ವರುಣನ ಅಬ್ಬರಕ್ಕೆ ನೀರಿನಲ್ಲಿ ಕೊಚ್ಚಿಹೋದ ರೈತ

ವರುಣನ ಅಬ್ಬರಕ್ಕೆ ನೀರಿನಲ್ಲಿ ಕೊಚ್ಚಿಹೋದ ರೈತ

ವಿಜಯಪುರ : ವರುಣನ ಅಬ್ಬರಕ್ಕೆ ಉತ್ತರ ಕರ್ನಾಟಕದ ಜಿಲ್ಲೆಗಳು ತತ್ತರಿಸಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ಹೊಲಕ್ಕೆ ತೆರಳಿದ್ದ ರೈತರೊಬ್ಬರು ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಶಿವಪುರ ನಾಟೀಕಾರ ನೀರಿನಲ್ಲಿ ಕೊಚ್ಚಿಹೋದ ರೈತ. ವಿಜಯಪುರದ ದೇವರಹಿಪ್ಪರಗಿಯಲ್ಲಿ ಈ ಘಟನೆ ನಡೆದಿದ್ದು, ಜಮೀನಿಗೆ ಹೋಗಿ ಬರುವುದಾಗಿ ತೆರಳಿದ್ದ ರೈತ ಶಿವಪುತ್ರ, ಮಳೆಯಿಂದ ತುಂಬಿ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯರು ರೈತನಿಗಾಗಿ ಶೋಧ ನಡೆಸಿದ್ದಾರೆ.

Related