ಸಿಲಿಕಾನ್ ಸಿಟಿಯಲ್ಲಿ ಬೆಂಕಿ ಅವಘಡ

ಸಿಲಿಕಾನ್ ಸಿಟಿಯಲ್ಲಿ ಬೆಂಕಿ ಅವಘಡ

ಬೆಂಗಳೂರು: ಸಿಲ್ಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿಗೆ ಹೆಚ್ಚಾಗಿ ಬೆಂಕಿ ಅವಘಡಗಳು ಕಾಣಿಸಿಕೊಳ್ಳುತ್ತಿದ್ದು, ಅದರಂತೆ ಇಂದು ಮತ್ತೊಂದು ಬೆಂಕಿ ಅವಘಡ ಕಾಣಿಸಿ ಕೊಂಡಿದೆ.

ಹೌದು, ಆರ್ ಟಿ ನಗರದ ಪ್ರಮುಖ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಮಧ್ಯಾಹ್ನ ಸುಮಾರು 1:30 ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಇದರಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಇನ್ನು ಎರಡನೇ ಅಂತಸ್ತಿನಲ್ಲಿ ಖಾಸಗಿ ಕಂಪನಿಯೊಂದು ಕಾರ್ಯನಿರ್ವಹಿಸುತ್ತಿದ್ದು ದಿಢೀರ್ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿಗಳಲ್ಲ ಆತಂಕ ಕೊಳಗಾಗಿದ್ದು ವಿಷಯ ತಿಳಿದ ತಕ್ಷಣವೇ ಎಲ್ಲಾ ಸಿಬ್ಬಂದಿಗಳು ಹೊರಗಡೆ ಹೋಗಿದ್ದಾರೆ.

ಇತ್ತ ಬೆಂಕಿ ಅವಘಡ ಸ್ಥಳದಲ್ಲಿ ನಾಲ್ಕು ಅಗ್ನಿಶಾಮಕ ವಾಹನಗಳು, 20ಕ್ಕೂ ಹೆಚ್ಚು ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎರಡನೇ ಮಹಡಿಯಲ್ಲಿ ಸಿಲುಕಿದ್ದ ಜನರನ್ನು ಏಣಿ ಮೂಲಕ ಕೆಳಗೆ ಕರೆದುಕೊಂಡು ಬರಲಾಗಿದೆ. ಇದರ ಜೊತೆಗೆ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ತಗುಲದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

Related