೆ ಎಂದು ದೂರಿದರು. ಪ್ರತಿಯೊಂದು ಉತ್ಪನ್ನಕ್ಕೆ ದರ ಹೆಚ್ಚಳ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಗ್ಯಾರಂಟಿ ಸರಿಯಾಗಿ ಕೊಡುತ್ತಿಲ್ಲ ಎಂದು ಖಂಡಿಸಿದರು. ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಲ್ಲಾ ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 

 

About the Author

Praja Vahini

Editor

View All Posts

Spread the love

Post navigation

Previous: ಡಿಕೆ, ಬಿಕೆ, ಪಿಕೆಯವರ ಆಟ ಇನ್ನು ನಡೆಯುವುದಿಲ್ಲ; ಬಿವೈವಿ
Next: ಬೆಲೆ ಏರಿಕೆ ಮೂಲಕ ಜನರ ಮೇಲೆ ದಬ್ಬಾಳಿಕೆ: ಅರಗ ಜ್ಞಾನೇಂದ್ರ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.