Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಜೊತೆ ಆಶಾ ಕಾರ್ಯಕರ್ತೆಯರ ಸಂಧಾನ ಸಭೆ ವಿಫಲ
  • Bangalore
  • Front news
  • Politics
  • State

ಸಿಎಂ ಜೊತೆ ಆಶಾ ಕಾರ್ಯಕರ್ತೆಯರ ಸಂಧಾನ ಸಭೆ ವಿಫಲ

Praja Vahini November 19, 2026 1 minute read
IMG_3197
Spread the love

ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಗೃಹ ಕಚೇರಿ ‘ಗಂಗಾ’ದಲ್ಲಿ ಆಶಾ ಕಾರ್ಯಕರ್ತೆಯರ ನಿಯೋಗದೊಂದಿಗೆ ಸಂಧಾನ ಸಭೆ ನಡೆಸಿದರು. ಆದರೆ, ಸಭೆಯಲ್ಲಿ ಯಾವುದೇ ನಿರ್ದಿಷ್ಟ ನಿರ್ಧಾರ ಅಥವಾ ಲಿಖಿತ ಭರವಸೆ ಸಿಗದ ಹಿನ್ನೆಲೆಯಲ್ಲಿ ಮಾತುಕತೆ ವಿಫಲವಾಗಿದೆ.

ಸಭೆಯಲ್ಲಿ ಆಶಾ ಕಾರ್ಯಕರ್ತೆಯರು ಗೌರವಧನ ಹೆಚ್ಚಳ ಸೇರಿದಂತೆ ಸುಮಾರು 8ರಿಂದ 9 ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಮುಂದಿಟ್ಟರು. ಈ ಬೇಡಿಕೆಗಳನ್ನು ಪರಿಶೀಲಿಸಿ, ಮುಂಬರುವ ಅಧಿವೇಶನ ಮುಗಿಯುವುದರೊಳಗೆ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದರು. ಅಲ್ಲದೆ, ಸದ್ಯಕ್ಕೆ ಪ್ರತಿಭಟನೆಯನ್ನು ಹಿಂಪಡೆಯುವಂತೆ ಕಾರ್ಯಕರ್ತೆಯರಲ್ಲಿ ಮನವಿ ಮಾಡಿದರು.

ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ಹಾಗೂ ಸರ್ಕಾರ ಈಗಾಗಲೇ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಕುರಿತು ಸಭೆಯಲ್ಲಿ ಮುಖ್ಯಮಂತ್ರಿ ವಿವರಿಸಿದರು. ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಸ್ವಲ್ಪ ಕಾಲಾವಕಾಶದ ಅಗತ್ಯವಿದೆ ಎಂದು ತಿಳಿಸಿದರು ಎನ್ನಲಾಗಿದೆ.

ಆದರೆ, ಮುಖ್ಯಮಂತ್ರಿಗಳ ಈ ಭರವಸೆಯಿಂದ ಆಶಾ ಕಾರ್ಯಕರ್ತೆಯರು ಸಮಾಧಾನಗೊಂಡಿಲ್ಲ. ಈ ಹಿಂದೆಯೂ ಹಲವು ಬಾರಿ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಸರ್ಕಾರದಿಂದ ಸ್ಪಷ್ಟ ಲಿಖಿತ ಭರವಸೆ ಹಾಗೂ ಅಧಿಕೃತ ಆದೇಶ ಹೊರಬೀಳುವವರೆಗೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.

ಇದರಿಂದಾಗಿ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟ ಮುಂದುವರಿಯಲಿದ್ದು, ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವ ಕುರಿತು ಮುಂದಿನ ಕಾರ್ಯತಂತ್ರ ರೂಪಿಸಲು ನಿರ್ಧರಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದು
Next: ಬಂಡೀಪುರದಲ್ಲಿ ಹುಲಿ, ಕಾಡಾನೆ ಬೆನ್ನಟ್ಟಿದ ತಮಿಳುನಾಡು ಸಚಿವ?

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.