Skip to content
November 21, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಂಗಳೂರು ಕನಕಪುರ ರಸ್ತೆ ವಾಹನ ಸವಾರರಿಗೆ ಗುಡ್‌ನ್ಯೂಸ್
  • Bangalore
  • Front news
  • Politics
  • State

ಬೆಂಗಳೂರು ಕನಕಪುರ ರಸ್ತೆ ವಾಹನ ಸವಾರರಿಗೆ ಗುಡ್‌ನ್ಯೂಸ್

Praja Vahini November 21, 2026 1 minute read
IMG_3223
Spread the love

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕನಕಪುರ ರಸ್ತೆ ಹಾಗೂ ಫೋರಂ ಮಾಲ್ ಸುತ್ತಮುತ್ತ ಸಂಚಾರ ದಟ್ಟಣೆಯಿಂದ ಕಿರಿಕಿರಿ ಅನುಭವಿಸುತ್ತಿರುವ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದೆ. ಕೋಣನಕುಂಟೆ ಕ್ರಾಸ್‌ನಲ್ಲಿ ಬಹುದಿನಗಳ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಲ್ಪಿಸಲು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಹತ್ವದ ಯೋಜನೆ ರೂಪಿಸಿದೆ. ಇಲ್ಲಿ ಸುಮಾರು ₹77 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಿಸಲು ಸಿದ್ಧತೆ ನಡೆಸಲಾಗಿದ್ದು, ಸದ್ಯ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ.

ನವೆಂಬರ್ 21ರಂದು ಕೋಣನಕುಂಟೆ ಜಂಕ್ಷನ್‌ನಲ್ಲಿ ‘ವಾರ್ಡ್ ಒನ್- ಮೂರನೇ ಹಂತದ ಅಭಿಯಾನ’ಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಮಾಹಿತಿ ನೀಡಿದ್ದಾರೆ.

600 ಮೀಟರ್ ಉದ್ದದ ಸ್ಪ್ಲಿಟ್ ಫ್ಲೈಓವರ್

ಕೋಣನಕುಂಟೆ ಕ್ರಾಸ್‌ನಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಬಿ-ಸ್ಮೈಲ್ ವತಿಯಿಂದ ಮೇಲ್ಸೇತುವೆ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಎರಡೂ ಬದಿಗಳಲ್ಲಿ ತಲಾ ಸುಮಾರು 600 ಮೀಟರ್ ಉದ್ದದ ಸ್ಪ್ಲಿಟ್ ಮಾದರಿಯ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ.

ಮೇಲ್ಸೇತುವೆ ನಿರ್ಮಾಣ ಮತ್ತು ಭೂಸ್ವಾಧೀನ ಸೇರಿದಂತೆ ಒಟ್ಟು ₹77 ಕೋಟಿ ವೆಚ್ಚವಾಗುವ ಅಂದಾಜಿದೆ. ಕಾಮಗಾರಿ ಆರಂಭಿಸಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರದಲ್ಲೇ ಕೆಲಸ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಮೇಲ್ಸೇತುವೆ ನಿರ್ಮಾಣದಿಂದ ಕೋಣನಕುಂಟೆ ಕ್ರಾಸ್‌ನಲ್ಲಿ ಸಿಗ್ನಲ್ ಮುಕ್ತ ಸಂಚಾರಕ್ಕೆ ಅವಕಾಶ ಸಿಗಲಿದ್ದು, ವಾಹನ ದಟ್ಟಣೆ ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ.

ಫೋರಂ ಮಾಲ್ ಬಳಿ ಫ್ರೀ ಲೆಫ್ಟ್ ವ್ಯವಸ್ಥೆ

ಮೇಲ್ಸೇತುವೆ ನಿರ್ಮಾಣದ ಜೊತೆಗೆ ತಕ್ಷಣದ ಸಂಚಾರ ಸುಧಾರಣೆಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಫೋರಂ ಮಾಲ್ ಸಮೀಪ ಮೆಟ್ರೋಗೆ ಸೇರಿದ ಜಾಗವನ್ನು ಪಡೆದು ವಾಹನ ಸವಾರರಿಗೆ ಫ್ರೀ ಲೆಫ್ಟ್ ವ್ಯವಸ್ಥೆ ಕಲ್ಪಿಸಲು ಸಚಿವರು ಸೂಚನೆ ನೀಡಿದ್ದಾರೆ.

ಇದಲ್ಲದೆ, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಜೀಬ್ರಾ ಕ್ರಾಸಿಂಗ್, ರಸ್ತೆ ಲೈನ್ ಮಾರ್ಕಿಂಗ್ ಮತ್ತು ಸೈಡ್ ಮಾರ್ಕಿಂಗ್ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಮಾಲ್ ಮುಂಭಾಗದಲ್ಲಿರುವ ಅಡ್ಡ ತಡೆಗೋಡೆಯನ್ನು ತೆರವುಗೊಳಿಸಿ, ಪಾದಚಾರಿಗಳ ಅನುಕೂಲಕ್ಕಾಗಿ ಮೆಟ್ಟಿಲುಗಳನ್ನು ನಿರ್ಮಿಸುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಮೆಟ್ರೋ ನಿಲ್ದಾಣದ ಬಳಿ ಸ್ಕೈವಾಕ್ ನಿರ್ಮಾಣ

ಕೋಣನಕುಂಟೆ ಕ್ರಾಸ್‌ನಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಪಾದಚಾರಿಗಳ ಓಡಾಟ ಹೆಚ್ಚಾಗುವ ಸಾಧ್ಯತೆಯಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಇಲ್ಲಿ ಸ್ಕೈವಾಕ್ ನಿರ್ಮಿಸಲು ಕೂಡ ಅಧಿಕಾರಿಗಳಿಗೆ ಸೂಚಿಸಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
Next: ನಿಲ್ಲದ ರೈತರ ಧರಣಿ, ಕ್ಷಣ ಕ್ಷಣಕ್ಕೂ ಸರ್ಕಾರಕ್ಕೆ ಎಚ್ಚರಿಕೆ

Views:

4

You may have missed

WhatsApp Image 2026-11-21 at 18.10.26
  • Politics
  • State
  • ಶಹಾಪುರ

ನಿಲ್ಲದ ರೈತರ ಧರಣಿ, ಕ್ಷಣ ಕ್ಷಣಕ್ಕೂ ಸರ್ಕಾರಕ್ಕೆ ಎಚ್ಚರಿಕೆ

Praja Vahini November 21, 2026
IMG_3223
  • Bangalore
  • Front news
  • Politics
  • State

ಬೆಂಗಳೂರು ಕನಕಪುರ ರಸ್ತೆ ವಾಹನ ಸವಾರರಿಗೆ ಗುಡ್‌ನ್ಯೂಸ್

Praja Vahini November 21, 2026
IMG_3222
  • Bangalore
  • Crime
  • State

ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Praja Vahini November 21, 2026
IMG_3221
  • Cricket
  • Front news
  • International

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಮುನ್ನಡೆ

Praja Vahini November 21, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.