Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಲಬುರಗಿಯಲ್ಲಿ ಕ್ರೀಡಾ ಕ್ರಾಂತಿಗೆ ಬುನಾದಿ ಹಾಕಿದ್ದೇವೆ: ಪ್ರಿಯಾಂಕ್ ಖರ್ಗೆ
  • Bangalore
  • Front news
  • Politics
  • State

ಕಲಬುರಗಿಯಲ್ಲಿ ಕ್ರೀಡಾ ಕ್ರಾಂತಿಗೆ ಬುನಾದಿ ಹಾಕಿದ್ದೇವೆ: ಪ್ರಿಯಾಂಕ್ ಖರ್ಗೆ

Praja Vahini November 14, 2026 1 minute read
1d06c6e3-64f1-4190-abc2-7fc7d5d6c28b
Spread the love

ಕಲಬುರಗಿ: ಕಲಬುರಗಿಯಲ್ಲಿ ಕ್ರೀಡಾ ಪ್ರತಿಭೆಗಳು ಕಡಿಮೆ ಇಲ್ಲ, ಅವರಿಗೆ ಅವಕಾಶ ಕಲ್ಪಿಸುವ ಮೂಲಕ ಕ್ರೀಡಾ ಕ್ರಾಂತಿಗೆ ಬುನಾದಿ ಹಾಕಿದ್ದೇವೆ ಎಂದು ರಾಜ್ಯದ ಗೃಹ, ಐಟಿಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕಲಬುರಗಿ ನೆಕ್ಸ್ಟ್ ಫೌಂಡೇಶನ್ ಹಾಗೂ ಸ್ಪೆಂಜೊ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ‘ಕಲಬುರಗಿ ಸ್ಪೋರ್ಟ್ಸ್ ಹಬ್ಬ’ದ ಸಮಾರೋಪ ಸಮಾರಂಭದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಪದಕ ಮತ್ತು ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ನಮ್ಮ ಭಾಗದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ, ಆದರೆ ಅವರಿಗೆ ಸೂಕ್ತ ಅವಕಾಶಗಳ ಕೊರತೆಯಿದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಸಾಕಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುತ್ತಿದ್ದು, ಅವರಿಗೆ ಸೂಕ್ತ ವೇದಿಕೆ ಮತ್ತು ಪ್ರೋತ್ಸಾಹ ನೀಡುವುದು ನಮ್ಮ ಉದ್ದೇಶವಾಗಿದೆ ಎಂದರು.

ಕರ್ನಾಟಕದಲ್ಲಿ ಮೊದಲ ಬಾರಿಗೆ ಕ್ರೀಡಾಪಟುಗಳಿಗಾಗಿ ಈ ರೀತಿಯ ಕ್ರೀಡಾ ಹಬ್ಬ ಆಯೋಜಿಸಲಾಗಿದೆ. ನನ್ನ ಮಾತಿಗೆ ಹಾಗೂ ಅಧಿಕಾರಿಗಳ ಸಹಕಾರಕ್ಕೆ ಮನ್ನಣೆ ನೀಡಿ ಸ್ಪೆಂಜೊ ಸಂಸ್ಥೆಯವರು ಕಲಬುರಗಿಯಲ್ಲಿ ಈ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಿದ್ದಾರೆ. ಕ್ರೀಡಾ ಹಬ್ಬದಲ್ಲಿ ಭಾಗವಹಿಸಿದವರು ಕೇವಲ ಪ್ರಶಸ್ತಿಗಳನ್ನು ಮಾತ್ರ ಪಡೆದಿಲ್ಲ; ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸುವುದರೊಂದಿಗೆ ಆತ್ಮಸ್ಥೈರ್ಯವನ್ನೂ ಹೆಚ್ಚಿಸಿಕೊಂಡಿದ್ದಾರೆ ಎಂದರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಂದಲೂ ವಿವಿಧ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳು ಹೊರಹೊಮ್ಮುತ್ತಿದ್ದಾರೆ. ಕ್ರೀಡೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಶ್ರಮಪಟ್ಟವರು ಈ ಹಬ್ಬದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಇಂತಹ ಅವಕಾಶಗಳನ್ನು ಕಲ್ಪಿಸಲು ಸರ್ಕಾರ ಮತ್ತು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಪ್ರತಿ ವರ್ಷ ಒಂದು ತಿಂಗಳನ್ನು ಕ್ರೀಡಾ ಹಬ್ಬಕ್ಕೆ ಮೀಸಲಿಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಇದರಿಂದ ಕ್ರೀಡಾಪಟುಗಳಿಗೆ ನಿರಂತರ ತರಬೇತಿ ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಲು ಅನುಕೂಲವಾಗಲಿದೆ. ಕ್ರೀಡಾಪಟುಗಳ ಭವಿಷ್ಯ ರೂಪಿಸಲು ಅಗತ್ಯ ಸಹಕಾರ ನೀಡಲಾಗುವುದು. ಸುಮಾರು ₹50 ಕೋಟಿ ವೆಚ್ಚದಲ್ಲಿ ಜಿಲ್ಲಾ ಕ್ರೀಡಾಂಗಣದ ನವೀಕರಣ ಕಾರ್ಯ ನಡೆಯುತ್ತಿದೆ. ವಿವಿಧ ಕಡೆ ಸಮುದಾಯ ಕ್ರೀಡಾಂಗಣಗಳನ್ನು ನಿರ್ಮಿಸಲಾಗಿದ್ದು, ಚಿತ್ತಾಪುರದಲ್ಲಿಯೂ ಹೊಸ ಕ್ರೀಡಾಂಗಣ ನಿರ್ಮಿಸಲಾಗಿದೆ ಎಂದರು.

