Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹಿಳೆಯರು ಅಧಿಕಾರದ ಜತೆಗೆ ನೀತಿ ನಿರ್ಧಾರಗಳ ಮೇಲೂ ಪ್ರಭಾವ ಬೀರಬೇಕು: ಡಿ.ಕೆ.ಶಿ
  • Bangalore
  • Front news
  • Politics
  • State

ಮಹಿಳೆಯರು ಅಧಿಕಾರದ ಜತೆಗೆ ನೀತಿ ನಿರ್ಧಾರಗಳ ಮೇಲೂ ಪ್ರಭಾವ ಬೀರಬೇಕು: ಡಿ.ಕೆ.ಶಿ

Praja Vahini November 17, 2026
IMG_3007
Spread the love

ಬೆಂಗಳೂರು: ಮಹಿಳೆಯರು  ಕೇವಲ ಅಧಿಕಾರದ ಸ್ಥಾನಗಳನ್ನು ಅಲಂಕರಿಸುವುದಷ್ಟೇ ಮುಖ್ಯವಲ್ಲ. ಆಡಳಿತ, ನೀತಿ ರೂಪಣೆ ಹಾಗೂ ಪ್ರಮುಖ ನಿರ್ಧಾರಗಳ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನೂ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾಮನ್‌ವೆಲ್ತ್ ಮಹಿಳಾ ಸಂಸದೀಯರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ಬೆಂಗಳೂರಿನಲ್ಲಿ ಈ ಸಮ್ಮೇಳನ ಆಯೋಜಿಸಿರುವುದು ಹೆಮ್ಮೆಯ ಸಂಗತಿ. ವಿವಿಧ ದೇಶಗಳ ಮಹಿಳಾ ಪ್ರತಿನಿಧಿಗಳು ಭಾಗವಹಿಸಿರುವುದು ಸಂತಸದ ವಿಚಾರವಾಗಿದೆ ಎಂದರು.

ಚುನಾವಣಾ ರಾಜಕೀಯ ಮಹಿಳೆಯರಿಗೆ ಸುಲಭವಾದ ಕ್ಷೇತ್ರವಲ್ಲ. ಆದರೂ ಸವಾಲುಗಳನ್ನು ಎದುರಿಸುವ ಸಮರ್ಥ ನಾಯಕತ್ವವನ್ನು ಬೆಳೆಸಿಕೊಳ್ಳಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ. ಈ ಅವಕಾಶವನ್ನು ಮಹಿಳೆಯರು ಸಮರ್ಥವಾಗಿ ಬಳಸಿಕೊಳ್ಳಬೇಕು. ಸೋನಿಯಾ ಗಾಂಧಿಯವರ ನಾಯಕತ್ವ ಮಹಿಳೆಯರಿಗೆ ಪ್ರೇರಣೆಯಾಗಿದೆ ಎಂದು ತಿಳಿಸಿದರು. ಮಹಿಳಾ ಮೀಸಲಾತಿ ಕುರಿತು ಮುಂದಿನ ಡಿಸೆಂಬರ್‌ನಲ್ಲಿ ನಡೆಯಲಿರುವ ಅಧಿವೇಶನದ ಚರ್ಚೆಯನ್ನು ಎದುರು ನೋಡುತ್ತಿರುವುದಾಗಿ ಹೇಳಿದರು.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾತನಾಡಿ, ಕರ್ನಾಟಕವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಹತ್ವದ ಕೊಡುಗೆ ನೀಡಿದೆ. ವಚನ ಸಾಹಿತ್ಯದ ಕಾಲದಲ್ಲಿಯೇ ಅನುಭವ ಮಂಟಪದ ಮೂಲಕ ಸಮಾನತೆ ಮತ್ತು ಎಲ್ಲರನ್ನೂ ಒಳಗೊಳ್ಳುವ ವ್ಯವಸ್ಥೆಗೆ ನಾಂದಿ ಹಾಡಲಾಗಿತ್ತು ಎಂದರು. ಮಹಿಳಾ ಮೀಸಲಾತಿ ಮಸೂದೆಯನ್ನು ಸ್ವಾಗತಿಸಿದ ಅವರು, ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ವಿಚಾರಗಳನ್ನು ಪ್ರತ್ಯೇಕವಾಗಿ ಚರ್ಚಿಸಬೇಕು ಎಂದು ಅಭಿಪ್ರಾಯಪಟ್ಟರು.

ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಮಾತನಾಡಿ, ದೇಶದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ನಿರ್ಣಾಯಕವಾಗಿದೆ ಎಂದರು.

ಕಾಮನ್‌ವೆಲ್ತ್ ಮಹಿಳಾ ಸಂಸದೀಯರ ಭಾರತ ಪ್ರಾದೇಶಿಕ ಘಟಕದ ಅಧ್ಯಕ್ಷೆ ಡಾ. ಡಿ. ಪುರಂದರೇಶ್ವರಿ ಅವರು ಸುಸ್ಥಿರ ಅಭಿವೃದ್ಧಿಗೆ ಮಹಿಳೆಯರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಎಂದು ಹೇಳಿದರು. ಲಿಂಗ ತಾರತಮ್ಯವಿಲ್ಲದ ಸಂಸದೀಯ ವ್ಯವಸ್ಥೆ, ಮಹಿಳಾ ಸ್ನೇಹಿ ಕಾನೂನುಗಳು, ಲಿಂಗ ಆಧಾರಿತ ಆಯವ್ಯಯ ಹಾಗೂ ಅಂತರ್ಜಾಲ ಕಿರುಕುಳ ತಡೆಗೆ ಕಠಿಣ ಕ್ರಮಗಳ ಅಗತ್ಯವನ್ನು ಪ್ರತಿಪಾದಿಸಿದರು.

ವಿಧಾನಪರಿಷತ್ ಸಭಾಪತಿ ಸಲೀಂ ಅಹಮದ್ ಅವರು ಸಂಸದೀಯ ಚಟುವಟಿಕೆಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿಸುವಲ್ಲಿ ಸಮ್ಮೇಳನ ಮಹತ್ವದ ವೇದಿಕೆಯಾಗಲಿದೆ ಎಂದರು. ಲೋಕಸಭಾಧ್ಯಕ್ಷ ಓಂ ಬಿರ್ಲಾ, ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ನೀರು ಕೊಡಿ, ಯಾವ ತಪ್ಪಿಗಾಗಿ ರೈತರಿಗೆ ಈ ಶಿಕ್ಷೆ..?
Next: ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತಿಗೆ ಸಂಪೂರ್ಣ ನಿಷೇಧ: ಯು.ಟಿ. ಖಾದರ್

Views:

3

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.