ಪೊಲೀಸ್ ವಾಹನದ ಕೆಳಗೆ ಬಾಂಬ್ ಪತ್ತೆ..!

  • In Crime
  • August 17, 2022
  • 265 Views
ಪೊಲೀಸ್ ವಾಹನದ ಕೆಳಗೆ ಬಾಂಬ್ ಪತ್ತೆ..!

ಚಂಡೀಗಢ, ಆ 17: ಪೊಲೀಸ್ ಅಧಿಕಾರಿಯೊಬ್ಬರ ಕಾರಿನ ಕೆಳಗೆ ಬಾಂಬ್ ಮಾದರಿಯ ವಸ್ತುವೊಂದು ಪತ್ತೆ ಆದ ಘಟನೆ ಪಂಜಾಬ್ನ ಅಮೃತಸರ ಜಿಲ್ಲೆಯಲ್ಲಿ ನಡೆದಿದೆ.

ಅಮೃತಸರದ ರಂಜಿತ್ ಅವೆನ್ಯೂ ಪ್ರದೇಶದಲ್ಲಿರುವ ಸಬ್ ಇನ್ಸ್ಪೆಕ್ಟರ್ ದಿಲ್ಬಾಗ್ ಸಿಂಗ್ ಅವರ ನಿವಾಸದ ಬಳಿ ಬಾಂಬ್ ಮಾದರಿಯ ವಸ್ತು ಪತ್ತೆ ಆಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿದ ಪೊಲೀಸರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ನಲ್ಲಿ ಬಂದು ಪೊಲೀಸ್ ಕಾರಿನ ಕೆಳಗೆ ಈ ಅನುಮಾನಸ್ಪದ ವಸ್ತುವನ್ನು ಇಟ್ಟು ಹೋಗಿರುವುದು ಕಂಡು ಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಈ ವಸ್ತು ಬಾಂಬ್ ಎಂದು ತಿಳಿಸಿದ್ದಾರೆ. ಇನ್ಸ್ಪೆಕ್ಟರ್ ಜನರಲ್ ಸುಖ್ ಚಾನ್ ಸಿಂಗ್ ಗೋಲ್ ಅವರು, ಈ ವಸ್ತುವು ಡಿಟೋನೇಟರ್ ಆಗಿರಬಹುದು ಎಂದು ಹೇಳಿದ್ದಾರೆ. ಪೊಲೀಸರು ವಾಹನವನ್ನು ಪ್ರದೇಶದಿಂದ ಸ್ಥಳಾಂತರಿಸಿದ್ದಾರೆ. ಘಟನೆ ಸಂಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Related