ಮೈಸೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರಿ ಗ್ರಾಸವಾಗಿ ಚರ್ಚೆಯಾಗುತ್ತಿರುವ ವಿಷಯ ಎಂದರೆ ಅದು ಮುಡಾ ಹಗರಣ.
ಹೌದು, ಮುಡಾ ಹಗಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಈಗಾಗಲೇ ವಿಪಕ್ಷ ನಾಯಕರುಗಳು ಹೋರಾಟ ಮಾಡುತ್ತಿದ್ದು ಇದರ ಜೊತೆಗೆ ರಾಜ್ಯಪಾಲರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಇದೀಗ ಮುಡಾ ಹಗಣಕ್ಕೆ ಮತ್ತೊಂದು ದೊಡ್ಡ ಟ್ವಿಸ್ಟ್ ಸಿಕ್ಕಂತಾಗಿದೆ.
ಯೆಸ್..ಮುಡಾ ಹಗಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಅವರು ಪ್ರತಿಕ್ರಿಯೆ ಸಿದ್ದು ಇದೀಗ ಅವರು ಬರೆದ ಪತ್ರ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ.
ಸಿದ್ದರಾಮಯ್ಯ ಪತ್ನಿ ತಮ್ಮ ಭೂಮಿಗೆ 50:50 ಅನುಪಾತದಲ್ಲಿ ಪರ್ಯಾಯ ನಿವೇಶನ ಕೊಡುವಂತೆ ಮನವಿ ಮಾಡಿ ಸಲ್ಲಿಸಿರುವ ಪತ್ರವನ್ನೇ ತಿರುಚಿದ್ದಾರೆಯೇ ಎಂಬ ಅನುಮಾನ ಇದೀಗ ಮೂಡಿದೆ. ಯಾವ ಸ್ಥಳದಲ್ಲಿ ಪರ್ಯಾಯ ನಿವೇಶನ ಕೊಡಬೇಕು ಎಂದು ಬರೆದ ಜಾಗಕ್ಕೆ ವೈಟ್ನರ್ ಹಾಕಿರುವುದು ಬೆಳಕಿಗೆ ಬಂದಿದೆ.
ವಿಜಯನಗರದ 2 ಮತ್ತು ಮೂರನೇ ಹಂತದಲ್ಲೇ ನಿವೇಶನ ಕೊಡುವಂತೆ ಸಿದ್ದರಾಮಯ್ಯ ಪತ್ನಿ ಕೇಳಿದ್ದರೇ ಎಂಬ ಪ್ರಶ್ನೆಯೂ ಈಗ ಉದ್ಭವಿಸಿದೆ. ವೈಟ್ನರ್ ಹಾಕಿ ಅಳಿಸಿರುವುದರಿಂದ ಈ ಪ್ರಶ್ನೆ ಮೂಡಿದೆ.
ಇದೀಗ ಸಿಎಂ ಪತ್ನಿ ಬರೆದ ಪತ್ರ ಬಹಿರಂಗವಾಗಿರುವುದರಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಂತಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಿಎಂ ಪತ್ನಿ ಪಾರ್ವತಮ್ಮ ಬರೆದ ಪತ್ರ ಲಭ್ಯವಾಗಿದ್ದು, ಪ್ರಾಧಿಕಾರ ಬಡಾವಣೆ ನಿರ್ಮಿಸಿ ನಿವೇಶನ ಹಂಚಿದ ಮೇಲೆ ಆ ಜಮೀನನ್ನು ಸಿಎಂ ಪತ್ನಿಯ ಸಹೋದರ ಖರೀದಿಸಿದ್ದರೇ ಎಂಬ ಪ್ರಶ್ನೆಗೂ ಕಾರಣವಾಗಿದೆ. ಸಿಎಂ ಪತ್ನಿ ಪ್ರಾಧಿಕಾರಕ್ಕೆ ಬರೆದ ಪತ್ರದಲ್ಲಿ ಅದರ ಸ್ಪಷ್ಟ ಉಲ್ಲೇಖ. ಇದನ್ನೂ ಓದಿ: ರಾಜ್ಯಪಾಲರ ವಿರುದ್ದ ಮುನಿಯಪ್ಪ ರವರ ನೇತೃತ್ವದಲ್ಲಿ ಪ್ರತಿಭಟನೆ
ಪತ್ರದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 2001 ರಲ್ಲೇ ದೇವನೂರು ಮೂರನೇ ಹಂತದ ಬಡಾವಣೆ ನಿರ್ಮಾಣ ಮಾಡಿ ನಿವೇಶನ ಹಂಚಿದೆ ಎಂದು ಪತ್ರದಲ್ಲಿ ನಮೂದಾಗಿದೆ. ಕೆಸರೆ ಗ್ರಾಮದ ಜಮೀನನ್ನು ದೇವನೂರು ಮೂರನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸ್ವಾಧೀನ ಪಡಿಸಿಕೊಂಡಿತ್ತು. ಆದರೆ, ಈ ಜಮೀನನ್ನು ಸಿಎಂ ಪತ್ನಿ ಸಹೋದರ ಖರೀದಿ ಮಾಡಿರುವುದು 2004 ರಲ್ಲಿ. ಹಾಗಾದರೆ ಸ್ವಾಧೀನ ಪಡಿಸಿಕೊಂಡು ನಿವೇಶನ ಹಂಚಿದ ಜಾಗವನ್ನು ಸಿಎಂ ಸಹೋದರ ಹೇಗೆ ಖರೀದಿ ಮಾಡಿದರು ಎಂಬ ಪ್ರಶ್ನೆಯೂ ಉದ್ಭವಿಸಿದೆ.
ಒಟ್ಟಿನಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ತಿರುವುಪಡೆದುಕೊಳ್ಳುತ್ತಿದ್ದು ಇದು ವಿರೋಧ ಪಕ್ಷದ ನಾಯಕರಿಗಳಿಗೆ ಹಸಿದ ಹೊಟ್ಟೆಗೆ ಆಹಾರ ಸಿಕ್ಕಂತಾಗಿದೆ.