ಶಹಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ, ಜನವಿರೋಧಿ ಮತ್ತು ರೈತ ವಿರೋಧಿ ಧೋರಣೆ ಖಂಡಿಸಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೃತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ತಾಲೂಕಿನ ಬಿಜೆಪಿ ಮುಖಂಡರು ಭಾಗಿಯಾದರು.
ಸರ್ಕಾರವು ಹಾಲು, ಮೊಸರು ಮತ್ತು ಬಸ್ ಪ್ರಯಾಣ ದರಗಳನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹೇರಿದೆ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕರು ಆರೋಪಿಸಿದರು. ಇದೇ ವೇಳೆ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸದೇ ನಿರ್ಲಕ್ಷö್ಯ ವಹಿಸಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಹೋರಾಟದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ ಕ್ಷೇತ್ರದ ಪ್ರಮುಖ ನಾಯಕರಾದ ಡಾ. ಚಂದ್ರಶೇಖರ ಸುಬೇದಾರ, ಕರಣ್ ಸುಬೇದಾರ, ರಾಜಶೇಖರ್ ಗೂಗಲ್, ಅಡಿವೆಪ್ಪ ಜಾಕಾ ಪಾಲ್ಗೊಂಡು ಸರ್ಕಾರದ ನೀತಿಗಳ ವಿರುದ್ಧ ಧ್ವನಿಗೂಡಿಸಿದರು. ಬೆಲೆ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ಬರ ಪೀಡಿತ ರೈತರೊಂದಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನೆಯ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು.
