Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶೀಘ್ರದಲ್ಲೇ ಲೋಕಸಭೆ, ವಿಧಾನಸಭೆಗಳಲ್ಲಿ ಶೇ.33 ಮಹಿಳಾ ಮೀಸಲಾತಿ ಜಾರಿ
  • Bangalore
  • Front news
  • Politics
  • State

ಶೀಘ್ರದಲ್ಲೇ ಲೋಕಸಭೆ, ವಿಧಾನಸಭೆಗಳಲ್ಲಿ ಶೇ.33 ಮಹಿಳಾ ಮೀಸಲಾತಿ ಜಾರಿ

Praja Vahini November 17, 2026 1 minute read
IMG_3013
Spread the love

ಬೆಂಗಳೂರು: ದೇಶದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೀಘ್ರದಲ್ಲೇ ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಯಾಗಲಿದೆ ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರಿಂದ ಪಂಚಾಯಿತಿಯಿಂದ ಸಂಸತ್ತಿನವರೆಗೆ ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ದೊರೆಯಲಿದೆ ಎಂದು ಹೇಳಿದರು.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನವೆಂಬರ್ 17 ಮತ್ತು 18ರಂದು ನಡೆಯುತ್ತಿರುವ ಎರಡು ದಿನಗಳ ‘ಕಾಮನ್‌ವೆಲ್ತ್ ಮಹಿಳಾ ಸಂಸದೀಯರ ಸಮ್ಮೇಳನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿಯೇ ಕರ್ನಾಟಕದ ಅನುಭವ ಮಂಟಪದಲ್ಲಿ ಮಹಿಳಾ ಸಮಾನತೆ ಕುರಿತು ಚರ್ಚೆ ನಡೆದಿತ್ತು. ಮಹಿಳೆಯರಿಗೆ ಅವಕಾಶ ಮತ್ತು ಪ್ರಾತಿನಿಧ್ಯ ಕಲ್ಪಿಸುವ ವಿಚಾರಕ್ಕೆ ಅಂದಿನಿಂದಲೇ ಮಹತ್ವ ನೀಡಲಾಗಿತ್ತು. ಈಗಾಗಲೇ ಪಂಚಾಯಿತಿ ಮಟ್ಟದಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ವಿಧಾನಸಭೆ ಮತ್ತು ಲೋಕಸಭೆಯಲ್ಲೂ ಶೇ.33ರಷ್ಟು ಮೀಸಲಾತಿ ಜಾರಿಯಾಗುವ ನಿರೀಕ್ಷೆಯಿದೆ ಎಂದರು.

ಮಹಿಳಾ ಸಬಲೀಕರಣಕ್ಕೆ ತಂತ್ರಜ್ಞಾನ ಬಳಕೆ ಅಗತ್ಯ

ಮಹಿಳೆಯರ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲಿದೆ. ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಸೇನೆ, ಅಂತರಿಕ್ಷ ವಿಜ್ಞಾನ ಹಾಗೂ ದೇಶದ ಗಡಿ ರಕ್ಷಣೆಯವರೆಗೆ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ ಎಂದು ಓಂ ಬಿರ್ಲಾ ಹೇಳಿದರು.

ಪಂಚಾಯಿತಿ ಮಟ್ಟದಲ್ಲಿಯೂ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಕೆಯಾಗಬೇಕು. ಮಹಿಳಾ ಜನಪ್ರತಿನಿಧಿಗಳು ಡಿಜಿಟಲ್ ತಂತ್ರಜ್ಞಾನದಲ್ಲಿ ಪರಿಣತಿ ಬೆಳೆಸಿಕೊಳ್ಳಬೇಕು. ಈ ಸಮ್ಮೇಳನ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡುವ ಜತೆಗೆ ಮಹಿಳಾ ನಾಯಕತ್ವಕ್ಕೆ ಉತ್ತೇಜನ ನೀಡಲಿದೆ ಎಂದು ಅಭಿಪ್ರಾಯಪಟ್ಟರು.

ಬೆಂಗಳೂರು ಅವಕಾಶಗಳ ನಗರ: ಡಿ.ಕೆ. ಶಿವಕುಮಾರ್

ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳೆಯರನ್ನು ಗೌರವಿಸುವುದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಪ್ರತಿಯೊಬ್ಬರ ಯಶಸ್ಸಿನ ಹಿಂದೆ ಮಹಿಳೆಯರ ಕೊಡುಗೆ ಮಹತ್ವದ್ದಾಗಿದೆ ಎಂದರು.

ಬೆಂಗಳೂರು ಕೇವಲ ಉದ್ಯಾನನಗರಿ ಮಾತ್ರವಲ್ಲ, ಪ್ರತಿಭೆ ಮತ್ತು ಅವಕಾಶಗಳ ನಗರವಾಗಿದೆ. ನಗರದಲ್ಲಿ ಸುಮಾರು 26 ಲಕ್ಷ ಐಟಿ ಉದ್ಯೋಗಿಗಳು ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಪ್ಯಾರಾಮೆಡಿಕಲ್ ಸಿಬ್ಬಂದಿ ಇದ್ದಾರೆ. ಇವರಲ್ಲಿ ಮಹಿಳೆಯರ ಸಂಖ್ಯೆಯೇ ಹೆಚ್ಚಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಇಪ್ಪತ್ತು ವರ್ಷಗಳ ಹಿಂದೆ ನಗರಾಭಿವೃದ್ಧಿ ಸಚಿವರಾಗಿದ್ದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ನೀಡಿ ನಂತರ ದೆಹಲಿಗೆ ತೆರಳುವ ದಿನ ಬರಲಿದೆ ಎಂದು ಹೇಳಿದ್ದನ್ನು ಶಿವಕುಮಾರ್ ಸ್ಮರಿಸಿದರು.

ಮಹಿಳೆಯರ ರಾಜಕೀಯ ಪ್ರಾತಿನಿಧ್ಯ, ನಾಯಕತ್ವ ಮತ್ತು ತಂತ್ರಜ್ಞಾನ ಬಳಕೆಯ ಕುರಿತು ಜಾಗತಿಕ ಮಟ್ಟದಲ್ಲಿ ಚರ್ಚಿಸಲು ಈ ಸಮ್ಮೇಳನ ಮಹತ್ವದ ವೇದಿಕೆಯಾಗಿದೆ.

About the Author

Praja Vahini

Editor

View All Posts

Spread the love

Post navigation

Previous: RCB Retention 2027: ನಾಲ್ವರು ಆಟಗಾರರು ಔಟ್?
Next: ಜಾಗತಿಕ ತಂತ್ರಜ್ಞಾನ ಹಬ್ ಆಗಿ ಕರ್ನಾಟಕದ ಬೆಳವಣಿಗೆಗೆ ವೇಗ: ಡಿಕೆಶಿ

Views:

5

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.