Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ್ತಿ ಪ್ರಶಸ್ತಿ ಗೆದ್ದ ದೀಪ್ತಿ ಶರ್ಮಾ
  • Cricket

ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ್ತಿ ಪ್ರಶಸ್ತಿ ಗೆದ್ದ ದೀಪ್ತಿ ಶರ್ಮಾ

Praja Vahini November 14, 2026 1 minute read
IMG_2976
Spread the love

ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತಾರಾ ಆಲ್‌ರೌಂಡರ್ ದೀಪ್ತಿ ಶರ್ಮಾ ಅವರು 2026ರ ಅಕ್ಟೋಬರ್ ತಿಂಗಳ ಐಸಿಸಿ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ ಅವರು, ಬಾಂಗ್ಲಾದೇಶದ ಶೋಭನಾ ಮೊಸ್ತಾರಿ ಹಾಗೂ ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್ಲ್ಯಾಂಡ್ ಅವರನ್ನು ಹಿಂದಿಕ್ಕಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.

ಅಕ್ಟೋಬರ್‌ನಲ್ಲಿ ತವರಿನಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ದೀಪ್ತಿ ಅಮೋಘ ಆಟ ಪ್ರದರ್ಶಿಸಿದ್ದರು. ಒಂದು ಪಂದ್ಯದಲ್ಲಿ ಅಜೇಯ 106 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, ಬೌಲಿಂಗ್‌ನಲ್ಲೂ ಕೇವಲ 3.42 ಎಕಾನಮಿ ದರದಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದ್ದರು.

ಇನ್ನು ಟಿ20 ಸರಣಿಯಲ್ಲೂ ತಮ್ಮ ಉತ್ತಮ ಫಾರ್ಮ್ ಮುಂದುವರಿಸಿದ ದೀಪ್ತಿ, 37 ಎಸೆತಗಳಲ್ಲಿ 49 ರನ್ ಗಳಿಸುವುದರ ಜೊತೆಗೆ ಎರಡು ವಿಕೆಟ್‌ಗಳನ್ನು ಪಡೆದಿದ್ದರು. ಅಕ್ಟೋಬರ್ ತಿಂಗಳಿನಲ್ಲಿ ಏಕದಿನ ಮತ್ತು ಟಿ20 ಮಾದರಿಗಳಿಂದ ಒಟ್ಟು 155 ರನ್ ಹಾಗೂ ಏಳು ವಿಕೆಟ್‌ಗಳನ್ನು ಗಳಿಸಿದ ಅವರು, ಭಾರತ ತಂಡವು ಎರಡೂ ಸರಣಿಗಳನ್ನು ಕ್ಲೀನ್ ಸ್ವೀಪ್ ಮಾಡಲು ಮಹತ್ವದ ಕೊಡುಗೆ ನೀಡಿದ್ದರು.

ಪ್ರಶಸ್ತಿ ಗೆದ್ದ ಬಳಿಕ ಸಂತಸ ವ್ಯಕ್ತಪಡಿಸಿದ ದೀಪ್ತಿ ಶರ್ಮಾ, ಮತ್ತೊಮ್ಮೆ ಐಸಿಸಿ ತಿಂಗಳ ಆಟಗಾರ್ತಿ ಪ್ರಶಸ್ತಿ ಪಡೆದಿರುವುದು ತುಂಬಾ ಖುಷಿ ತಂದಿದೆ ಎಂದು ಹೇಳಿದ್ದಾರೆ. ಜಿಂಬಾಬ್ವೆ ವಿರುದ್ಧದ ಸರಣಿ ತಂಡಕ್ಕೆ ಅತ್ಯುತ್ತಮವಾಗಿತ್ತು. ಅದರಲ್ಲೂ ಯುವ ಆಟಗಾರ್ತಿಯರು ತೋರಿದ ಪ್ರದರ್ಶನ ಹೆಮ್ಮೆ ಮೂಡಿಸಿದೆ. ತಂಡದ ಗೆಲುವಿಗೆ ನೆರವಾದ ಶತಕ ತಮ್ಮ ಪಾಲಿಗೆ ಅತ್ಯಂತ ವಿಶೇಷ ಕ್ಷಣವಾಗಿತ್ತು ಎಂದು ಅವರು ಸ್ಮರಿಸಿದ್ದಾರೆ.

2023ರ ಡಿಸೆಂಬರ್‌ನಲ್ಲಿ ಮೊದಲ ಬಾರಿಗೆ ಈ ಪ್ರಶಸ್ತಿ ಗೆದ್ದಿದ್ದ ದೀಪ್ತಿ, ಇದೀಗ ತಮ್ಮ ವೃತ್ತಿಜೀವನದಲ್ಲಿ ಎರಡನೇ ಬಾರಿಗೆ ಐಸಿಸಿ ತಿಂಗಳ ಆಟಗಾರ್ತಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಇದೇ ವೇಳೆ ಪುರುಷರ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಮಾರ್ಕೊ ಜಾನ್ಸೆನ್ ಅವರು ಅಕ್ಟೋಬರ್ ತಿಂಗಳ ಐಸಿಸಿ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 198 ರನ್ ಗಳಿಸುವುದರ ಜೊತೆಗೆ 13 ವಿಕೆಟ್‌ಗಳನ್ನು ಪಡೆದಿದ್ದ ಅವರು, ದಕ್ಷಿಣ ಆಫ್ರಿಕಾ ತಂಡದ 2-1 ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಈ ಮೂಲಕ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಹಾಗೂ ಪಾಕಿಸ್ತಾನದ ಅರಾಫತ್ ಮಿನ್ಹಾಸ್ ಅವರನ್ನು ಹಿಂದಿಕ್ಕಿದ ಜಾನ್ಸೆನ್ ಪುರುಷರ ವಿಭಾಗದ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ

About the Author

Praja Vahini

Editor

View All Posts

Spread the love

Post navigation

Previous: ಬೆಂಗಳೂರಿನ ಕೋರಮಂಗಲ ವಾರ್ಡ್‌ಗೆ ರಾಷ್ಟ್ರಮಟ್ಟದ ಗೌರವ
Next: ಕಲಬುರಗಿಯಲ್ಲಿ ಕ್ರೀಡಾ ಕ್ರಾಂತಿಗೆ ಬುನಾದಿ ಹಾಕಿದ್ದೇವೆ: ಪ್ರಿಯಾಂಕ್ ಖರ್ಗೆ

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.