ಇಂದಿನ ಕ್ರೀಡಾ ಹಬ್ಬ ಮುಕ್ತಾಯದ ಗೆರೆ ಅಲ್ಲ; ಇದು ಕ್ರೀಡಾ ಬೆಳವಣಿಗೆಯ ಆರಂಭದ ಗೆರೆ. ಪ್ರಶಸ್ತಿ ಪಡೆದ ಎಲ್ಲ ಕ್ರೀಡಾಪಟುಗಳಿಗೆ ಅಭಿನಂದನೆಗಳು. ಪ್ರತಿಭೆಗಳಿಗೆ ನಿರಂತರ ಪ್ರೋತ್ಸಾಹ ನೀಡುವ ಮೂಲಕ ಕಲಬುರಗಿಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತೆ ಬೆಂಬಲಿಸಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಕಲಬುರಗಿಯಲ್ಲಿ ಈವರೆಗೆ ಇಂತಹ ಕ್ರೀಡಾ ಹಬ್ಬ ಆಯೋಜನೆಯಾಗಿರಲಿಲ್ಲ. ಸುಮಾರು 2 ಸಾವಿರ ವಿದ್ಯಾರ್ಥಿಗಳು ಭಾಗವಹಿಸುವಂತೆ ಮಾಡಿ ಕ್ರೀಡಾ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಲ್ಪಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯ ಶ್ಲಾಘನೀಯ. ಇಂತಹ ಪ್ರೋತ್ಸಾಹ ದೊರೆತರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿದೆ ಎಂಬುದನ್ನು ಯುವ ಕ್ರೀಡಾಪಟುಗಳು ಅರಿತುಕೊಳ್ಳಬೇಕು ಎಂದರು.

ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ಸುಮಾರು 2 ಸಾವಿರ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆ ಕಲ್ಪಿಸಲಾಗಿದೆ. ಜಿಲ್ಲೆಯ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಕಲಬುರಗಿಗೆ ಕೀರ್ತಿ ತರಬೇಕು. ಸಚಿವರು ಮಹಿಳಾ ಕ್ರೀಡಾಂಗಣ ನಿರ್ಮಾಣಕ್ಕೂ ಆದ್ಯತೆ ನೀಡಿದ್ದಾರೆ ಎಂದರು.

ಕಲಬುರಗಿ ಖಡಕ್ ರೊಟ್ಟಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಉತ್ತೇಜನ ನೀಡಿದ ಪರಿಣಾಮ ಇಂದು ಪ್ರಧಾನಿ ನರೇಂದ್ರ ಮೋದಿ ಅವರೂ ಅದರ ಕುರಿತು ಪ್ರಸ್ತಾಪಿಸಿದ್ದಾರೆ. ಈ ಭಾಗದಲ್ಲಿ ಹೊಸ ಸ್ಟಾರ್ಟ್‌ಅಪ್‌ಗಳ ಸ್ಥಾಪನೆ ಹಾಗೂ ಐಟಿಬಿಟಿ ಕಂಪನಿಗಳ ಅಭಿವೃದ್ಧಿಗೂ ಸಚಿವರು ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಖನಿಜ್ ಫಾತಿಮಾ, ಎಂ.ವೈ. ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ, ಕುಡಾ ಅಧ್ಯಕ್ಷ ಮಝಾರ ಖಾನ್ ಆಲಂ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಅಜ್ಮಲ್ ಗೋಳಾ, ಚಂದ್ರಿಕಾ ಪರಮೇಶ್ವರ, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ್ತಿ ಪ್ರಶಸ್ತಿ ಗೆದ್ದ ದೀಪ್ತಿ ಶರ್ಮಾ
Next: ಮಕ್ಕಳ ಹಬ್ಬಕ್ಕೆ ವಿಜ್ಞಾನದ ಮೆರುಗು; ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಜಾತ್ರೆಗೆ ಅದ್ಧೂರಿ ಚಾಲನೆ!

Views:

6

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.