Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಂಗಳೂರಿನ ಕೋರಮಂಗಲ ವಾರ್ಡ್‌ಗೆ ರಾಷ್ಟ್ರಮಟ್ಟದ ಗೌರವ
  • Bangalore
  • Front news
  • Politics
  • State

ಬೆಂಗಳೂರಿನ ಕೋರಮಂಗಲ ವಾರ್ಡ್‌ಗೆ ರಾಷ್ಟ್ರಮಟ್ಟದ ಗೌರವ

Praja Vahini November 14, 2026 1 minute read
IMG_2975
Spread the love

ಬೆಂಗಳೂರು: ಕೇಂದ್ರ ಸರ್ಕಾರದ ಪ್ರತಿಷ್ಠಿತ ‘ಸ್ವಚ್ಛ ವಾಯು ಸರ್ವೇಕ್ಷಣ್-2026’ ಪ್ರಶಸ್ತಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ವ್ಯಾಪ್ತಿಯ ಕೋರಮಂಗಲ ವಾರ್ಡ್ (ವಾರ್ಡ್ ನಂ.151) ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದೆ. 30 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ವಾರ್ಡ್‌ಗಳ ವಿಭಾಗದಲ್ಲಿ ಈ ಸಾಧನೆ ಮಾಡಿರುವ ಕೋರಮಂಗಲ, ಬೆಂಗಳೂರಿನ ಹಿರಿಮೆಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದೆ.

ಸ್ವಚ್ಛ ವಾಯು ನಿರ್ವಹಣೆ, ಪರಿಸರ ಸಂರಕ್ಷಣೆ, ಸುಸ್ಥಿರ ನಗರಾಭಿವೃದ್ಧಿ, ಘನತ್ಯಾಜ್ಯ ನಿರ್ವಹಣೆ ಹಾಗೂ ಸಾರ್ವಜನಿಕರ ಸಹಭಾಗಿತ್ವ ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ಕೇಂದ್ರ ಸರ್ಕಾರ ಈ ಪ್ರಶಸ್ತಿಗೆ ವಾರ್ಡ್‌ಗಳನ್ನು ಆಯ್ಕೆ ಮಾಡಿದೆ. ಈ ಎಲ್ಲ ಕ್ಷೇತ್ರಗಳಲ್ಲಿ ಕೋರಮಂಗಲ ವಾರ್ಡ್ ತೋರಿದ ಉತ್ತಮ ಕಾರ್ಯಕ್ಷಮತೆ ಮತ್ತು ಪರಿಣಾಮಕಾರಿ ಅನುಷ್ಠಾನಕ್ಕೆ ರಾಷ್ಟ್ರೀಯ ಮನ್ನಣೆ ದೊರೆತಿದೆ.

ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ನಿಯಂತ್ರಣ, ಸ್ವಚ್ಛ ಪರಿಸರ ನಿರ್ಮಾಣ ಹಾಗೂ ನಾಗರಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳು ಈ ಸಾಧನೆಗೆ ಪ್ರಮುಖ ಕಾರಣವಾಗಿವೆ. ಸಾರ್ವಜನಿಕರು ಮತ್ತು ಸ್ಥಳೀಯ ಆಡಳಿತದ ಸಮನ್ವಯದ ಪ್ರಯತ್ನವೂ ಪ್ರಶಸ್ತಿ ಲಭಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ಸಚಿವ ರಾಮಲಿಂಗಾ ರೆಡ್ಡಿ ಅಭಿನಂದನೆ

ತಮ್ಮ ಬಿಟಿಎಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೋರಮಂಗಲ ವಾರ್ಡ್‌ಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿರುವುದಕ್ಕೆ ಕ್ಷೇತ್ರದ ಶಾಸಕರು ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾ ರೆಡ್ಡಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಾಧನೆಗಾಗಿ ಶ್ರಮಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು, ಪೌರಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಎಲ್ಲರ ಒಗ್ಗಟ್ಟಿನ ಪ್ರಯತ್ನ, ಪರಿಶ್ರಮ ಮತ್ತು ಪರಿಸರದ ಮೇಲಿನ ಕಾಳಜಿಯಿಂದ ಈ ಮಹತ್ವದ ಗೌರವ ಸಾಧ್ಯವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೋರಮಂಗಲ ವಾರ್ಡ್ ಉತ್ತಮ ವಾಯು ಗುಣಮಟ್ಟ ಹಾಗೂ ಆರೋಗ್ಯಕರ ನಗರ ಪರಿಸರ ನಿರ್ಮಾಣದಲ್ಲಿ ತೋರಿರುವ ಬದ್ಧತೆ ಬೆಂಗಳೂರಿನ ಇತರ ವಾರ್ಡ್‌ಗಳಿಗೂ ಪ್ರೇರಣೆಯಾಗಿದೆ. ಇದೇ ಮಾದರಿಯಲ್ಲಿ ನಗರದ ಎಲ್ಲ ವಾರ್ಡ್‌ಗಳಲ್ಲೂ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತಾ ಕಾರ್ಯಗಳಿಗೆ ಆದ್ಯತೆ ನೀಡುವ ಮೂಲಕ ಸುಸ್ಥಿರ ಬೆಂಗಳೂರಿನ ನಿರ್ಮಾಣಕ್ಕೆ ಕೈಜೋಡಿಸಬೇಕಿದೆ.

ಕೋರಮಂಗಲಕ್ಕೆ ಸಂದಿರುವ ಈ ರಾಷ್ಟ್ರೀಯ ಗೌರವ ಬಿಬಿಎಂಪಿ ಆಡಳಿತ, ಪೌರಕಾರ್ಮಿಕರು ಮತ್ತು ಸ್ಥಳೀಯ ನಾಗರಿಕರ ಸಾಮೂಹಿಕ ಪ್ರಯತ್ನಕ್ಕೆ ಸಂದ ಮನ್ನಣೆಯಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಭಾರತದ ಅಭಿವೃದ್ಧಿಗೆ ನೆಹರು ಕೊಡುಗೆ ಅಪಾರ, ಅವರ ತತ್ವಗಳೇ ನಮಗೆ ದಾರಿದೀಪ: ಡಿಕೆಶಿ
Next: ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ್ತಿ ಪ್ರಶಸ್ತಿ ಗೆದ್ದ ದೀಪ್ತಿ ಶರ್ಮಾ

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.