ಪ್ರವಾಹ ; ಹಣ್ಣು-ಹಾಲು ಪೂರೈಕೆ

ಪ್ರವಾಹ ; ಹಣ್ಣು-ಹಾಲು ಪೂರೈಕೆ

ಕಲಬುರಗಿ : ಭೀಮಾ ನದಿ ಪ್ರವಾಹದಿಂದ ತ್ತತರಿಸಿರುವ ಸಂತ್ರಸ್ತರಿಗೆ ಆಶ್ರಯ ನೀಡಲು ತೆರೆದಿರುವ ಕಾಳಜಿ ಕೇಂದ್ರದಲ್ಲಿ ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನ, ರಾತ್ರಿ ಊಟದ ಜೊತೆಗೆ ಹಣ್ಣು, ಹಾಲು ನೀಡುವ ಮೂಲಕ ಜಿಲ್ಲಾಡಳಿತ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ.

ಭೀಮಾ ನದಿಗೆ ಹೆಚ್ಚಿನ ನೀರು ಹರಿಸಿದ ಪರಿಣಾಮ ಪ್ರವಾಹ ಪೀಡಿತ ಪ್ರದೇಶವಾಗಿ ಮಾರ್ಪಟ್ಟಿರುವ ಅಫಜಲಪೂರ ತಾಲೂಕಿನ ಸೊನ್ನ, ಶಿರವಾಳ ಗ್ರಾಮಗಳ ಕಾಳಜಿ ಕೇಂದ್ರಗಳಲ್ಲಿ ಜನರಿಗೆ ಉತ್ತಮ ಆಹಾರವನ್ನೂ ನೀಡಲಾಗುತ್ತಿದೆ.

ಕಾಳಜಿ ಕೇಂದ್ರದಲ್ಲಿ ಉತ್ತಮ ಆಹಾರ ವ್ಯವಸ್ಥೆ ಶಿರವಾಳ ಗ್ರಾಮದಲ್ಲಿ ಸುಮಾರು 15ಕ್ಕೂ ಹೆಚ್ಚಿನ ಮನೆಗಳು ಹಿನ್ನೀರಿನಿಂದ ಬಾಧಿತವಾಗಿದ್ದು, ಸುಮಾರು 70 ಜನರಿಗೆ ಗ್ರಾಮದ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರದಲ್ಲಿ ಊಟೋಪಚಾರ ಮಾಡಲಾಗುತ್ತಿದೆ ಎಂದು ಗೌರ (ಬಿ) ಗ್ರಾಮ ಪಂಚಾಯತಿಯ ಪಿ.ಡಿ.ಓ ಶಂಕರ ಧಾಮಣ್ಣ ತಿಳಿಸಿದರು.

Related