Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಲೆ ಏರಿಕೆ ಮೂಲಕ ಜನರ ಮೇಲೆ ದಬ್ಬಾಳಿಕೆ: ಅರಗ ಜ್ಞಾನೇಂದ್ರ
  • Bangalore
  • Front news
  • Politics
  • State

ಬೆಲೆ ಏರಿಕೆ ಮೂಲಕ ಜನರ ಮೇಲೆ ದಬ್ಬಾಳಿಕೆ: ಅರಗ ಜ್ಞಾನೇಂದ್ರ

Praja Vahini November 11, 2026 1 minute read
IMG_2941
Spread the love

ಬೆಂಗಳೂರು: ರಾಜ್ಯದಲ್ಲಿ ಜನರು ಬದುಕುವುದೇ ದುಸ್ತರ ಎಂಬ ಮಟ್ಟಕ್ಕೆ ಬೆಲೆ ಏರಿಕೆ ಬಂದು ಮುಟ್ಟಿದೆ. ಬೆಲೆ ಏರಿಕೆ ಮೂಲಕ ಜನರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರು ಆರೋಪಿಸಿದ್ದಾರೆ.

ರಾಜ್ಯ ಸರಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ರಾಜ್ಯ ಘಟಕದ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.
ಹಾಲು, ಆಲ್ಕೋಹಾಲ್ ದರವನ್ನು ಹಲವು ಬಾರಿ ಏರಿಸಿದ್ದಾರೆ. ವಿದ್ಯುತ್ ಮುಟ್ಟಿದರೆ ಕರೆಂಟ್ ಹೊಡೆಯುತ್ತಿಲ್ಲ. ಬಿಲ್ ಮಾರಕ ಹೊಡೆತ ನೀಡುತ್ತಿದೆ ಎಂದು ವಿವರಿಸಿದರು. ಅವ್ಯವಹಾರ ಮಿತಿ ಮೀರಿದೆ ಎಂದು ದೂರಿದರು. ಹಾಲಿನ ಡೇರಿಗಳಲ್ಲಿ ಆಗಿರುವ ಭ್ರಷ್ಟಾಚಾರವನ್ನು ತಡೆಯಲು ಈ ಸರಕಾರಕ್ಕೆ ಆಗುತ್ತಿಲ್ಲ ಎಂದು ಟೀಕಿಸಿದರು.

ಎ ಟು ಜೆಡ್ ವಸ್ತುಗಳ ಬೆಲೆ ಏರಿಕೆ- ಎನ್.ರವಿಕುಮಾರ್
ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಮಾತನಾಡಿ, ಈ ಸರಕಾರವು ಎ ಟು ಜೆಡ್ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂದು ದೂರಿದರು. ಲೂಟಿ, ದರ್ಬಾರಿನ, ದರೋಡೆಕೋರರ ಈ ಸರಕಾರ ತೊಲಗಬೇಕು ಎಂದು ಒತ್ತಾಯಿಸಿದರು.
ಆಲ್ಕೋಹಾಲಿನಿಂದ ಆರಂಭಿಸಿ ಎಲ್ಲ ವಸ್ತುಗಳ ಬೆಲೆ ಏರಿಸಲಾಗಿದೆ. ಜಮೀನು ಖರೀದಿ, ಕಟ್ಟಡ ನಿರ್ಮಾಣ ಸಾಮಗ್ರಿ ಬೆಲೆಯನ್ನೂ ಏರಿಸಿದ್ದಾರೆ ಎಂದು ಟೀಕಿಸಿದರು. ಈ ಸರಕಾರ ಯಾವಾಗ ತೊಲಗುತ್ತದೋ ಎಂದು ಗುತ್ತಿಗೆದಾರರು ಶಾಪ ಹಾಕುತ್ತಿದ್ದಾರೆ ಎಂದು ವಿವರಿಸಿದರು. ಜನರು ರೋಸಿ ಹೋಗಿದ್ದಾರೆ. ಕೈಲಾಗದ ಗ್ಯಾರಂಟಿಗಳನ್ನು ಕೊಡಲು ಯಾರು ಹೇಳಿದರು ಎಂದು ಪ್ರಶ್ನಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಖಜಾನೆ ಖಾಲಿಯಾದ ಸರಕಾರ: ಜಗದೀಶ ಶೆಟ್ಟರ್
Next: ಕಾಂಗ್ರೆಸ್ ವಿರುದ್ಧ ನಾರಾಯಣಸ್ವಾಮಿ ವಾಗ್ದಾಳಿ

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.