Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹೆಚ್ಚು ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಪ್ರತಿನಿಧಿಸಬೇಕು ಎಂಬುದೇ ನನ್ನ ಕನಸು: ಡಾ. ಕೆ. ಗೋವಿಂದರಾಜ್
  • Bangalore
  • Front news
  • Politics
  • State

ಹೆಚ್ಚು ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಪ್ರತಿನಿಧಿಸಬೇಕು ಎಂಬುದೇ ನನ್ನ ಕನಸು: ಡಾ. ಕೆ. ಗೋವಿಂದರಾಜ್

Praja Vahini November 12, 2026 1 minute read
85d25896-07f4-47ba-9320-42dbd25a4f42
Spread the love

ಬೆಂಗಳೂರು: ಮುಂಬರುವ ದಿನಗಳಲ್ಲಿ ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಬೇಕು ಎಂಬುದೇ ನನ್ನ ಕನಸು ಎಂದು ಫಿಬಾ ಏಷ್ಯಾ ಅಧ್ಯಕ್ಷರು, ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಕೆ. ಗೋವಿಂದರಾಜ್ ಹೇಳಿದರು.

ಕರ್ನಾಟಕ ಒಲಿಂಪಿಕ್ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ–2026 ಅನ್ನು ನವೆಂಬರ್ 14ರಿಂದ 21ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಸೇರಿದಂತೆ ವಿವಿಧ ಕ್ರೀಡಾಂಗಣಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಬಾರಿಯ ಕ್ರೀಡಾಕೂಟದಲ್ಲಿ ಒಟ್ಟು 27 ಕ್ರೀಡೆಗಳ ಸ್ಪರ್ಧೆಗಳು ನಡೆಯಲಿದ್ದು, 14 ವರ್ಷದೊಳಗಿನ ಸುಮಾರು 5 ಸಾವಿರ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. 2020ರಲ್ಲಿ ಮೊದಲ ಬಾರಿಗೆ ಈ ಕ್ರೀಡಾಕೂಟ ಆಯೋಜಿಸಲಾಗಿತ್ತು. ಯುವ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಇದು ಉತ್ತಮ ವೇದಿಕೆಯಾಗಿದೆ ಎಂದರು.

ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಊಟ, ವಸತಿ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಚಿಕ್ಕ ವಯಸ್ಸಿನಲ್ಲಿಯೇ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ಸೂಕ್ತ ತರಬೇತಿ ಹಾಗೂ ಸ್ಪರ್ಧಾತ್ಮಕ ಅನುಭವ ನೀಡುವುದರಿಂದ ಅವರು ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.

ಯುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕ್ರೀಡಾಕೂಟ ಆರಂಭಿಸಲಾಗಿದೆ. ಬಾಲ್ಯದಲ್ಲಿಯೇ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸುವುದು, ಸ್ಪರ್ಧಾತ್ಮಕ ಮನೋಭಾವ ರೂಪಿಸುವುದು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರೇಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು. ಭವಿಷ್ಯದ ಕ್ರೀಡಾ ತಾರೆಗಳನ್ನು ಗುರುತಿಸಲು ಈ ಕ್ರೀಡಾಕೂಟ ಪ್ರಮುಖ ವೇದಿಕೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಲಿಂಪಿಕ್ಸ್ ಗುರಿ ಯೋಜನೆಗೆ ಸರ್ಕಾರದ ಪ್ರೋತ್ಸಾಹ

ಕರ್ನಾಟಕ ಸರ್ಕಾರ ಕ್ರೀಡಾಪಟುಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಒಲಿಂಪಿಕ್ಸ್ ಗುರಿ ಯೋಜನೆಯನ್ನು ಜಾರಿಗೊಳಿಸಿದೆ. ಒಲಿಂಪಿಕ್ಸ್‌ಗೆ ಸಿದ್ಧತೆ ನಡೆಸುವ ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಮೊತ್ತವನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಡಾ. ಗೋವಿಂದರಾಜ್ ತಿಳಿಸಿದರು.

27 ಕ್ರೀಡೆಗಳಲ್ಲಿ ಸ್ಪರ್ಧೆ

ಅಥ್ಲೆಟಿಕ್ಸ್, ಆರ್ಚರಿ, ಬಾಸ್ಕೆಟ್‌ಬಾಲ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಸೈಕ್ಲಿಂಗ್, ಫೆನ್ಸಿಂಗ್, ಕಯಾಕಿಂಗ್ ಮತ್ತು ಕೆನೋಯಿಂಗ್, ಗಾಲ್ಫ್, ಫುಟ್ಬಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್‌ಬಾಲ್, ಹಾಕಿ, ಜೂಡೋ, ಖೋ-ಖೋ, ಕಬಡ್ಡಿ, ಲಾನ್ ಟೆನಿಸ್, ವಾಲಿಬಾಲ್, ನೆಟ್‌ಬಾಲ್, ಈಜು, ಟೇಬಲ್ ಟೆನಿಸ್, ಟೇಕ್ವಾಂಡೋ, ರೈಡಿಂಗ್, ರೈಫಲ್ ಶೂಟಿಂಗ್, ಕುಸ್ತಿ, ವುಶು ಹಾಗೂ ವೇಟ್‌ಲಿಫ್ಟಿಂಗ್ ಸೇರಿದಂತೆ 27 ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.

ಸುದ್ದಿಗೋಷ್ಠಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಎಂ.ಎನ್. ಅನುಚೇತ್ ಹಾಗೂ ರಾಜ್ಯದ ವಿವಿಧ ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಸೋನಿಯಾ ಆತ್ಮಚರಿತ್ರೆ ಪರ ಪ್ರಿಯಾಂಕಾ ಬ್ಯಾಟಿಂಗ್
Next: ಪ್ರಧಾನಿಗಳ ವಿರುದ್ಧ ಕಾಂಗ್ರೆಸ್ ನಾಯಕರ ಹಗುರ ಹೇಳಿಕೆ ಖಂಡನೀಯ: ಬಿ.ವೈ. ವಿ

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.