Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸುಲೇಪೇಟ ತಾಲೂಕು ರಚನೆಗೆ ಆಗ್ರಹ: ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ
  • State

ಸುಲೇಪೇಟ ತಾಲೂಕು ರಚನೆಗೆ ಆಗ್ರಹ: ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ

Praja Vahini November 20, 2026 1 minute read
WhatsApp Image 2026-11-20 at 15.57.54
Spread the love

ಚಿಂಚೋಳಿ: ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವಾದ ಸುಲೇಪೇಟವನ್ನು ನೂತನ ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಸುಲೇಪೇಟ ತಾಲೂಕು ಬೇಡಿಕೆ ಸಮಿತಿ, ರೈತರು, ವ್ಯಾಪಾರಸ್ಥರು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸ್ವಯಂಪ್ರೇರಿತ ಬಂದ್ ಆಚರಿಸಿ, ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಬಳಿಕ ಚಿಂಚೋಳಿ ತಹಶೀಲ್ದಾರ್ ಶಿವಾನಂದ ಮೇತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ವಾಣಿಜ್ಯ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾಗಿರುವ ಸುಲೇಪೇಟವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂಬುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ರಚನಾ ಸಮಿತಿ ಅಧ್ಯಕ್ಷ ಮಹಾರುದ್ರಪ್ಪ ದೇಸಾಯಿ, “ಈ ಭಾಗದ ಸಾರ್ವಜನಿಕರು ಮತ್ತು ರೈತರು ಸಣ್ಣಪುಟ್ಟ ಸರ್ಕಾರಿ ಕೆಲಸಗಳಿಗೂ ತಹಶೀಲ್ದಾರ್ ಕಚೇರಿ, ತಾಲೂಕು ಪಂಚಾಯಿತಿ, ಕೃಷಿ, ಶಿಕ್ಷಣ, ತೋಟಗಾರಿಕೆ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸೇರಿದಂತೆ ವಿವಿಧ ಕಚೇರಿಗಳಿಗೆ ಚಿಂಚೋಳಿಗೆ ಅಲೆಯಬೇಕಾಗಿದೆ. ಇದರಿಂದ ಜನಸಾಮಾನ್ಯರ ಸಮಯ ಮತ್ತು ಹಣ ವ್ಯರ್ಥವಾಗುತ್ತಿದೆ. ಸುಲೇಪೇಟ ತಾಲೂಕು ಕೇಂದ್ರವಾದರೆ ಆಡಳಿತ ವ್ಯವಸ್ಥೆ ಜನರ ಮನೆ ಬಾಗಿಲಿಗೆ ತಲುಪಿದಂತಾಗುತ್ತದೆ” ಎಂದರು.

“ಹತ್ತಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಸುಲೇಪೇಟ ಅತ್ಯಂತ ಸುಲಭವಾಗಿ ತಲುಪಬಹುದಾದ ಕೇಂದ್ರವಾಗಿದೆ. ಈಗಾಗಲೇ ಇಲ್ಲಿ ನಾಡ ಕಚೇರಿ, ಎಪಿಎಂಸಿ, ಜೆಸ್ಕಾಂ, ರೈತ ಸಂಪರ್ಕ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಗ್ರಂಥಾಲಯ, ಸುಸಜ್ಜಿತ ಬಸ್ ನಿಲ್ದಾಣ, ಪ್ರಥಮ ದರ್ಜೆ ಕಾಲೇಜು, ವೃತ್ತ ನಿರೀಕ್ಷಕರ ಕಚೇರಿ, ಪೊಲೀಸ್ ಠಾಣೆ, ವಸತಿ ನಿಲಯಗಳು, ಪ್ರವಾಸಿ ಮಂದಿರ, ಬ್ಯಾಂಕ್‌ಗಳು, ಕೈಗಾರಿಕೆಗಳು ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲಾ ಬಗೆಯ ವ್ಯಾಪಾರ-ವಹಿವಾಟು ಕೇಂದ್ರಗಳು ಇವೆ. ತಾಲೂಕು ಕೇಂದ್ರವಾಗಲು ಬೇಕಾದ ಎಲ್ಲಾ ಅರ್ಹತೆಗಳನ್ನು ಸುಲೇಪೇಟ ಹೊಂದಿದ್ದು, ಸರ್ಕಾರ ತಕ್ಷಣವೇ ಈ ಕುರಿತು ಅಧಿಕೃತ ಘೋಷಣೆ ಮಾಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಚಾಂದಪಾಶ ಮೋಮಿನ, ಶಿವಕುಮಾರ ಸೊಂತ, ಸೋಮಶೇಖರ ಅವರಾದಿ, ಜಹೀರುದ್ದೀನ್ ಪಟೇಲ್, ಮಾಣಿಕರಾವ ಗುಲಗುಂಜಿ, ರುದ್ರಮುನಿ ರಾಮತೀರ್ಥ, ಶಿವಾನಂದ ಸ್ವಾಮಿ, ಶಿವಕುಮಾರ ಸಜ್ಜನ, ಶರಣು ಸೊಂತ, ರವಿ ರಾಠೋಡ್, ನಾಮದೇವ ಪೊಲೀಸ್ ಪಾಟೀಲ್ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಯುವಕರು, ವ್ಯಾಪಾರಸ್ಥರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಸೆನಾ ರಾಷ್ಟ್ರಗಳಲ್ಲಿ ರಾಹುಲ್ ಅಪರೂಪದ ದಾಖಲೆ
Next: ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Views:

222

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.