Skip to content
November 27, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಂವಿಧಾನದ ಧ್ವನಿ ಜನರ ಧ್ವನಿಯಾಗಬೇಕು; ಸಿದ್ದರಾಮಯ್ಯ
  • Bangalore
  • Front news
  • Politics
  • State

ಸಂವಿಧಾನದ ಧ್ವನಿ ಜನರ ಧ್ವನಿಯಾಗಬೇಕು; ಸಿದ್ದರಾಮಯ್ಯ

Praja Vahini November 27, 2026
1437d91f-1433-4164-a015-dfd1e931f8ef
Spread the love

ಮೈಸೂರು: ಭಾರತದ ಸಂವಿಧಾನ ಅಂಗೀಕಾರವಾಗಿ 77 ವರ್ಷಗಳು ಕಳೆದಿದ್ದರೂ ಅದರ ಆಶಯಗಳು ಸಂಪೂರ್ಣವಾಗಿ ಸಾಕಾರಗೊಂಡಿಲ್ಲ. ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳು ಪ್ರತಿಯೊಬ್ಬರಿಗೂ ಅರ್ಥವಾಗಬೇಕು. ಸಂವಿಧಾನದ ಧ್ವನಿ ಜನರ ಧ್ವನಿಯಾಗಬೇಕು. ಇದಕ್ಕಾಗಿ ಸಮಾಜದಲ್ಲಿ ನಿರಂತರ ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಆಯೋಜಿಸಿದ್ದ ‘ಸಂವಿಧಾನ ಧ್ವನಿ – ಜನರ ಧ್ವನಿ’ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ, ಸಾಮಾಜಿಕ ನ್ಯಾಯ, ಸಮಾನತೆ ಮತ್ತು ವೈಚಾರಿಕತೆಯ ಮಹತ್ವವನ್ನು ವಿವರಿಸಿದರು.

ಎರಡು ವರ್ಷ, ಹನ್ನೊಂದು ತಿಂಗಳು, ಹದಿನೆಂಟು ದಿನಗಳ ಸುದೀರ್ಘ ಪ್ರಕ್ರಿಯೆಯಲ್ಲಿ ಭಾರತದ ಸಂವಿಧಾನ ರಚನೆಯಾಗಿದೆ. ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ಅವರು ತಮ್ಮ ಅಪಾರ ಪಾಂಡಿತ್ಯ, ಅನುಭವ ಹಾಗೂ ಜಾಗತಿಕ ಸಂವಿಧಾನಗಳ ಅಧ್ಯಯನದ ಮೂಲಕ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದನ್ನು ದೇಶಕ್ಕೆ ನೀಡಿದ್ದಾರೆ ಎಂದು ಸ್ಮರಿಸಿದರು.

ಮೂಲ ಸಂವಿಧಾನದಲ್ಲಿ 395 ವಿಧಿಗಳಿದ್ದು, ಕಾಲಕ್ಕೆ ತಕ್ಕಂತೆ ತಿದ್ದುಪಡಿ ಮಾಡಿಕೊಳ್ಳುವ ಅವಕಾಶ ಅದರ ಪ್ರಮುಖ ವೈಶಿಷ್ಟ್ಯವಾಗಿದೆ. ಆದರೆ ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಅದನ್ನು ಅನುಷ್ಠಾನಗೊಳಿಸುವವರ ಬದ್ಧತೆಯೇ ಅದರ ಯಶಸ್ಸನ್ನು ನಿರ್ಧರಿಸುತ್ತದೆ ಎಂಬ ಅಂಬೇಡ್ಕರ್ ಅವರ ಮಾತುಗಳನ್ನು ಉಲ್ಲೇಖಿಸಿದರು.

ಸಂವಿಧಾನದ ಪರವಾಗಿರುವವರು ಯಾರು, ಮನುಸ್ಮೃತಿಯ ಪರವಾಗಿರುವವರು ಯಾರು ಎಂಬುದನ್ನು ಜನರು ಗುರುತಿಸಬೇಕು. ಅಂಬೇಡ್ಕರ್ ಅವರ ವಿಚಾರಧಾರೆಗೆ ಬದ್ಧತೆ ಕೇವಲ ಮಾತುಗಳಲ್ಲಿ ಇರದೆ, ನಮ್ಮ ನಡೆ ಮತ್ತು ನಿಲುವುಗಳಲ್ಲಿಯೂ ಪ್ರತಿಫಲಿಸಬೇಕು ಎಂದರು.

ಮನುಸ್ಮೃತಿ ಪ್ರತಿಪಾದಿಸಿದ ಸಾಮಾಜಿಕ ವ್ಯವಸ್ಥೆಯಿಂದ ಬಹುಸಂಖ್ಯಾತರು ಶಿಕ್ಷಣ, ಸಂಪತ್ತು ಮತ್ತು ಅವಕಾಶಗಳಿಂದ ವಂಚಿತರಾಗಿದ್ದರು. ಈ ಅನ್ಯಾಯದ ವಿರುದ್ಧ ಅಂಬೇಡ್ಕರ್ ಹೋರಾಡಿ, ಅವಕಾಶವಂಚಿತ ಸಮುದಾಯಗಳಿಗೆ ಸಂವಿಧಾನದ ಮೂಲಕ ಹಕ್ಕುಗಳನ್ನು ಕಲ್ಪಿಸಿಕೊಟ್ಟರು ಎಂದು ಹೇಳಿದರು.

ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರು ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂವಿಧಾನದ ಅರಿವಿನಿಂದ ಮಾತ್ರ ಜನರು ತಮ್ಮ ಹಕ್ಕುಗಳನ್ನು ಮತ್ತು ಸಾಮಾಜಿಕ ಅನ್ಯಾಯಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯ ಎಂದರು.

ಸಂವಿಧಾನದ 17ನೇ ವಿಧಿ ಅಸ್ಪೃಶ್ಯತೆಯನ್ನು ನಿಷೇಧಿಸಿದ್ದರೂ ಸಮಾಜದಲ್ಲಿ ಅದು ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಶಿಕ್ಷಣ ಪಡೆದವರಲ್ಲಿಯೂ ಮೌಢ್ಯ, ಕಂದಾಚಾರಗಳು ಮುಂದುವರಿದಿರುವುದು ಕಳವಳಕಾರಿ ಸಂಗತಿ. ಸಮಾಜದಲ್ಲಿ ಸಮಾನತೆ ನೆಲೆಸಲು ಮಾನವೀಯತೆ ಮತ್ತು ವೈಚಾರಿಕತೆ ಬೆಳೆಯಬೇಕು ಎಂದು ಅಭಿಪ್ರಾಯಪಟ್ಟರು.

ಸಂವಿಧಾನದ 14ನೇ ವಿಧಿ ಎಲ್ಲರಿಗೂ ಕಾನೂನಿನ ಮುಂದೆ ಸಮಾನತೆಯನ್ನು ಖಾತರಿಪಡಿಸುತ್ತದೆ. ಸಮಾಜದಲ್ಲಿ ದ್ವೇಷ ಹರಡುವ ಪ್ರಯತ್ನಗಳ ಬಗ್ಗೆ ಜನರು ಎಚ್ಚರಿಕೆಯಿಂದಿರಬೇಕು. ಪರಸ್ಪರ ದ್ವೇಷಿಸುವ ಬದಲು ಪ್ರೀತಿ ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಅಂಬೇಡ್ಕರ್ ಅವರು ಕನಸು ಕಂಡ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದರು.

ಕಳೆದ ಒಂದು ವರ್ಷದಿಂದ ಸಂವಿಧಾನದ ಕುರಿತು ಜನಜಾಗೃತಿ ಮೂಡಿಸುತ್ತಿರುವ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಕಾರ್ಯವನ್ನು ಶ್ಲಾಘಿಸಿದ ಅವರು, ಇಂತಹ ಕಾರ್ಯಕ್ರಮಗಳಿಗೆ ತಮ್ಮ ಸಂಪೂರ್ಣ ಸಹಕಾರವಿದ್ದು, ಸಾಧ್ಯವಾದ ಕಡೆಗಳಲ್ಲಿ ಭಾಗವಹಿಸುವುದಾಗಿ ಭರವಸೆ ನೀಡಿದರು. ಸಂವಿಧಾನದ ಧ್ವನಿಯನ್ನು ಜನರ ಧ್ವನಿಯಾಗಿಸುವ ಜನಜಾಗೃತಿ ಆಂದೋಲನ ಯಶಸ್ವಿಯಾಗಲಿ ಎಂದು ಹಾರೈಸಿದರು.

About the Author

Praja Vahini

Editor

View All Posts

Spread the love

Post navigation

Previous: 99ನೇ ಆಸ್ಕರ್ ಪ್ರಶಸ್ತಿ ಅಭಿಯಾನಕ್ಕೆ ಕರ್ನಾಟಕದ ‘ಪಂಕಜ’ ಲಗ್ಗೆ!
Next: ತಾಲೂಕಾಡಳಿತ ವತಿಯಿಂದ ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ/ ಅದ್ಧೂರಿ ಮೆರವಣಿಗೆ

Views:

1

You may have missed

WhatsApp Image 2026-11-27 at 15.49.44
  • Politics
  • State
  • ಶಹಾಪುರ

ತಾಲೂಕಾಡಳಿತ ವತಿಯಿಂದ ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ/ ಅದ್ಧೂರಿ ಮೆರವಣಿಗೆ

Praja Vahini November 27, 2026
1437d91f-1433-4164-a015-dfd1e931f8ef
  • Bangalore
  • Front news
  • Politics
  • State

ಸಂವಿಧಾನದ ಧ್ವನಿ ಜನರ ಧ್ವನಿಯಾಗಬೇಕು; ಸಿದ್ದರಾಮಯ್ಯ

Praja Vahini November 27, 2026
WhatsApp Image 2026-11-26 at 12.48.23
  • Bangalore
  • Cinema
  • State

99ನೇ ಆಸ್ಕರ್ ಪ್ರಶಸ್ತಿ ಅಭಿಯಾನಕ್ಕೆ ಕರ್ನಾಟಕದ ‘ಪಂಕಜ’ ಲಗ್ಗೆ!

Praja Vahini November 26, 2026
IMG_3293
  • Bangalore
  • Front news
  • Politics
  • State

ಸರ್ಕಾರಿ ಜಮೀನು ಕಬಳಿಕೆ ಆರೋಪ: ಶಾಸಕ ಪ್ರಭು ಚೌಹಾಣ್‌ಗೆ ವಿಶೇಷ ನ್ಯಾಯಾಲಯದಿಂದ ನೋಟಿಸ್

Praja Vahini November 26, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.