ಕೊಳವೆ ಬಾವಿಗೆ ಬಿದ್ದ ಮಗು 18 ಗಂಟೆಗಳ ನಂತರ ಜೀವಂತ

ಕೊಳವೆ ಬಾವಿಗೆ ಬಿದ್ದ ಮಗು 18 ಗಂಟೆಗಳ ನಂತರ ಜೀವಂತ

ವಿಜಯಪುರ ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಚಾಣಕ್ಯ ಗ್ರಾಮದಲ್ಲಿ ಬುಧವಾರ ಸುಮಾರು 6 ಘಂಟೆಗೆ ಎರಡು ವರ್ಷದ ಬಾಲಕ ಸಾತ್ವಿಕ್ ಜಮಖಂಡಿ ಕಳವೆಬಾವಿಗೆ ಬಿದ್ದ ಕಾರಣ ರಕ್ಷಣಾ ಕಾರ್ಣಿಚರಣೆ ಚುರುಕುಗೊಂಡಿದ್ದು, ಇಂದು ಸಾತ್ವಿಕ್ 18 ಗಂಟೆಗಳ ನಂತರ ಜೀವಂತ ಬದುಕುಳಿದಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಸುಮಾರು 18 ಗಂಟೆಗಳ ಕಾಲ ರಕ್ಷಣಾ ಕಾರ್ಯಚರಣೆ ಚುರುಕುಗೊಂಡಿದ್ದು ಇಂದು ಗುರುವಾರ ಸಾತ್ವಿಕ್ ಅವರನ್ನು ರಕ್ಷಣಾ ಸಿಬ್ಬಂದಿಗಳು ಜೀವಂತ ಹೊರ ತೆಗೆದಿದ್ದಾರೆ. ಇದರಿಂದ ಸಾತ್ವಿಕ್ ಅವರ ಹೆತ್ತವರ ಮುಖದಲ್ಲಿ ಸಂತಸ ಹಮ್ಮಿದೆ.

ಇನ್ನು ಮಗುವನ್ನು ಹೊರ ತೆಗೆದ ತಕ್ಷಣ ಪ್ರಥಮ ಚಿಕಿತ್ಸೆ ನೀಡಿದ ವೈದ್ಯರ ತಂಡ ಬಳಿಕ ಆಂಬುಲೆನ್ಸ್‌ನಲ್ಲಿ ಮಗುವನ್ನು ಇಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದೆ. ಸ್ಥಳದಲ್ಲಿ ಜಮಾಯಿಸಿದ್ದ ಸಾವಿರಾರು ಮಂದಿಯ ಪ್ರಾರ್ಥನೆ ಕೊನೆಗೂ ಫಲಿಸಿದ್ದು, ಮಗು ಜೀವಂತವಾಗಿ ಬಂದಿದೆ. ರಕ್ಷಣಾ ಕಾರ್ಯಾಚರಣೆ ಇನ್ನೇನು ಕೊನೆ ಕ್ಷಣಕ್ಕೆ ತಲುಪುತ್ತಿದ್ದಂತೆಯೇ ಮಗು ಅಳುವ ಸದ್ದು ಜೋರಾಗಿ ಕೇಳಿಸುತ್ತಿತ್ತು.

ಮಗು ಬಾವಿಗೆ ಬಿದ್ದ ತಕ್ಷಣ ಅರ್ಧ ಗಂಟೆ ಊರವರು ಮತ್ತು ಸ್ಥಳೀಯರು ಮಗುವಿನ ರಕ್ಷಣೆಗೆ ಮುಂದಾಗಿ ಸಾಧ್ಯವಾಗದೇ ಇದ್ದಾಗ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ನಿನ್ನೆ ಸಂಜೆಯಿಂದ ಇಂದು ಬೆಳಗ್ಗೆ 11 ಗಂಟೆಯವರೆಗೆ ಒಂದು ನಿಮಿಷವೂ ಬಿಡುವು ನೀಡದೆ ನಿರಂತರ ಕಾರ್ಯಾಚರಣೆ ನಡೆಸಿದ್ದರು. ಇದರ ಜೊತೆಗೆ ಮಗುವಿನ ಚಲನವಲನಗಳ ಬಗ್ಗೆ ಕ್ಯಾಮಾರದಲ್ಲಿ ಸೆರೆಹಿಡಿಯಲಾಗಿತ್ತು. ಮಗು ಕಾಲು ಅಲ್ಲಾಡಿಸುತ್ತಿರುವುದು ಕ್ಯಾಮರಾದಲ್ಲಿ ದಾಖಲಾಗಿತ್ತು. ಬಳಿಕ ಮಗುವಿಗೆ ಆಕ್ಸಿಜನ್‌ ವ್ಯವಸ್ಥೆ ಕೂಡ ಮಾಡಲಾಗಿತ್ತು.

 

Related