Skip to content
November 21, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
  • Bangalore
  • Crime
  • State

ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Praja Vahini November 21, 2026
IMG_3222
Spread the love

ಮಂಗಳೂರು: ನಗರದ ಕಣಚೂರು ಮೆಡಿಕಲ್ ಕಾಲೇಜು ಕ್ಯಾಂಪಸ್‌ನಿಂದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳನ್ನು ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಕೋಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ, ನಾಪತ್ತೆಯಾಗಿದ್ದ ಯುವತಿಯನ್ನು ಕೇರಳದ ಸಂಬಂಧಿಕರ ಮನೆಯಲ್ಲಿ ಪತ್ತೆಹಚ್ಚಿ ರಕ್ಷಿಸಿದ್ದಾರೆ.

ಹಿಂದೂ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಮುಸ್ಲಿಂ ಯುವತಿಯ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಕಾಲೇಜು ಆವರಣದಿಂದಲೇ ಯುವತಿಯನ್ನು ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ಯಲಾಗಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಪೊಲೀಸರ ಮುಂದೆ ಯುವತಿ ಹೇಳಿದ್ದೇನು?

ಯುವತಿಯನ್ನು ಪತ್ತೆಹಚ್ಚಿದ ಬಳಿಕ ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಈ ವೇಳೆ, “ನನಗೆ ಮನೆಯವರ ಜೊತೆ ಹೋಗಲು ಕಿಂಚಿತ್ತೂ ಇಷ್ಟವಿಲ್ಲ” ಎಂದು ಯುವತಿ ಸ್ಪಷ್ಟವಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.

ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಕಾನೂನು ಪ್ರಕ್ರಿಯೆಯಂತೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಪೋಷಕರಿಗೂ ಕಾನೂನು ಅನ್ವಯ: ಪೊಲೀಸ್ ಆಯುಕ್ತರ ಎಚ್ಚರಿಕೆ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಯುವತಿಯ ಇಚ್ಛೆಗೆ ವಿರುದ್ಧವಾಗಿ ಆಕೆಯನ್ನು ಬಲವಂತವಾಗಿ ಕರೆದೊಯ್ಯುವುದು ಗಂಭೀರ ಅಪರಾಧವಾಗುತ್ತದೆ ಎಂದು ತಿಳಿಸಿದ್ದಾರೆ.

ಯುವತಿ ಪ್ರಾಪ್ತವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು, ಯಾರೊಂದಿಗೆ ಇರಬೇಕು ಎಂಬುದನ್ನು ನಿರ್ಧರಿಸುವ ಸಂಪೂರ್ಣ ಹಕ್ಕು ಆಕೆಗಿದೆ. ಕುಟುಂಬದವರಾಗಿದ್ದರೂ ಆಕೆಯ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಕ್ಷಣ ಮಾಹಿತಿ ನೀಡಿದ್ದರೆ ರಕ್ಷಣೆ ಸಾಧ್ಯವಿತ್ತು

ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರೆ ವಾಹನವನ್ನು ತಡೆದು ಯುವತಿಯನ್ನು ಸ್ಥಳದಲ್ಲೇ ರಕ್ಷಿಸಲು ಸಾಧ್ಯವಾಗುತ್ತಿತ್ತು ಎಂದು ಆಯುಕ್ತರು ತಿಳಿಸಿದ್ದಾರೆ.

ಸದ್ಯ ಪೊಲೀಸರು ಯುವತಿಯ ಹೇಳಿಕೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸುತ್ತಿದ್ದು, ಮುಂದಿನ ಕಾನೂನು ಕ್ರಮಗಳಿಗಾಗಿ ತನಿಖೆ ಮುಂದುವರಿಸಿದ್ದಾರೆ. ಕಾಲೇಜು ಕ್ಯಾಂಪಸ್‌ನಿಂದ ಯುವತಿಯನ್ನು ಬಲವಂತವಾಗಿ ಕರೆದೊಯ್ದಿದ್ದ ಘಟನೆ ಇದೀಗ ಆಕೆಯ ಹೇಳಿಕೆಯಿಂದ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

About the Author

Praja Vahini

Editor

View All Posts

Spread the love

Post navigation

Previous: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಮುನ್ನಡೆ
Next: ಬೆಂಗಳೂರು ಕನಕಪುರ ರಸ್ತೆ ವಾಹನ ಸವಾರರಿಗೆ ಗುಡ್‌ನ್ಯೂಸ್

Views:

1

You may have missed

WhatsApp Image 2026-11-21 at 18.10.26
  • Politics
  • State
  • ಶಹಾಪುರ

ನಿಲ್ಲದ ರೈತರ ಧರಣಿ, ಕ್ಷಣ ಕ್ಷಣಕ್ಕೂ ಸರ್ಕಾರಕ್ಕೆ ಎಚ್ಚರಿಕೆ

Praja Vahini November 21, 2026
IMG_3223
  • Bangalore
  • Front news
  • Politics
  • State

ಬೆಂಗಳೂರು ಕನಕಪುರ ರಸ್ತೆ ವಾಹನ ಸವಾರರಿಗೆ ಗುಡ್‌ನ್ಯೂಸ್

Praja Vahini November 21, 2026
IMG_3222
  • Bangalore
  • Crime
  • State

ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Praja Vahini November 21, 2026
IMG_3221
  • Cricket
  • Front news
  • International

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಮುನ್ನಡೆ

Praja Vahini November 21, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.