ಕಾಲ್ನಡಿಗೆಯ ಮುಖಾಂತರ ಸಮಸ್ಯೆಗಳ ಖುದ್ದು ಪರಿವೀಕ್ಷಣೆ: ತುಷಾರ್ ಗಿರಿ ನಾಥ್

ಕಾಲ್ನಡಿಗೆಯ ಮುಖಾಂತರ ಸಮಸ್ಯೆಗಳ ಖುದ್ದು ಪರಿವೀಕ್ಷಣೆ: ತುಷಾರ್ ಗಿರಿ ನಾಥ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ಬೆಳಗ್ಗೆ 6.30 ರಿಂದ 9.30 ಗಂಟೆಯವರೆಗೆ ರವರೆಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಸುಮಾರು 7 ಕಿ.ಮೀ ರಸ್ತೆಯನ್ನು ಕಾಲ್ನಡಿಗೆಯ ಮೂಲಕ ಮಿನರ್ವಾ ವೃತ್ತದಿಂದ ಡಾಯಾಗ್ನಲ್ ರಸ್ತೆ, ಸಜ್ಜನ್ ರಾವ್ ರಸ್ತೆ, ಕವಿ ಲಕ್ಷ್ಮೀಷ ರಸ್ತೆ, ನ್ಯಾಷನಲ್ ಕಾಲೇಜು ವೃತ್ತ, ಕೆ.ಆರ್.ರಸ್ತೆ, ನೆಟ್ಟಕಲ್ಲಪ್ಪ‌ ವೃತ್ತ, ದೇವನ್ ಮಾದೇವ ರಸ್ತೆ, ಆರ್ಮುಗಂ ವೃತ್ತ, ಪಟ್ಟಾಲಮ್ಮ‌ ದೇವಸ್ಥಾನ ರಸ್ತೆ ಹಾಗೂ ಸೌತ್ ಎಂಡ್ ವೃತ್ತದವರೆಗೆ ವರೆಗೆ ಪರಿಶೀಲನೆ ನಡೆಸಲಾಯಿತು.

ನಗರದ ಎಂಟೂ ವಲಯದಲ್ಲಿ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಅದನ್ನು ತ್ವರಿತವಾಗಿ ಟೆಂಡರ್ ಮಾಡಿ ಯೋಜನೆ ಕಾರ್ಯರೂಪಕ್ಕೆ ತರಲು ಪ್ರಧಾನ ಅಭಿಯಂತರರು ಹಾಗೂ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಅಭಿಯಂತರರಾದ ಪ್ರಹ್ಲಾದ್ ರವರಿಗೆ ಸೂಚನೆ ನೀಡಿದರು.

ಪರಿಶೀಲನೆ ನಡೆಸಿದ ಎಲ್ಲಾ ಕಡೆಯೂ ರಸ್ತೆಗೆ ಹಾಗೂ ಬೀದಿ ದೀಪಗಳಿಗೆ ಅಡ್ಡಲಾಗಿದ್ದ ಮರದ ಕೊಂಬೆಗಳನ್ನು ಅರಣ್ಯ ವಿಭಾಗದ ಸಿಬ್ಬಂದಿ ಪರಿಶೀಲನೆ ವೇಳೆಯೇ ಮರ ಕಟಾವು ಯಂತ್ರದ ಮೂಲಕ ತೆರವುಗೊಳಿಸಿದರು. ಜೊತೆಗೆ ಶಿಲ್ಟ್ ಅಂಡ್ ಟ್ರ್ಯಾಕ್ಟರ್ ಮೂಲಕ ರಸ್ತೆ ಬದಿ ಬಿದ್ದಿದ್ದ ತ್ಯಾಜ್ಯ/ಕಟ್ಟಡ ಭಗ್ನಾವಶೇಷಗಳನ್ನು ತೆರವುಗೊಳಿಸಲಾಯಿತು.

ಈ ವೇಳೆ ಸ್ಥಳೀಯ ಶಾಸಕರಾದ ಉದಯ್ ಬಿ. ಗರುಡಾಚಾರ್, ವಲಯ ಆಯುಕ್ತರಾದ ಜಯರಾಮ್ ರಾಯಪುರ, ವಲಯ ಜಂಟಿ ಆಯುಕ್ತರಾದ ಜಗದೀಶ್ ನಾಯ್ಕ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರಾದ ಮೋಹನ್ ಕೃಷ್ಣಾ, ಯೋಜನಾ ವಿಭಾಗದ ಮುಖ್ಯ ಅಭಿಯಂತರರಾದ ಲೋಕೇಶ್, ಪಾಲಿಕೆಯ ವಿದ್ಯುತ್, ಘನತ್ಯಾಜ್ಯ, ಆರೋಗ್ಯ, ಅರಣ್ಯ ವಿಭಾಗ, ಬೆಸ್ಕಾಂ, ಜಲಮಂಡಳಿ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related