ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕರ್ನಾಟಕದ ಸಿಂಗಂ ಎಂದು ಖ್ಯಾತಿ ಪಡೆದಿರುವ ಅಣ್ಣಾಮಲೈ ಕುಪ್ಪುಸ್ವಾಮಿ ಅವರು ಮಂಗಳವಾರ ಅಧಿಕೃತವಾಗಿ ದೆಹಲಿಯ ಪಕ್ಷದ ಮುಖ್ಯ ಕಚೇರಿಯಲ್ಲಿ ಬಿಜೆಪಿಗೆ ಸೇರಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಇವರ ಆಗಮಕ್ಕೆ ಇಡೀ ಬಿಜೆಪಿ ಪಕ್ಷ ಸಂತಸವ್ಯಕ್ತಪಡಿಸಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್, ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.
Former IPS officer Annamalai Kuppusamy joins BJP at party headquarters in Delhi in the presence of BJP national general secretary P Muralidhar Rao (left) & Tamil Nadu BJP president L Murugan (right). pic.twitter.com/zBK0C9ybkd
— ANI (@ANI) August 25, 2020